1 ಪೂರ್ವಕಾಲ ವೃತ್ತಾಂತ 2:23 - ಕನ್ನಡ ಸಮಕಾಲಿಕ ಅನುವಾದ23 ಇವನಿಗೆ ಗಿಲ್ಯಾದಿನ ದೇಶದಲ್ಲಿ ಅರುವತ್ತು ಪಟ್ಟಣಗಳು ಇದ್ದವು. ಇದಲ್ಲದೆ ಅವನು ಗೆಷೂರ್ಯರನ್ನೂ, ಅರಾಮ್ಯರನ್ನೂ, ಯಾಯೀರನ ಪಟ್ಟಣಗಳನ್ನೂ, ಕೆನಾತ್ ಮತ್ತು ಅದರ ಪಟ್ಟಣಗಳನ್ನೂ, ಒಟ್ಟು ಅರವತ್ತು ಪಟ್ಟಣಗಳನ್ನು ಗೆದ್ದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ವಂಶದವರಿಗೆ ಇದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಗೆಷೂರ್ಯರು ಮತ್ತು ಅರಾಮ್ಯರು ಯಾಯೀರನ ಸಂತಾನದವರಿಂದ ಯಾಯೀರಿನ ಗ್ರಾಮಗಳನ್ನೂ ಕೆನತ್ ಪ್ರಾಂತ್ಯದ ಗ್ರಾಮಗಳನ್ನು, ಒಟ್ಟು ಅರವತ್ತು ಸಂಸ್ಥಾನಗಳನ್ನು ಗೆದ್ದುಕೊಂಡರು. ಈ ಸಂಸ್ಥಾನದವರೆಲ್ಲರೂ ಗಿಲ್ಯಾದ್ಯರ ಮೂಲಪುರುಷನಾದ ಮಾಕೀರನ ಗೋತ್ರದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆದರೆ ಗೆಷೂರ್ಯರ ಮತ್ತು ಅರಾಮ್ಯರ ರಾಜ್ಯಗಳವರು ಯಾಯೀರನ ಹಾಗೂ ಕೆನತ್ ಪ್ರಾಂತ್ಯದ ಗ್ರಾಮಗಳನ್ನೂ ಅವುಗಳ ಸಮೀಪದ ಪಟ್ಟಣಗಳನ್ನೂ ಸೇರಿ ಒಟ್ಟು ಅರುವತ್ತು ಪಟ್ಟಣಗಳನ್ನು ಗೆದ್ದುಕೊಂಡರು. ಅಲ್ಲಿ ವಾಸಿಸಿದ್ದ ಎಲ್ಲಾ ಜನರೂ ಗಿಲ್ಯಾದನ ತಂದೆ ಮಾಕೀರನ ವಂಶಜರೇ ಆಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಗೆಷೂರ್ಯರೂ ಅರಾಮ್ಯರೂ ಯಾಯೀರನ ಸಂತಾನದವರಿಂದ ಯಾಯೀರನ ಗ್ರಾಮಗಳನ್ನೂ ಕೆನತ್ ಪ್ರಾಂತದ ಗ್ರಾಮಗಳನ್ನೂ ಒಟ್ಟು ಅರುವತ್ತು ಸ್ಥಾನಗಳನ್ನು ಕಿತ್ತುಕೊಂಡರು. ಈ ಸ್ಥಾನಗಳವರೆಲ್ಲರೂ ಗಿಲ್ಯಾದ್ಯರ ಮೂಲ ಪುರುಷನಾದ ಮಾಕೀರನ ಗೋತ್ರದವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆದರೆ ಗೆಷೂರ್ ಮತ್ತು ಅರಾಮನು ಯಾಯೀರನ ಊರುಗಳನ್ನು ವಶಪಡಿಸಿಕೊಂಡರು. ಅದರಲ್ಲಿ ಕೆನತ್ ಮತ್ತು ಅದರ ಸುತ್ತಮುತ್ತಲಿದ್ದ ಕೆಲವು ಹಳ್ಳಿಗಳು ಸೇರಿದ್ದವು. ಒಟ್ಟು ಅರವತ್ತು ಸಣ್ಣ ಪಟ್ಟಣಗಳಿದ್ದವು. ಇವೆಲ್ಲವೂ ಗಿಲ್ಯಾದನ ತಂದೆಯಾದ ಮಾಕೀರನಿಗೆ ಸೇರಿದವುಗಳಾಗಿದ್ದವು. ಅಧ್ಯಾಯವನ್ನು ನೋಡಿ |