Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 18:2 - ಕನ್ನಡ ಸಮಕಾಲಿಕ ಅನುವಾದ

2 ಹಾಗೆಯೇ ಅವನು ಮೋವಾಬ್ಯರನ್ನು ಸಹ ಸೋಲಿಸಿದನು, ಮೋವಾಬ್ಯರು ದಾವೀದನಿಗೆ ಅಧೀನರಾಗಿ ಕಪ್ಪಕೊಡುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿದನು. ಅವರು ದಾವೀದನಿಗೆ ದಾಸರಾಗಿ ಕಪ್ಪಕೊಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಮೇಲೆ ಮೋವಾಬ್ಯರನ್ನು ಸೋಲಿಸಿದನು. ಅವರು ದಾವೀದನಿಗೆ ಅಧೀನರಾಗಿ ಅವನಿಗೆ ಕಪ್ಪಕೊಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿದನು; ಅವರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅನಂತರ ದಾವೀದನು ಮೋವಾಬ್ಯರ ಸಂಗಡ ಯುದ್ಧಮಾಡಿ ಸೋಲಿಸಿದನು. ಅವರು ದಾವೀದನ ಸೇವಕರಾಗಿ ಕಪ್ಪ ಕೊಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 18:2
14 ತಿಳಿವುಗಳ ಹೋಲಿಕೆ  

ದೇಶವನ್ನು ಆಳುವವನಿಗೆ ಕಪ್ಪವಾಗಿ ಕೊಡತಕ್ಕ ಕುರಿಮರಿಯನ್ನು ಸೆಲ ಬಂಡೆಯಿಂದ ಮರುಭೂಮಿಯ ಕಡೆಗೆ, ಚೀಯೋನ್ ಪುತ್ರಿಯರ ಪರ್ವತಕ್ಕೆ ಕಳುಹಿಸಿರಿ.


ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಟಿಯರ ಇಳಿಜಾರು ಪ್ರದೇಶದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆ ಮಾಡುವರು, ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ದಾಳಿಮಾಡುವರು ಮತ್ತು ಅಮ್ಮೋನಿಯರು ಅವರಿಗೆ ಅಧೀನರಾಗುವರು.


ಮೋವಾಬ್ ನನ್ನ ಸ್ನಾನ ಪಾತ್ರೆಯು, ಎದೋಮ್ ನನ್ನ ಕೆರಗಳ ಸ್ಥಳ. ಫಿಲಿಷ್ಟಿಯರ ಮೇಲೆ ಜಯೋತ್ಸಾಹ ಮಾಡುವೆನು.”


ಅವರೆಲ್ಲರೂ ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ, ಬಂಗಾರದ ಪಾತ್ರೆಗಳನ್ನೂ, ವಸ್ತ್ರಗಳನ್ನೂ, ಆಯುಧಗಳನ್ನೂ, ಸುಗಂಧಗಳನ್ನೂ, ಕುದುರೆಗಳನ್ನೂ, ಹೇಸರಗತ್ತೆಗಳನ್ನೂ, ವರುಷ ವರುಷವೂ ನೇಮಕವಾದ ಪ್ರಕಾರ ತರುತ್ತಿದ್ದರು.


ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ, ಬಹಳಷ್ಟು ಬಂಗಾರವನ್ನೂ, ಅಮೂಲ್ಯವಾದ ರತ್ನಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.


ಹಾಗೆಯೇ ದಾವೀದನು ಮೋವಾಬ್ಯರನ್ನು ಸಹ ಸೋಲಿಸಿದನು. ಸೆರೆಯಾಳುಗಳನ್ನು ನೆಲದ ಮೇಲೆ ಹಗ್ಗದಿಂದ ಅಳತೆ ಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ, ಒಂದು ಪಾಲನ್ನು ಉಳಿಸಿದನು. ಹೀಗೆ ಮೋವಾಬ್ಯರು ದಾವೀದನಿಗೆ ಅಧೀನರಾಗಿ ಕಪ್ಪಕೊಡುವವರಾದರು.


ಆದರೆ ಕೆಲವು ಪುಂಡಪೋಕರಿಗಳು, “ಇವನು ನಮ್ಮನ್ನು ರಕ್ಷಿಸುವುದೇನು?” ಎಂದು ಅವನನ್ನು ತಿರಸ್ಕರಿಸಿದರು. ಅವರು ಅವನಿಗೆ ಕಾಣಿಕೆಯನ್ನು ತೆಗೆದುಕೊಂಡು ಬರಲಿಲ್ಲ. ಅವನು ಕೇಳದ ಹಾಗೆ ಇದ್ದನು.


“ನಾನು ಅವನನ್ನು ನೋಡುವೆನು, ಈಗಲ್ಲ. ಅವನನ್ನು ದೃಷ್ಟಿಸುವೆನು, ಸಮೀಪದಲ್ಲಿ ಅಲ್ಲ. ಯಾಕೋಬನಿಂದ ನಕ್ಷತ್ರ ಉದಯಿಸುವುದು. ಇಸ್ರಾಯೇಲನಿಂದ ರಾಜದಂಡ ಏಳುವುದು. ಅದು ಮೋವಾಬಿನ ಮೂಲೆಗಳನ್ನು ಹೊಡೆದು, ಸೇಥನ ಎಲ್ಲಾ ಮಕ್ಕಳನ್ನು ಸಂಹರಿಸುವುದು.


ಇದರ ತರುವಾಯ ದಾವೀದನು ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿ, ಅವರಿಂದ ಗತ್ ಪಟ್ಟಣವನ್ನೂ ಅದರ ಸುತ್ತಲಿನ ಗ್ರಾಮಗಳನ್ನೂ ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.


ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿರುವಾಗ, ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದದೆಜೆರನನ್ನು ಸೋಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು