1 ಪೂರ್ವಕಾಲ ವೃತ್ತಾಂತ 19:16 - ಕನ್ನಡ ಸಮಕಾಲಿಕ ಅನುವಾದ16 ಅರಾಮ್ಯರಿಗೆ ತಾವು ಇಸ್ರಾಯೇಲರಿಂದ ಸೋತುಹೋದೆವೆಂದು ತಿಳಿದಾಗ, ಅವರು ದೂತರನ್ನು ಕಳುಹಿಸಿ, ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ಇತರ ಅರಾಮ್ಯರನ್ನು ಕರೆಯಿಸಿಕೊಂಡರು. ಹದದೆಜೆರನ ಸೇನಾಧಿಪತಿಯಾದ ಶೋಫಕನು ಅವರ ನಾಯಕನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅರಾಮ್ಯರಿಗೆ ತಾವು ಇಸ್ರಾಯೇಲರಿಂದ ಅಪಜಯ ಹೊಂದಿದ್ದೇವೆಂದು ಗೊತ್ತಾದಾಗ ಅವರು ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅರಾಮ್ಯರನ್ನು ಕರೆಕಳುಹಿಸಿದರು. ಹದರೆಜರನ ಸೇನಾಧಿಪತಿಯಾದ ಶೋಫಕನು ಅವರ ನಾಯಕನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸಿರಿಯಾದವರಿಗೆ ತಮ್ಮ ಸೈನ್ಯ ಇಸ್ರಯೇಲರಿಂದ ಪರಾಭವಗೊಂಡಿತೆಂದು ಗೊತ್ತಾಯಿತು. ಎಂದೇ ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಸಿರಿಯಾದವರನ್ನು ಕರೇ ಕಳುಹಿಸಿದರು. ಹದರೆಜೆರನ ಸೇನಾಪತಿಯಾದ ಶೋಫಕನು ಅವರ ನಾಯಕನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅರಾಮ್ಯರಿಗೆ ತಾವು ಇಸ್ರಾಯೇಲ್ಯರಿಂದ ಅಪಜಯ ಹೊಂದಿದೆವೆಂದು ಗೊತ್ತಾದಾಗ ಅವರು ಯೂಫ್ರೇಟೀಸ್ ನದಿಯ ಆಚೆಯಲ್ಲಿದ್ದ ಅರಾಮ್ಯರನ್ನು ಕರೇ ಕಳುಹಿಸಿದರು. ಹದರೆಜರನ ಸೇನಾಪತಿಯಾದ ಶೋಫಕನು ಅವರ ನಾಯಕನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅರಾಮ್ಯರು ತಾವು ಇಸ್ರೇಲರಿಂದ ಸೋತುಹೋದದ್ದನ್ನು ನೋಡಿ ಯೂಫ್ರೇಟೀಸ್ ನದಿಯ ಪೂರ್ವದಲ್ಲಿದ್ದ ಅರಾಮ್ಯರನ್ನು ಸಹಾಯಕ್ಕಾಗಿ ಕರೆಯಿಸಿದರು. ಶೋಫಕನು ಹದದೆಜರನ ಸೇನಾಧಿಪತಿಯಾಗಿದ್ದನು. ಅಧ್ಯಾಯವನ್ನು ನೋಡಿ |