1 ಪೂರ್ವಕಾಲ ವೃತ್ತಾಂತ 19:18 - ಕನ್ನಡ ಸಮಕಾಲಿಕ ಅನುವಾದ18 ಆದರೆ ಅರಾಮ್ಯರು ಇಸ್ರಾಯೇಲರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ಸಾವಿರ ರಥಗಳನ್ನೂ ಹಾಳು ಮಾಡಿ, ನಲವತ್ತು ಸಾವಿರ ಕಾಲಾಳುಗಳನ್ನೂ, ಅವರ ಸೇನಾಧಿಪತಿಯಾದ ಶೋಫಕನನ್ನೂ ಕೊಂದುಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅರಾಮ್ಯರು ಯುದ್ಧಕ್ಕೆ ನಿಂತಾಗ ಇಸ್ರಾಯೇಲರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳುಸಾವಿರ ರಥಗಳನ್ನು ಹಾಳುಮಾಡಿ, ನಲ್ವತ್ತು ಸಾವಿರ ಕಾಲಾಳುಗಳನ್ನು ಕೊಂದುಬಿಟ್ಟನು. ಅವನು ಸೇನಾಧಿಪತಿಯಾದ ಶೋಫಕನನ್ನೂ ಕೊಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸಿರಿಯಾದವರು ಯುದ್ಧಕ್ಕೆ ನಿಂತಾಗ ಇಸ್ರಯೇಲರ ಮುಂದೆ ಸೋತು ಓಡಿಹೋದರು;ದಾವೀದನು ಸಿರಿಯಾದವರ ಏಳುಸಾವಿರ ರಥಗಳನ್ನು ಹಾಳುಮಾಡಿದನು. ನಲವತ್ತು ಸಾವಿರ ಮಂದಿ ಕಾಲಾಳುಗಳನ್ನು ಸದೆಬಡಿದನು. ಸೇನಾಪತಿಯಾದ ಶೋಫಕನನ್ನೂ ಕೊಂದುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅರಾಮ್ಯರು ಯುದ್ಧಕ್ಕೆ ನಿಂತಾಗ ಇಸ್ರಾಯೇಲ್ಯರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳು ಸಾವಿರ ರಥಗಳನ್ನು ಹಾಳು ಮಾಡಿ ನಾಲ್ವತ್ತು ಸಾವಿರ ಮಂದಿ ಕಾಲಾಳುಗಳನ್ನು ಕೊಂದುಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅರಾಮ್ಯರು ಇಸ್ರೇಲರ ಎದುರು ನಿಲ್ಲಲಾರದೆ ಬೆನ್ನುಹಾಕಿ ಓಡಿದರು. ಆ ದಿವಸ ದಾವೀದನೂ ಅವನ ಸೈನಿಕರೂ ಅರಾಮ್ಯರ ಏಳು ಸಾವಿರ ಮಂದಿ ರಾಹುತರನ್ನೂ ನಲವತ್ತು ಸಾವಿರ ಮಂದಿ ಕಾಲಾಳುಗಳನ್ನೂ ಕೊಂದರು. ಇವರಲ್ಲಿ ಅರಾಮ್ಯರ ಸೇನಾಪತಿಯಾದ ಶೋಫಕನೂ ಕೊಲ್ಲಲ್ಪಟ್ಟನು. ಅಧ್ಯಾಯವನ್ನು ನೋಡಿ |