Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:12 - ಕನ್ನಡ ಸಮಕಾಲಿಕ ಅನುವಾದ

12 ನಿನ್ನ ದೇಶದಲ್ಲಿ ಮೂರು ವರುಷ ಕ್ಷಾಮ ಉಂಟಾಗಬೇಕೋ? ಇಲ್ಲವೆ ಮೂರು ತಿಂಗಳವರೆಗೆ ನಿನ್ನ ಶತ್ರುಗಳ ಹಿಂಸೆಗೆ ಬಲಿಯಾಗುವುದು ಬೇಕೋ? ಇಲ್ಲವೆ ಯೆಹೋವ ದೇವರ ದೂತನು ಇಸ್ರಾಯೇಲಿನ ಸಮಸ್ತ ಪ್ರಾಂತಗಳಲ್ಲಿ ಯೆಹೋವ ದೇವರ ಖಡ್ಗದಿಂದ ಮೂರು ದಿವಸಗಳವರೆಗೆ ಘೋರವ್ಯಾಧಿ ಉಂಟಾಗಬೇಕೋ? ನೀನು ಆರಿಸಿಕೋ. ಈಗ ನನ್ನನ್ನು ಕಳುಹಿಸಿದವರಿಗೆ ನಾನು ಏನು ಉತ್ತರ ತೆಗೆದುಕೊಂಡು ಹೋಗಬೇಕು? ಯೋಚಿಸಿನೋಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ‘ಮೂರು ವರ್ಷಗಳ ವರೆಗೆ ಬರಗಾಲ ಉಂಟಾಗಬೇಕೋ, ಇಲ್ಲವೆ ನೀನು ಮೂರು ತಿಂಗಳು ನಿನ್ನ ಶತ್ರುಗಳ ಚಿತ್ರಹಿಂಸೆಗೆ ಬಲಿಯಾಗುವುದು ಬೇಕೋ, ಇಲ್ಲವೆ ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ ಯೆಹೋವನು ಕಳುಹಿಸಿದ ಸಂಹಾರದೂತನಿಂದ ಉಂಟಾಗುವ ಮೂರು ದಿನಗಳ ಘೋರವ್ಯಾಧಿಯ ರೂಪವಾದ ಯೆಹೋವನ ಶಿಕ್ಷೆ ಬೇಕೋ, ಈ ಮೂರರಲ್ಲಿ ಒಂದನ್ನು ಆರಿಸಿಕೊ’ ಎಂಬುದೇ. ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು ಆಲೋಚಿಸಿ ಹೇಳು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ‘ಮೂರು ವರ್ಷಗಳ ಕಾಲ ಕ್ಷಾಮ ಉಂಟಾಗಬೇಕೋ? ಇಲ್ಲವೆ ಮೂರು ತಿಂಗಳುಗಳವರೆಗೆ ನಿನ್ನ ಶತ್ರುಗಳ ಚಿತ್ರಹಿಂಸೆಗೆ ಬಲಿಯಾಗುವುದು ಬೇಕೋ? ಇಲ್ಲವೆ ಇಸ್ರಯೇಲರ ಸಮಸ್ತ ಪ್ರಾಂತ್ಯಗಳಿಗೆ ಸರ್ವೇಶ್ವರ ಕಳುಹಿಸುವ ಸಂಹಾರಕ ದೂತನಿಂದ ಉಂಟಾಗುವ ಮೂರು ದಿನಗಳ ಘೋರ ವ್ಯಾಧಿರೂಪವಾದ ಸರ್ವೇಶ್ವರನ ಶಿಕ್ಷೆ ಬೇಕೋ? ಈ ಮೂರರಲ್ಲಿ ಒಂದನ್ನು ಆರಿಸಿಕೋ’ ನನ್ನನ್ನು ಕಳುಹಿಸಿದವರಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮೂರುವರುಷಗಳ ಕಾಲ ಬರವು ಉಂಟಾಗಬೇಕೋ, ಇಲ್ಲವೆ ಮೂರು ತಿಂಗಳುಗಳವರೆಗೆ ನಿನ್ನ ಶತ್ರುಗಳ ಕತ್ತಿಗೆ ಬಲಿಯಾಗುವದು ಬೇಕೋ, ಇಲ್ಲವೆ ಇಸ್ರಾಯೇಲ್ಯರ ಸಮಸ್ತಪ್ರಾಂತಗಳಲ್ಲಿ ಯೆಹೋವನು ಕಳುಹಿಸಿದ ಸಂಹಾರಕದೂತನಿಂದುಂಟಾಗುವ ಮೂರು ದಿನಗಳ ಘೋರ ವ್ಯಾಧಿ ರೂಪವಾದ ಯೆಹೋವನ ಕತ್ತಿಯುಬೇಕೋ? ಈ ಮೂರರಲ್ಲಿ ಒಂದನ್ನು ಆರಿಸಿಕೋ ಎಂಬದೇ. ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:12
29 ತಿಳಿವುಗಳ ಹೋಲಿಕೆ  

ಹೆರೋದನು ದೇವರಿಗೆ ಸಲ್ಲಿಸಬೇಕಾದ ಮಹಿಮೆ ಸಲ್ಲಿಸದೇ ಹೋದದ್ದರಿಂದ ಕೂಡಲೇ ಒಬ್ಬ ದೇವದೂತನು ಅವನನ್ನು ಹೊಡೆಯಲು ಅವನು ಹುಳ ಬಿದ್ದು ಸತ್ತುಹೋದನು.


ನಿಮಗೆ ಸತ್ಯವನ್ನು ಹೇಳುತ್ತೇನೆ: ಎಲೀಯನ ದಿವಸಗಳಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ, ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರು.


ಖಡ್ಗದಿಂದ ಹತರಾದವರು ಹಸಿವೆಯಿಂದ ಹತರಾದವರಿಗಿಂತಲೂ ಲೇಸು. ಏಕೆಂದರೆ, ಇವರು ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದು, ಕ್ಷಯಿಸಿ ಹೋದರು.


“ಅಯ್ಯೋ, ಯೆಹೋವ ದೇವರ ಖಡ್ಗವೇ, ಎಷ್ಟರವರೆಗೆ ವಿಶ್ರಮಿಸಿಕೊಳ್ಳದೇ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ; ವಿಶ್ರಮಿಸಿಕೋ, ಸುಮ್ಮನಿರು.


ನೀವು ಭಯಪಡುವ ಖಡ್ಗವು ಈಜಿಪ್ಟ್ ದೇಶದಲ್ಲಿ ನಿಮ್ಮನ್ನು ಹಿಡಿಯುವುದು. ನೀವು ಹೆದರಿಕೊಳ್ಳುವ ಕ್ಷಾಮವು ಈಜಿಪ್ಟ್ ದೇಶಕ್ಕೆ ನಿಮ್ಮನ್ನು ಹಿಂದಟ್ಟುವುದು, ನೀವು ಅಲ್ಲೇ ಸಾಯುವಿರಿ.


ಮರುಭೂಮಿಯಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ನಾಶಮಾಡುವವರು ಬಂದಿದ್ದಾರೆ. ಏಕೆಂದರೆ, ಯೆಹೋವ ದೇವರ ಖಡ್ಗವು ದೇಶದ ಒಂದು ಕಡೆಯಿಂದ ದೇಶದ ಇನ್ನೊಂದು ಕಡೆಯವರೆಗೂ ನುಂಗಿಬಿಡುತ್ತದೆ. ಯಾವ ಮನುಷ್ಯನೂ ಸುರಕ್ಷಿತವಾಗಿ ಉಳಿಯುವುದಿಲ್ಲ.


ಏಕೆಂದರೆ ಬೆಂಕಿಯಿಂದಲೂ ತಮ್ಮ ಖಡ್ಗದಿಂದಲೂ ಯೆಹೋವ ದೇವರು ಮನುಷ್ಯರಿಗೆಲ್ಲಾ ನ್ಯಾಯತೀರಿಸುವರು. ಯೆಹೋವ ದೇವರಿಂದ ಹತರಾಗುವವರು ಅನೇಕರಾಗಿರುವರು.


ಅಂಧಕಾರದಲ್ಲಿ ಬೆನ್ನಟ್ಟಿ ಬರುವ ವಿಪತ್ತಿಗೆ ಕಳವಳಪಡದಿರುವೆ. ಮಧ್ಯಾಹ್ನದಲ್ಲಿ ಹಾಳುಮಾಡುವ ವ್ಯಾಧಿಗೂ ನೀನು ಭಯಪಡದಿರುವೆ.


ಅದೇ ರಾತ್ರಿಯಲ್ಲಿ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ನೀನು, ನಿನ್ನ ಮನೆಯವರು ಎದ್ದು ಎಲ್ಲಿ ಇಳಿದುಕೊಳ್ಳುವ ಸ್ಥಳ ಉಂಟೋ ಅಲ್ಲಿ ಹೋಗಿ ವಾಸಿಸಿರಿ. ಏಕೆಂದರೆ ಯೆಹೋವ ದೇವರು ಬರವನ್ನು ಕಳುಹಿಸಲಿದ್ದಾರೆ. ಅದು ದೇಶದ ಮೇಲೆ ಏಳು ವರ್ಷದವರೆಗೂ ಬರುವುದು,” ಎಂದು ಹೇಳಿದನು.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯ ಊರಿನವನಾದ ಎಲೀಯನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಮಾತಿನ ಪ್ರಕಾರ ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳವರೆಗೆ ಮಂಜಾಗಲಿ ಅಥವಾ ಮಳೆಯಾಗಲಿ ಬೀಳುವುದಿಲ್ಲ,” ಎಂದನು.


ದಾವೀದನ ದಿವಸಗಳಲ್ಲಿ ವರ್ಷದಿಂದ ವರ್ಷಕ್ಕೆ ಮೂರು ವರ್ಷ ಬರ ಉಂಟಾಗಿತ್ತು. ಆಗ ದಾವೀದನು ಯೆಹೋವ ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು, “ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಈ ಬರ ಬಂದಿದೆ,” ಎಂದು ಹೇಳಿದರು.


ಯೆಹೋವ ದೇವರು ನಿಮ್ಮನ್ನು ಮೊಣಕಾಲುಗಳಲ್ಲಿಯೂ, ತೊಡೆಗಳಲ್ಲಿಯೂ ವಾಸಿಯಾಗದ ಕೆಟ್ಟ ಉರಿ ಹುಣ್ಣಿನಿಂದ ಅಂಗಾಲು ಮೊದಲ್ಗೊಂಡು ನೆತ್ತಿಯವರೆಗೆ ಹೊಡೆಯುವರು.


ಯೆಹೋವ ದೇವರು ನಿಮ್ಮನ್ನು ಈಜಿಪ್ಟನ್ನು ಬಾಧಿಸುವಂತೆ ಹುಣ್ಣುಗಳಿಂದಲೂ, ಮೂಲವ್ಯಾಧಿಯಿಂದಲೂ, ಕಜ್ಜಿಯಿಂದಲೂ, ಇಸುಬಿನಿಂದಲೂ ನೀವು ವಾಸಿಯಾಗದ ರೋಗಗಳಿಂದ ನಿಮ್ಮನ್ನು ಬಾಧಿಸುವರು.


ಯೆಹೋವ ದೇವರು ನಿಮ್ಮನ್ನು ನಿಮ್ಮ ಶತ್ರುಗಳ ಮುಂದೆ ಸೋಲಿಸಿಬಿಡುವರು. ನೀವು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ದಾಳಿಮಾಡಲು ಹೊರಟು, ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗುವಿರಿ. ಭೂಮಿಯ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವವು.


ಯೆಹೋವ ದೇವರು ಕ್ಷಯರೋಗದಿಂದಲೂ, ಚಳಿಜ್ವರದಿಂದಲೂ, ಉರಿವಾತದಿಂದಲೂ, ಉಷ್ಣಜ್ವರದಿಂದಲೂ ಕುಗ್ಗಿಸಿ, ದೇಶವನ್ನು ಕ್ಷಾಮದಿಂದಲೂ, ಬೆಳೆಯನ್ನು ಕಾಡಿನ ಬಿಸಿಗಾಳಿಯಿಂದಲೂ ಬಾಧಿಸುವರು. ನೀವು ನಾಶವಾಗುವ ತನಕ ಅವು ನಿಮ್ಮನ್ನು ಹಿಂದಟ್ಟಿಬರುವವು.


ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಕೈಗೊಳ್ಳದೇ ಹೋದರೆ, ಈ ಎಲ್ಲಾ ಶಾಪಗಳು ನಿಮ್ಮ ಮೇಲೆ ಬಂದು ನಿಮ್ಮನ್ನು ಹಿಡಿದುಕೊಳ್ಳುವವು:


ನಾನು ನಿಮಗೆ ವಿಮುಖನಾಗಿರುವೆನು. ಆದ್ದರಿಂದ ನೀವು ನಿಮ್ಮ ವೈರಿಗಳಿಂದ ಸೋತುಹೋಗುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗಲೂ ಓಡಿಹೋಗುವಿರಿ.


ನೀವು ಹಳೆಯ ಧಾನ್ಯವನ್ನು ತಿಂದು, ಹೊಸದು ಬಂದಾಗ ಹಳೆಯದನ್ನು ಹೊರಗೆ ತರುವಿರಿ.


ಏಕೆಂದರೆ ಯೆಹೋವ ದೇವರು ಈಜಿಪ್ಟಿನವರನ್ನು ಸಂಹರಿಸುವುದಕ್ಕಾಗಿ ಹಾದುಹೋಗುವರು. ಅವರು ಅಡ್ಡ ಪಟ್ಟಿಯ ಮೇಲೂ, ಅದರ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ, ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡದಂತೆ, ಯೆಹೋವ ದೇವರು ನಿಮ್ಮ ಬಾಗಿಲುಗಳನ್ನು ದಾಟಿಹೋಗುವರು.


ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನೇ ಆಯ್ದುಕೋ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು