Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 18:17 - ಕನ್ನಡ ಸಮಕಾಲಿಕ ಅನುವಾದ

17 ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ, ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು. ದಾವೀದನ ಪುತ್ರರು ಅರಸನ ಬಳಿಯಲ್ಲಿ ಪ್ರಧಾನರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋಯಾದನ ಮಗನಾದ ಬೆನಾಯನು, ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಮುಖ್ಯಸ್ಥನಾದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಯೆಹೋಯಾದಾವನ ಮಗ ಬಿನಾಯನು ‘ಕೆರೇತ್ಯ’, ‘ಪೆಲೇತ್ಯ’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯ ಪೆಲೇತ್ಯ ಎಂಬ ಕಾವಲುದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳಿಗೆ ಬೆನಾಯನು ಅಧಿಕಾರಿಯಾಗಿದ್ದನು. ಬೆನಾಯನು ಯೆಹೋಯಾದನ ಮಗ. ದಾವೀದನ ಗಂಡುಮಕ್ಕಳು ಮುಖ್ಯ ಸ್ಥಾನಗಳಲ್ಲಿದ್ದು ದಾವೀದನ ಸೇವೆಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 18:17
14 ತಿಳಿವುಗಳ ಹೋಲಿಕೆ  

ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು. ದಾವೀದನ ಪುತ್ರರು ಸಮಾಲೋಚಕರಾಗಿದ್ದರು.


ಅವನ ಸಮಸ್ತ ಸೇವಕರೂ, ಸಮಸ್ತ ಕೆರೇತ್ಯರೂ, ಸಮಸ್ತ ಪೆಲೇತ್ಯರೂ ಅವನ ಹಿಂದೆ ಗತ್ ಊರಿನಿಂದ ಅವನ ಸಂಗಡ ಬಂದ ಗಿತ್ತೀಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು.


ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವ ದೇವರ ವಾಕ್ಯವು ನಿನಗೆ ವಿರುದ್ಧವಾಗಿದೆ, “ನಿನ್ನಲ್ಲಿ ನಿವಾಸಿಯೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು,” ಎಂದು ಅವರು ಹೇಳುತ್ತಾರೆ.


ಅವರು ಆರೋನನ ವಂಶಸ್ಥರ ಕೈಕೆಳಗಿದ್ದುಕೊಂಡು ಯೆಹೋವ ದೇವರ ಆಲಯದ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳಲ್ಲಿಯೂ ಸಮಸ್ತ ಪರಿಶುದ್ಧ ಸಾಮಗ್ರಿಗಳನ್ನು ಶುದ್ಧ ಮಾಡುವುದರಲ್ಲಿಯೂ,


ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ, ಪ್ರವಾದಿ ನಾತಾನನನ್ನೂ, ಯೆಹೋಯಾದಾವನ ಮಗ ಬೆನಾಯನನ್ನೂ, ಕೆರೇತ್ಯರನ್ನೂ, ಪೆಲೇತ್ಯರನ್ನೂ ಕಳುಹಿಸಿದ್ದಾನೆ. ಅವರು ಅವನನ್ನು ಅರಸನ ಹೇಸರಕತ್ತೆಯ ಮೇಲೆ ಕೂಡಿಸಿಕೊಂಡು ಹೋಗಿ,


ಆಗ ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ, ಯೆಹೋಯಾದಾವನ ಮಗ ಬೆನಾಯನೂ, ಕೆರೇತ್ಯರೂ, ಪೆಲೇತ್ಯರೂ ಹೋಗಿ, ಸೊಲೊಮೋನನನ್ನು ಅರಸನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನಿಗೆ ಕರೆತಂದರು.


ಯೋವಾಬನು ಇಸ್ರಾಯೇಲಿನ ಸಮಸ್ತ ಸೈನ್ಯದ ಅಧಿಪತಿಯಾಗಿದ್ದನು. ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು.


ಹಾಗೆಯೇ ಅವನ ಹಿಂದೆ ಯೋವಾಬನ ಜನರೂ, ಕೆರೇತ್ಯರೂ, ಪೆಲೇತ್ಯರೂ, ಸಮಸ್ತ ಪರಾಕ್ರಮಶಾಲಿಗಳೂ ಅಬೀಷೈಯನ ನೇತೃತ್ವದಲ್ಲಿ ಬಿಕ್ರಿಯ ಮಗ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು.


ನಾವು ಕೆರೇತ್ಯರ ದಕ್ಷಿಣ ಪ್ರಾಂತದ ಮೇಲೆಯೂ, ಯೆಹೂದದ ಮೇರೆಯ ಮೇಲೆಯೂ, ಕಾಲೇಬನ ದಕ್ಷಿಣ ಪ್ರಾಂತದ ಮೇಲೆಯೂ ದಾಳಿಮಾಡಿ, ಚಿಕ್ಲಗ್ ಊರನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು,” ಎಂದನು.


ಅಹೀಟೂಬನ ಮಗ ಚಾದೋಕನೂ, ಅಬಿಯಾತರನ ಮಗ ಅಹೀಮೆಲೆಕನೂ ಯಾಜಕರಾಗಿದ್ದರು. ಶವ್ಷನು ಕಾರ್ಯದರ್ಶಿಯಾಗಿದ್ದನು.


ಇದರ ತರುವಾಯ, ಅಮ್ಮೋನಿಯರ ಅರಸನಾದ ನಾಹಾಷನು ಮರಣಹೊಂದಿದನು; ಅವನಿಗೆ ಬದಲಾಗಿ ಅವನ ಮಗನು ಅರಸನಾದನು.


ಯೆಹೂದನ ಮಗ ಜೆರಹನ ಮಕ್ಕಳಲ್ಲಿ ಒಬ್ಬನಾಗಿರುವ ಮೆಷೇಜಬೇಲನ ಮಗನಾದ ಪೆತಹ್ಯನು ಜನರಿಗೋಸ್ಕರ ಸಕಲ ಕಾರ್ಯಗಳಲ್ಲಿ ಅರಸನ ಪ್ರತಿನಿಧಿಯಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು