Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 2:4 - ಕನ್ನಡ ಸಮಕಾಲಿಕ ಅನುವಾದ

4 ಯೆಹೂದನ ಸೊಸೆ ತಾಮಾರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಪುತ್ರರೆಲ್ಲರೂ ಐದು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೂದನ ಸೊಸೆಯಾದ ತಾಮಾರಳು ಅವನಿಂದ ಪೆರೆಚ್ ಮತ್ತು ಜೆರಹ ಎಂಬವರನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯೆಹೂದನಿಗೆ ಅವನ ಸೊಸೆ ತಾಮಾರಳಿಂದ ಪೆರೆಜ್ ಹಾಗೂ ಜೆರಹ ಎಂಬ ಮಕ್ಕಳು ಜನಿಸಿದರು. ಯೆಹೂದನ ಮಕ್ಕಳು ಒಟ್ಟು ಐದು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೂದನ ಸೊಸೆಯಾದ ತಾಮಾರಳು ಅವನಿಂದ ಪೆರೆಚ್, ಜೆರಹ ಎಂಬವರನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೂದನ ಸೊಸೆಯಾಗಿದ್ದ ತಾಮಾರಳು ಯೆಹೂದನಿಂದ ಪೆರೆಚ್ ಮತ್ತು ಜೆರಹ ಎಂಬ ಇಬ್ಬರು ಗಂಡುಮಕ್ಕಳನ್ನು ಹೆತ್ತಳು. ಹೀಗೆ ಯೆಹೂದನಿಗೆ ಐದು ಗಂಡುಮಕ್ಕಳಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 2:4
14 ತಿಳಿವುಗಳ ಹೋಲಿಕೆ  

ಯೂದನು ಪೆರೆಸ ಮತ್ತು ಜೆರಹನ ತಂದೆ, ತಾಮಾರಳು ಇವರ ತಾಯಿ, ಪೆರೆಸನು ಹೆಚ್ರೋನನ ತಂದೆ, ಹೆಚ್ರೋನನು ಅರಾಮನ ತಂದೆ,


ನಹಶೋನನು ಅಮ್ಮೀನಾದಾಬನ ಮಗನು, ಅಮ್ಮೀನಾದಾಬನು ಆರ್ನೈಯನ ಮಗನು, ಆರ್ನೈಯನು ಹೆಚ್ರೋನನ ಮಗನು, ಹೆಚ್ರೋನನು ಪೆರೆಸನ ಮಗನು, ಪೆರೆಸನು ಯೂದನ ಮಗನು,


ಯೆಹೂದನ ಮಗ ಜೆರಹನ ಮಕ್ಕಳಲ್ಲಿ ಒಬ್ಬನಾಗಿರುವ ಮೆಷೇಜಬೇಲನ ಮಗನಾದ ಪೆತಹ್ಯನು ಜನರಿಗೋಸ್ಕರ ಸಕಲ ಕಾರ್ಯಗಳಲ್ಲಿ ಅರಸನ ಪ್ರತಿನಿಧಿಯಾಗಿದ್ದನು.


ಯೆರೂಸಲೇಮಿನಲ್ಲಿ ಯೆಹೂದ ಮಕ್ಕಳಲ್ಲಿಯೂ, ಬೆನ್ಯಾಮೀನ್ಯರಲ್ಲಿಯೂ ಕೆಲವರು ವಾಸವಾಗಿದ್ದರು. ಯೆಹೂದನ ವಂಶಜರಲ್ಲಿ: ಒಬ್ಬನು ಅತಾಯನು, ಇವನು ಉಜ್ಜೀಯನ ಮಗ, ಜೆಕರ್ಯನ ಮಗ, ಅಮರ್ಯನ ಮಗ, ಶೆಫಟ್ಯನ ಮಗ, ಮಹಲಲೇಲನ ಮಗ, ಇವನು ಪೆರೆಚ್ ಸಂತಾನದವನು.


ಜೆರಹನ ಪುತ್ರರಲ್ಲಿ ಯೆಯೂವೇಲನೂ, ಅವನ ಸಹೋದರರೂ 690 ಮಂದಿ.


ಯೆಹೂದನ ಮಗನಾದ ಪೆರೆಚನ ಮಕ್ಕಳಲ್ಲಿ ಒಬ್ಬನಾದ ಬಾನೀಯ ಮಗನಾದ ಇಮ್ರಿಯು, ಇವನ ಮಗನಾದ ಒಮ್ರಿ, ಇವನ ಮಗನು ಅಮ್ಮೀಹೂದನು, ಇವನ ಮಗನು ಉತೈ.


ಪೆರೆಚನ ಸಂತತಿಯ ವಿವರ: ಪೆರೆಚನು ಹೆಚ್ರೋನನ ತಂದೆಯಾಗಿದ್ದನು;


ಈ ಹುಡುಗಿಯಿಂದ ಯೆಹೋವ ದೇವರು ನಿನಗೆ ಕೊಡುವ ಸಂತಾನದಿಂದ ನಿನ್ನ ಮನೆಯು ತಾಮಾರಳು ಯೆಹೂದನಿಗೆ ಹೆತ್ತ ಪೆರೆಚನ ಮನೆಯ ಹಾಗೆಯೇ ಆಗಲಿ,” ಎಂದರು.


ಜೆರಹನ ವಂಶಸ್ಥರಾದ ಜೆರಹಿಯರು, ಸೌಲನಿಂದ ಸೌಲ್ಯರ ಕುಟುಂಬ;


ಆಗ ಯೆಹೂದನು ತನ್ನ ಸೊಸೆ ತಾಮಾರಳಿಗೆ, “ನನ್ನ ಮಗ ಶೇಲಹನು ದೊಡ್ಡವನಾಗುವವರೆಗೆ ವಿಧವೆಯಾಗಿದ್ದು, ನಿನ್ನ ತಂದೆಯ ಮನೆಯಲ್ಲಿರು,” ಎಂದನು. ಏಕೆಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳಾದರೋ ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು.


ಪೆರೆಚನ ಪುತ್ರರು: ಹೆಚ್ರೋನ್, ಹಾಮೂಲ್.


ಯೆಹೂದನ ವಂಶಜರು: ಪೆರೆಚನು, ಹೆಚ್ರೋನನು, ಕರ್ಮೀ, ಹೂರನು, ಶೋಬಾಲನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು