Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 18:14 - ಕನ್ನಡ ಸಮಕಾಲಿಕ ಅನುವಾದ

14 ಹೀಗೆಯೇ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ ತನ್ನ ಸಮಸ್ತ ಜನರಿಗೂ ನೀತಿ ನ್ಯಾಯಗಳಿಂದ ನಡೆಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದಾವೀದನು ಇಸ್ರಾಯೇಲರೆಲ್ಲರ ಅರಸನಾಗಿ ಎಲ್ಲಾ ಪ್ರಜೆಗಳಿಗೂ ಧರ್ಮತಪ್ಪದೆ ನೀತಿ ಮತ್ತು ನ್ಯಾಯದಿಂದ ಕಾರ್ಯ ನಿರ್ವಹಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದಾವೀದನು ಇಸ್ರಯೇಲರ ಅರಸನಾಗಿ ಪ್ರಜೆಗಳೆಲ್ಲರನ್ನು ಧರ್ಮಾನುಸಾರ, ನ್ಯಾಯಯುತವಾಗಿ ನಡೆಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ದಾವೀದನು ಇಸ್ರಾಯೇಲ್ಯರೆಲ್ಲರ ಅರಸನಾಗಿ ಎಲ್ಲಾ ಪ್ರಜೆಗಳಿಗೂ ಧರ್ಮತಪ್ಪದೆ ನ್ಯಾಯತೀರಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇಸ್ರೇಲರೆಲ್ಲರಿಗೆ ಅರಸನಾಗಿದ್ದ ದಾವೀದನು ಪಕ್ಷಪಾತವಿಲ್ಲದೆ ನ್ಯಾಯತೀರಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 18:14
13 ತಿಳಿವುಗಳ ಹೋಲಿಕೆ  

“ ‘ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು. ಆತನು ದೇಶದಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.


ನೀತಿಯೂ, ನ್ಯಾಯವೂ ನಿಮ್ಮ ಸಿಂಹಾಸನದ ಅಸ್ತಿವಾರವಾಗಿವೆ. ಪ್ರೀತಿಯೂ, ಸತ್ಯತೆಯೂ ನಿಮ್ಮ ಮುಂದೆ ಹೋಗುತ್ತವೆ.


“ಹೆಚ್ಚು ಹೆಚ್ಚು ದೇವದಾರುಗಳನ್ನು ಹೊಂದಲು ಅದು ನಿಮ್ಮನ್ನು ರಾಜನನ್ನಾಗಿಸುತ್ತದೆಯೇ? ನಿನ್ನ ತಂದೆ ಉಂಡು, ಕುಡಿದು ನ್ಯಾಯವನ್ನೂ, ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾಗಲಿಲ್ಲವೋ?


ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.


ಯುದ್ಧಕ್ಕೆ ಸಿದ್ಧರಾದ ಈ ಸಮಸ್ತ ಸೈನಿಕರು ದಾವೀದನನ್ನು ಸಮಸ್ತ ಇಸ್ರಾಯೇಲರ ಮೇಲೆ ಅರಸನಾಗಿ ಮಾಡಲು ಹೆಬ್ರೋನಿಗೆ ಪೂರ್ಣಮನಸ್ಸಿನಿಂದ ಬಂದರು. ಇದಲ್ಲದೆ ಇಸ್ರಾಯೇಲಿನಲ್ಲಿದ್ದ ಮಿಕ್ಕಾದವರೆಲ್ಲರು ದಾವೀದನನ್ನು ಅರಸನಾಗಿ ಮಾಡಲು ಒಂದೇ ಮನಸ್ಸುಳ್ಳವರಾಗಿದ್ದರು.


ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ ತನ್ನ ಸಮಸ್ತ ಜನರಿಗೂ ನೀತಿ ನ್ಯಾಯಗಳಿಂದ ನಡೆಸುತ್ತಿದ್ದನು.


ಎದೋಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಇದರಿಂದ, ಎದೋಮ್ಯರೆಲ್ಲರು ದಾವೀದನಿಗೆ ಅಧೀನರಾದರು. ದಾವೀದನು ಹೋದಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.


ಚೆರೂಯಳ ಮಗ ಯೋವಾಬನು ಸೈನ್ಯದ ಅಧಿಪತಿಯಾಗಿದ್ದನು. ಅಹೀಲೂದನ ಮಗ ಯೆಹೋಷಾಫಾಟನು ಆಸ್ಥಾನದ ಆಗುಹೋಗುಗಳನ್ನು ದಾಖಲಿಸುವವನಾಗಿದ್ದನು.


ಇಷಯನ ಮಗ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳಿದನು.


ದೇವರೇ, ನಿಮ್ಮ ನ್ಯಾಯವನ್ನು ಅರಸನಿಗೆ ಕಲಿಸಿಕೊಡಿರಿ. ನಿಮ್ಮ ನೀತಿಯನ್ನು ರಾಜಕುಮಾರನಿಗೆ ಕಲಿಸಿಕೊಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು