Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 18:8 - ಕನ್ನಡ ಸಮಕಾಲಿಕ ಅನುವಾದ

8 ಇದಲ್ಲದೆ ಹದದೆಜೆರನ ಪಟ್ಟಣಗಳಾದ ಟಿಭತಿನಿಂದಲೂ, ಕೂನ್‌ದಿಂದಲೂ ದಾವೀದನು ಅತ್ಯಧಿಕವಾಗಿ ಕಂಚನ್ನು ತೆಗೆದುಕೊಂಡು ಬಂದನು. ಅದರಿಂದ ಸೊಲೊಮೋನನು ಕಂಚಿನ ಕೊಳವನ್ನೂ, ಸ್ತಂಭಗಳನ್ನೂ, ವಿವಿಧ ಪಾತ್ರೆಗಳನ್ನೂ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ ದಾವೀದನು ಹದರೆಜರನ ಟಿಭತ್ ಮತ್ತು ಕೂನ್ ಎಂಬ ಪಟ್ಟಣಗಳಿಂದ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು. ಸೊಲೊಮೋನನು ಆ ತಾಮ್ರದಿಂದ ಕಂಚಿನ ಕಡಲೆಂಬ ಪಾತ್ರೆಯನ್ನೂ, ಕಂಬಗಳನ್ನೂ ಮತ್ತು ಬೇರೆ ಸಾಮಾನುಗಳನ್ನು ಇದೇ ತಾಮ್ರದಿಂದ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇದಲ್ಲದೆ, ಹದರೆಜೆರನ ಪಟ್ಟಣಗಳಾದ ಟಿಭತಿನಿಂದಲೂ ಕೂನಿಂದಲೂ ಹೇರಳ ತಾಮ್ರವನ್ನು ತೆಗೆದುಕೊಂಡು ಬಂದನು. ಸೊಲೊಮೋನನು ‘ಕಂಚಿನ ಕಡಲೆಂಬ ಪಾತ್ರೆ’ಯನ್ನೂ ಕಂಬಗಳನ್ನೂ ಇನ್ನಿತರ ಸಾಮಾನುಗಳನ್ನೂ ಮಾಡಿಸಿದ್ದು ಆ ತಾಮ್ರದಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ಹದರೆಜರನ ಪಟ್ಟಣಗಳಾದ ಟಿಭತಿನಿಂದಲೂ ಕೂನಿಂದಲೂ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು. ಸೊಲೊಮೋನನು ಆ ತಾಮ್ರದಿಂದ ಸಮುದ್ರವೆನಿಸಿಕೊಳ್ಳುವ ಪಾತ್ರೆಯನ್ನೂ ಕಂಬಗಳನ್ನೂ ಬೇರೆ ಸಾಮಾನುಗಳನ್ನೂ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಲ್ಲದೆ ಟಿಭತ್ ಮತ್ತು ಕೂನ್ ಪಟ್ಟಣಗಳಿಂದ ಬಹಳ ತಾಮ್ರವನ್ನು ತೆಗೆದುಕೊಂಡನು. ಇವುಗಳಿಂದ ಸೊಲೊಮೋನನು ತಾಮ್ರದ ತೊಟ್ಟಿ, ತಾಮ್ರದ ಕಂಬ ಮತ್ತು ದೇವಾಲಯದ ಬೇರೆ ಸಾಮಾಗ್ರಿಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 18:8
10 ತಿಳಿವುಗಳ ಹೋಲಿಕೆ  

ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ, ಬೇರೋತೈಯಿಂದಲೂ ಅರಸನಾದ ದಾವೀದನು ಅತ್ಯಧಿಕವಾಗಿ ಕಂಚನ್ನು ತೆಗೆದುಕೊಂಡು ಬಂದನು.


“ಇಗೋ, ಕಷ್ಟಪಟ್ಟು ನಾನು ಯೆಹೋವ ದೇವರ ಆಲಯಕ್ಕೋಸ್ಕರ ಮೂರು ಸಾವಿರದ ನಾನೂರ ಎಪ್ಪತ್ತು ಮೆಟ್ರಿಕ್ ಟನ್ ಬಂಗಾರವನ್ನೂ, ಮೂವತ್ತ ನಾಲ್ಕು ಸಾವಿರದ ಐನೂರು ಮೆಟ್ರಿಕ್ ಟನ್ ಬೆಳ್ಳಿಯನ್ನೂ, ಲೆಕ್ಕವಿಲ್ಲದಷ್ಟು ಕಂಚನ್ನೂ, ಕಬ್ಬಿಣವನ್ನೂ ಮರಗಳನ್ನೂ, ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಸೇರಿಸಬಹುದು.


ಆಗ ದಾವೀದನು ಹದದೆಜೆರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು, ಅವುಗಳನ್ನು ಯೆರೂಸಲೇಮಿಗೆ ತಂದನು.


ದಾವೀದನು ಚೋಬದ ಅರಸನಾದ ಹದದೆಜೆರನ ಸಮಸ್ತ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವನ್ನು ಹಮಾತಿನ ಅರಸನಾದ ತೋವು ಕೇಳಿದಾಗ,


ಇದಲ್ಲದೆ ಹೂರಾಮನು ಪಾತ್ರೆಗಳನ್ನೂ, ಸಲಿಕೆಗಳನ್ನೂ, ಬಟ್ಟಲುಗಳನ್ನೂ ಮಾಡಿದನು. ಯೆಹೋವ ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊಮೋನನು ಒಪ್ಪಿಸಿದ ಎಲ್ಲಾ ಕೆಲಸಗಳನ್ನು ಹೂರಾಮನು ಮಾಡಿ ತೀರಿಸಿದನು:


ಇದಲ್ಲದೆ ಅವನು ಕಟ್ಟಡದ ಪ್ರವೇಶದ್ವಾರದಲ್ಲಿ ಎರಡು ಸ್ತಂಭಗಳನ್ನು ನಿರ್ಮಿಸಿದನು, ಪ್ರತಿಯೊಂದೂ ಹದಿನೈದು ಮೀಟರ್ ಎಪ್ಪತ್ತೈದು ಸೆಂಟಿಮೀಟರ್ ಎತ್ತರ, ಪ್ರತಿಯೊಂದರ ಮೇಲೆಯೂ ನಿರ್ಮಿಸಲಾದ ಪ್ರತಿಯೊಂದು ತಲೆಗಳು ಎರಡೂವರೆ ಮೀಟರ್ ಉದ್ದವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು