Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 20:3 - ಕನ್ನಡ ಸಮಕಾಲಿಕ ಅನುವಾದ

3 ಇದಲ್ಲದೆ ಅವನು ಅದರಲ್ಲಿದ್ದ ಜನರನ್ನು ಹೊರಗೆ ತಂದು, ಅವರನ್ನು ಗರಗಸ ಗುದ್ದಲಿ ಕೊಡಲಿಗಳಿಂದ ಕೆಲಸ ಮಾಡುವದಕ್ಕೂ ಇಟ್ಟನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟಣಗಳಿಗೂ ಮಾಡಿದನು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ತಿರುಗಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಕ್ಕೆ ನೇಮಿಸಿದನು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಸರ್ವಸೈನಿಕರೊಡನೆ ಯೆರೂಸಲೇಮಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಕೆಲಸ ಮಾಡುವುದಕ್ಕೆ ಹಚ್ಚಿದನು. ಅಮ್ಮೋನಿಯರ ಉಳಿದೆಲ್ಲ ಪಟ್ಟಣದವರೆಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಜೆರುಸಲೇಮಿಗೆ ಮರಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಊರಿನ ನಿವಾಸಿಗಳನ್ನು ಹಿಡಿದು ಗರಗಸ ಗುದ್ದಲಿ ಕೊಡಲಿಗಳಿಂದ ಕೆಲಸಮಾಡುವದಕ್ಕೆ ಹಚ್ಚಿದನು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಸರ್ವಸೈನಿಕರೊಡನೆ ಯೆರೂಸಲೇವಿುಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದಾವೀದನು ರಬ್ಬದ ಜನರನ್ನು ಸೆರೆಹಿಡಿದುಕೊಂಡು ಬಂದು ಅವರನ್ನು ಮರಕಡಿಯುವುದಕ್ಕೂ ಕೊಡಲಿ ಮತ್ತು ಹಾರೆಗಳಿಂದ ಕೆಲಸ ಮಾಡುವದಕ್ಕೂ ನೇಮಿಸಿದನು. ಇದೇ ಪ್ರಕಾರ ದಾವೀದನು ಅಮ್ಮೋನಿಯರ ಎಲ್ಲಾ ಪಟ್ಟಣಗಳಲ್ಲಿಯೂ ಮಾಡಿದನು. ನಂತರ ದಾವೀದನು ತನ್ನ ಸೈನ್ಯದೊಂದಿಗೆ ಜೆರುಸಲೇಮಿಗೆ ಹಿಂತಿರುಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 20:3
9 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಸಂಹರಿಸದೆ ಉಳಿಸಿದ್ದ ಅವರ ಮಕ್ಕಳನ್ನೂ ಸೊಲೊಮೋನನು ಇಂದಿನವರೆಗೂ ದಾಸತ್ವಕ್ಕಾಗಿ ನೇಮಿಸಿದನು.


ಇದಲ್ಲದೆ ಅವನು ಅದರಲ್ಲಿದ್ದ ಜನರನ್ನು ಹೊರಗೆ ತಂದು, ಅವರನ್ನು ಗರಗಸ ಗುದ್ದಲಿ ಕೊಡಲಿಗಳಿಂದ ಕೆಲಸ ಮಾಡುವದಕ್ಕೂ ಇಟ್ಟಿಗೆಗಳನ್ನು ಸುಡುವುದಕ್ಕೂ ಇಟ್ಟನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟಣಗಳಿಗೂ ಮಾಡಿದನು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ತಿರುಗಿಬಂದನು.


ಈಗ ನೀವು ಶಾಪಗ್ರಸ್ತರು, ನೀವು ಯಾವಾಗಲೂ ದಾಸತ್ವದಿಂದ ಬಿಡುಗಡೆಯಾಗುವುದಿಲ್ಲ. ನೀವು ನನ್ನ ದೇವರ ಮನೆಗೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರುವಿರಿ,” ಎಂದು ಹೇಳಿದನು.


ಮಣ್ಣು ಅಗೆಯುವ, ಇಟ್ಟಿಗೆಯನ್ನು ಮಾಡುವ ಮತ್ತು ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಈಜಿಪ್ಟಿನವರು ಅವರಿಂದ ಮಾಡಿಸಿದ ಎಲ್ಲಾ ಕೆಲಸವು ಕಠೋರವಾಗಿತ್ತು.


ಕೆಲವರ ಮೇಲೆ ಕಲ್ಲೆಸೆದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಸಾಯಿಸಿದರು, ಕೆಲವರನ್ನು ಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು, ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು