Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:18 - ಕನ್ನಡ ಸಮಕಾಲಿಕ ಅನುವಾದ

18 ಹೆಚ್ರೋನನ ಮಗನಾದ ಕಾಲೇಬನು ಅಜೂಬಳಿಂದಲೂ ಯೆರ್ಯೋತಳಿಂದಲೂ ಮಕ್ಕಳನ್ನು ಪಡೆದನು. ಇವಳ ಪುತ್ರರು: ಯೇಷೆರನು, ಶೋಬಾಬನು, ಅರ್ದೋನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೆಚ್ರೋನನ ಮಗ ಕಾಲೇಬ. ಇವನು ತನ್ನ ಹೆಂಡತಿ ಅಜೂಬಳಿಂದಲೂ ಮತ್ತು ಯೆರ್ಯೋತಳಿಂದಲೂ ಮಕ್ಕಳನ್ನು ಪಡೆದನು. ಆಕೆಯಲ್ಲಿ ಅವನಿಗೆ ಹುಟ್ಟಿದ ಮಕ್ಕಳು ಯೇಷೆರ್, ಶೋಬಾಬ್ ಮತ್ತು ಅರ್ದೋನ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಹೆಚ್ರೋನನ ಮಗ ಕಾಲೇಬ, ಅಜೂಬಳನ್ನು ಮದುವೆಯಾಗಿ ಯೆರ್ಯೋತ್ ಎಂಬ ಮಗಳನ್ನು ಪಡೆದನು. ಆಕೆಯ ಮೂರು ಜನ ಗಂಡುಮಕ್ಕಳು: ಯೇಷೆರ್, ಶೊಬಾಬ್, ಅರ್ದೋನ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೆಚ್ರೋನನ ಮಗನಾದ ಕಾಲೇಬನು ತನ್ನ ಹೆಂಡತಿಯಾದ ಅಜೂಬಳಿಂದಲೂ ಯೆರ್ಯೋತಳಿಂದಲೂ [ಮಕ್ಕಳನ್ನು] ಪಡೆದನು. ಆಕೆಯಲ್ಲಿ ಅವನಿಗೆ ಹುಟ್ಟಿದ ಮಕ್ಕಳು - ಯೇಷೆರ್, ಶೋಬಾಬ್, ಅರ್ದೋನ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಕಾಲೇಬನು ಹೆಚ್ರೋನನ ಮಗನು. ಅವನ ಹೆಂಡತಿಯಾದ ಅಜೂಬಳಲ್ಲಿ ಅವನಿಗೆ ಹುಟ್ಟಿದ ಗಂಡುಮಕ್ಕಳು ಯಾರೆಂದರೆ, ಯೇಷೆರ್, ಶೋಬಾಬ್ ಮತ್ತು ಅರ್ದೋನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:18
7 ತಿಳಿವುಗಳ ಹೋಲಿಕೆ  

ಅಬೀಗೈಲಳು ಅಮಾಸನ ತಾಯಿ, ಅಮಾಸನ ತಂದೆಯು ಇಷ್ಮಾಯೇಲನ ವಂಶದ ಯೆತೆರನು.


ಅಜೂಬಳ ಮರಣದ ನಂತರ, ಕಾಲೇಬನು ಎಫ್ರಾತಳನ್ನು ಮದುವೆಯಾದನು. ಅವಳು ಅವನಿಗೆ ಹೂರನನ್ನು ಹೆತ್ತಳು.


ಹೆಚ್ರೋನನಿಗೆ ಹುಟ್ಟಿದ ಪುತ್ರರು: ಯೆರಹ್ಮೇಲ್, ರಾಮ್, ಕೆಲೂಬಾಯ್.


ಹೆಚ್ರೋನನು ಕಾಲೇಬ್ ಎಫ್ರಾತದಲ್ಲಿ ಸತ್ತ ತರುವಾಯ ಹೆಚ್ರೋನನ ಹೆಂಡತಿಯಾದ ಅಬೀಯಳು ಅವನಿಗೆ ಅಷ್ಹೂರನನ್ನು ಹೆತ್ತಳು. ಇವನು ತೆಕೋವನ ತಂದೆಯು.


ಯೆರಹ್ಮೇಲನ ಸಹೋದರನಾದ ಕಾಲೇಬನ ಪುತ್ರರು: ಅವನ ಚೊಚ್ಚಲ ಮಗನು ಮೇಷನು; ಇವನು ಜೀಫ್ಯನಿಗೆ ತಂದೆಯಾಗಿದ್ದನು. ಹೆಬ್ರೋನನ ತಂದೆಯಾದ ಮಾರೇಷನಿಗೆ ಮಕ್ಕಳು ಜನಿಸಿದರು.


ಕಾಲೇಬನ ಉಪಪತ್ನಿಯಾದ ಏಫಾಳು ಹಾರಾನ್, ಮೋಚ, ಗಾಜೇಜ ಎಂಬುವರನ್ನು ಹೆತ್ತಳು. ಹಾರಾನನು ಗಾಜೇಜನ ತಂದೆ.


ಯೆಹೂದನ ವಂಶಜರು: ಪೆರೆಚನು, ಹೆಚ್ರೋನನು, ಕರ್ಮೀ, ಹೂರನು, ಶೋಬಾಲನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು