Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:13 - ಕನ್ನಡ ಸಮಕಾಲಿಕ ಅನುವಾದ

13 ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಯೆಹೋವ ದೇವರ ಕೈಯಲ್ಲಿಯೇ ಬೀಳುತ್ತೇನೆ. ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಮನುಷ್ಯರ ಕೈಯಲ್ಲಿ ಬೀಳುವುದಕ್ಕಿಂತ ಯೆಹೋವನ ಹಸ್ತದಲ್ಲಿ ಬೀಳುವುದು ಮೇಲು. ಆತನು ಕೃಪಾಪೂರ್ಣನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ದಾವೀದನು, “ನಾನು ಬಹಳ ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ. ಸರ್ವೇಶ್ವರನ ಕೈಯಲ್ಲೇ ಬೀಳುತ್ತೇನೆ; ಅವರು ಕೃಪಾಪೂರ್ಣರು, ಮನುಷ್ಯರ ಕೈಯಲ್ಲಿ ಬೀಳಲೊಲ್ಲೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದಕ್ಕೆ ದಾವೀದನು - ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಯೆಹೋವನ ಹಸ್ತದಲ್ಲಿ ಬೀಳುತ್ತೇನೆ; ಆತನು ಕೃಪಾಪೂರ್ಣನು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಗಾದನಿಗೆ ದಾವೀದನು, “ನಾನು ಈಗ ಕಷ್ಟದಲ್ಲಿ ಬಿದ್ದಿದ್ದೇನೆ! ನನ್ನ ಶಿಕ್ಷೆಯನ್ನು ಮನುಷ್ಯನು ನಿರ್ಧರಿಸಬಾರದು. ಯೆಹೋವನು ಕರುಣೆಯುಳ್ಳವನು. ಆದ್ದರಿಂದ ಆತನೇ ನಿರ್ಧರಿಸಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:13
31 ತಿಳಿವುಗಳ ಹೋಲಿಕೆ  

ಇಸ್ರಾಯೇಲು ಯೆಹೋವ ದೇವರಲ್ಲಿ ನಿರೀಕ್ಷಿಸಲಿ, ಏಕೆಂದರೆ ಯೆಹೋವ ದೇವರ ಬಳಿಯಲ್ಲಿ ಒಂಡಬಡಿಕೆಯ ಪ್ರೀತಿ ಇರುತ್ತದೆ, ಸಂಪೂರ್ಣ ವಿಮೋಚನೆಯೂ ಇರುತ್ತದೆ.


ಸಜೀವ ದೇವರ ಕೈಯಲ್ಲಿ ಬೀಳುವುದು ಭಯಂಕರವಾದದ್ದು.


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ. ಇಲ್ಲಿಂದ ಹೊರಟು ಕ್ರಿಸ್ತನೊಡನೆ ಇರಬೇಕೆಂಬ ಆಶೆಯಿದೆ. ಅದು ಬಹು ಉತ್ತಮವಾಗಿರುವುದು.


ದುಷ್ಟನು ತನ್ನ ದುರ್ಮಾರ್ಗವನ್ನೂ, ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು, ಯೆಹೋವ ದೇವರ ಕಡೆಗೆ ಹಿಂದಿರುಗಲಿ. ಅವರು ಅವರ ಮೇಲೆ ಕರುಣೆ ಇಡುವರು. ನಮ್ಮ ದೇವರ ಬಳಿಗೂ ಹಿಂದಿರುಗಲಿ. ಏಕೆಂದರೆ ಅವರು ಹೇರಳವಾಗಿ ಕ್ಷಮಿಸುವರು.


“ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸಿರಿ’ ಎಂದು ಹೇಳಲೋ? ಇಲ್ಲ. ನಾನು ಈ ಗಳಿಗೆಗಾಗಿಯೇ ಬಂದಿದ್ದೇನಲ್ಲಾ?


ಯೆಹೋವ ದೇವರು ನಮಗೆ ಮಾಡಿದ್ದೆಲ್ಲದರ ಪ್ರಕಾರ, ಯೆಹೋವ ದೇವರ ಪ್ರೀತಿ ಕೃಪೆಗಳನ್ನೂ, ಯೆಹೋವ ದೇವರ ಕಾರ್ಯಗಳನ್ನು ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು. ಆತನು ತನ್ನ ಅಂತಃಕರುಣೆಯ ಪ್ರಕಾರವೂ, ತನ್ನ ಕೃಪೆಯ ಮಹಾ ಒಳ್ಳೆಯತನದ ಪ್ರಕಾರವೂ, ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.


ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸೊತ್ತನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು. ನೀನು ಅವರಿಗೆ ಕರುಣೆಯನ್ನು ತೋರಿಸದೆ, ವೃದ್ಧರ ಮೇಲೆಯೂ, ಬಹು ಭಾರವಾದ ನೊಗವನ್ನು ಹೊರಿಸಿದೆ.


ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರ ಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.


ನೀತಿವಂತನು ತನ್ನ ಪ್ರಾಣಿಗಳಿಗೂ ಕಾಳಜಿ ತೋರುವನು; ಆದರೆ ದುಷ್ಟರ ಕರುಣೆಯ ಕಾರ್ಯಗಳು ಕ್ರೂರತನವೇ.


ಆದರೆ ನಿಮ್ಮಲ್ಲಿ ಕ್ಷಮಾಪಣೆ ಉಂಟು. ನಾವು ನಿಮ್ಮನ್ನು ಭಯಭಕ್ತಿಯಿಂದ ಸೇವೆಮಾಡುವಂತೆ ನಿಮ್ಮ ಕ್ಷಮಾಪಣೆಯಿದೆ.


ನಮ್ಮ ಪಿತೃಗಳು ಈಜಿಪ್ಟಿನಲ್ಲಿ ನಿಮ್ಮ ಅದ್ಭುತಗಳಿಗೆ ಲಕ್ಷಕೊಡದೆ, ನಿಮ್ಮ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ ಅಂದರೆ ಕೆಂಪುಸಮುದ್ರದ ಹತ್ತಿರ ತಿರುಗಿಬಿದ್ದರು.


ಯೆಹೋವ ದೇವರು, ಅನುಕಂಪವೂ ದಯೆಯೂ ದೀರ್ಘಶಾಂತಿಯೂ ಪೂರ್ಣ ಪ್ರೀತಿಯೂ ಉಳ್ಳವರಾಗಿದ್ದಾರೆ.


ಆದರೆ ನೀವು ಯೆಹೋವ ದೇವರೇ, ಅನುಕಂಪವೂ ದಯೆಯೂ ಉಳ್ಳ ದೇವರು ಮತ್ತು ದೀರ್ಘಶಾಂತರೂ ಪ್ರೀತಿಯಲ್ಲಿ ಸಮೃದ್ಧಿವಂತನೂ ಸತ್ಯತೆಯುಳ್ಳವರೂ ಆಗಿದ್ದೀರಿ.


ಯೆಹೋವ ದೇವರೇ, ನೀವು ಒಳ್ಳೆಯವರೂ ಕ್ಷಮಿಸುವುದಕ್ಕೆ ಸಿದ್ಧರೂ ಆಗಿದ್ದೀರಿ. ನಿಮ್ಮನ್ನು ಬೇಡುವವರೆಲ್ಲರಿಗೆ ಪ್ರೀತಿಯಲ್ಲಿ ಸಮೃದ್ಧಿವಂತರೂ ಆಗಿರುವಿರಿ.


ಯೆಹೋವ ದೇವರೇ, ನಿಮ್ಮ ಪ್ರೀತಿಯ ಒಳ್ಳೆಯತನದಿಂದ ನನಗೆ ಉತ್ತರಕೊಡಿರಿ. ನಿಮ್ಮ ಮಹಾ ಕರುಣೆಯಿಂದ ನನ್ನ ಕಡೆಗೆ ತಿರುಗಿರಿ.


ಯೆಹೋವ ದೇವರೇ, ನಾನಾದರೋ ನಿಮಗೆ ಮೊರೆಯಿಟ್ಟಿದ್ದೇನೆ. ಇದು ನಿಮ್ಮ ಮೆಚ್ಚಿಕೆಯ ಸಕಾಲ. ಓ ದೇವರೇ, ನಿಮ್ಮ ಮಹಾಪ್ರೀತಿಯಿಂದ ನನಗೆ ನಿಮ್ಮ ನಿಶ್ಚಯ ರಕ್ಷಣೆಯನ್ನು ದಯಪಾಲಿಸಿರಿ.


ನಾನಾದರೋ, ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನಿಮ್ಮ ಮನೆಗೆ ಬರುವೆನು; ಭಕ್ತಿಭಾವದಿಂದ ನಿಮ್ಮ ಪರಿಶುದ್ಧ ಆಲಯದ ಕಡೆಗೆ ತಲೆಬಾಗುವೆನು.


“ನೀನು ಹೋಗಿ ಶೂಷನಿನಲ್ಲಿರುವ ಎಲ್ಲಾ ಯೆಹೂದ್ಯರನ್ನು ಕೂಡಿಸು; ನೀವು ರಾತ್ರಿ ಹಗಲೂ ಮೂರು ದಿನ ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸಮಾಡಿರಿ. ಹಾಗೆಯೇ ನಾನೂ ನನ್ನ ದಾಸಿಯರೊಡನೆ ಉಪವಾಸ ಮಾಡುವೆನು. ಅನಂತರ ನಾನು ರಾಜಾಜ್ಞೆಯನ್ನು ಮೀರಿ ಅರಸನ ಬಳಿಗೆ ಹೋಗುವೆನು. ನಾನು ಸತ್ತರೂ ಸಾಯುವೆನು,” ಎಂದು ಹೇಳಿಕಳುಸಿದಳು.


“ಅರಸನು ಹೇಳಿಕಳುಹಿಸದೆ ಅರಸನ ಬಳಿಗೆ ಅರಮನೆಯ ಒಳಾಂಗಣಕ್ಕೆ ಹೋಗುವ ಗಂಡಸರಿಗಾಗಲಿ, ಹೆಂಗಸರಿಗಾಗಲಿ ಮರಣದಂಡನೆಯಾಗುವುದು. ಒಂದು ವೇಳೆ ಒಳಗೆ ಬಂದ ವ್ಯಕ್ತಿಯ ಕಡೆಗೆ ಅರಸನು ತನ್ನ ಸ್ವರ್ಣದಂಡವನ್ನು ಚಾಚಿದರೆ ಅವನಿಗೆ ಮಾತ್ರ ಮರಣದಂಡನೆಯಾಗದೆ ಜೀವದಿಂದ ಉಳಿಯುವರು. ಈ ರಾಜಾಜ್ಞೆಯನ್ನು ಅರಸನ ಸಮಸ್ತ ಸೇವಕರೂ ಅರಸನ ಪ್ರಾಂತಗಳ ಜನರೂ ತಿಳಿದಿದ್ದಾರೆ. ಆದರೆ ಕಳೆದ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ನನಗೆ ಆಮಂತ್ರಣವೇ ಬರಲಿಲ್ಲ,” ಎಂದು ತಿಳಿಸುವಂತೆ ಹೇಳಿದಳು.


ಯೆಹೋವ ದೇವರ ಪ್ರವಾದಿ ಒಬ್ಬನು ಅಲ್ಲಿ ಇದ್ದನು. ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯಕ್ಕೆದುರಾಗಿ ಹೊರಟುಹೋಗಿ ಅವರಿಗೆ, “ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ಯೆಹೂದದ ಮೇಲೆ ಕೋಪಗೊಂಡದ್ದರಿಂದ, ದೇವರು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿದ್ದಾರೆ. ನೀವು ಆಕಾಶಕ್ಕೆ ಮುಟ್ಟುವ ಉಗ್ರತೆಯಿಂದ ಅವರನ್ನು ಕೊಂದುಹಾಕಿದ್ದೀರಿ.


ನಾವು ಇಲ್ಲಿಯೇ ಇದ್ದರೆ, ಪಟ್ಟಣದಲ್ಲಿ ಬರವಿರುವುದರಿಂದ ಅಲ್ಲಿ ಸಾಯುತ್ತೇವೆ. ಇಲ್ಲಿ ನಾವು ಕುಳಿತಿದ್ದರೂ ಹಾಗೆಯೇ ಸಾಯುತ್ತೇವೆ. ಆದ್ದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಅವರಿಗೆ ಶರಣಾಗೋಣ. ಅವರು ನಮ್ಮನ್ನು ಬದುಕಿಸಿದರೆ ಬದುಕುವೆವು, ಅವರು ನಮ್ಮನ್ನು ಕೊಲ್ಲುವುದಾದರೆ ಕೊಲ್ಲಲಿ,” ಎಂದುಕೊಂಡರು.


ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ, ಕುದುರೆಗಳೂ ರಥಗಳೂ ಉಳ್ಳ ಸೈನ್ಯ ಪಟ್ಟಣವನ್ನು ಸುತ್ತಿಕೊಂಡಿರುವುದನ್ನು ಕಂಡು ಎಲೀಷನಿಗೆ, “ಅಯ್ಯೋ! ನನ್ನ ಯಜಮಾನನೇ, ನಾವು ಏನು ಮಾಡುವುದು?” ಎಂದನು.


ಯೆಹೋವ ದೇವರೇ, ನಿಮ್ಮ ಕೀರ್ತಿಯನ್ನು ನಾನು ಕೇಳಿದ್ದೇನೆ, ಯೆಹೋವ ದೇವರೇ, ನಿಮ್ಮ ಕಾರ್ಯಗಳಿಗಾಗಿ ನಿಮ್ಮ ಮುಂದೆ ಭಯಭಕ್ತಿಯಿಂದ ನಿಲ್ಲುತ್ತೇನೆ. ನಮ್ಮ ದಿನಗಳಲ್ಲಿ ಅವುಗಳನ್ನು ಪುನಃ ಮಾಡಿರಿ. ನಮ್ಮ ವರ್ಷಗಳ ಮಧ್ಯದಲ್ಲಿ ಅವುಗಳನ್ನು ತಿಳಿಸಿರಿ, ನೀನು ರೋಷಗೊಂಡಿದ್ದರೂ ಕರುಣೆಯನ್ನು ಜ್ಞಾಪಕಮಾಡಿಕೊಳ್ಳಿರಿ.


ಪಾಪಗಳನ್ನು ಮತ್ತು ಅಪರಾಧಗಳನ್ನು ಮನ್ನಿಸುವವನೂ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ಲಕ್ಷಿಸದವನೂ, ನಿನ್ನ ಹಾಗೆ ಇರುವ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವುದಿಲ್ಲ. ಏಕೆಂದರೆ ನೀವು ಕರುಣೆಯಲ್ಲಿ ಸಂತೋಷಪಡುತ್ತೀರಿ.


ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ: “ಯೆಹೋವ ದೇವರೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನು ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು. ನೀವು ಕೃಪೆಯೂ ಅನುಕಂಪವೂ ಪ್ರೀತಿಯಲ್ಲಿ ಐಶ್ವರ್ಯವುಳ್ಳ ದೇವರೆಂದೂ ಕೇಡಿನ ವಿಷಯವಾಗಿ ಮನಮರುಗುವವರೆಂದೂ ನನಗೆ ತಿಳಿದಿತ್ತು.


ಹೀಗೆ ಮಾಡಿದರೆ, ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ಅನುಕಂಪದಿಂದ ತಮ್ಮ ಉಗ್ರಕೋಪವನ್ನು ತಡೆದು, ನಾವು ನಾಶವಾಗದೆ ಉಳಿಸುವರೇನೋ, ಯಾರು ಬಲ್ಲರು?”


ಆತನು ದುಃಖಪಡಿಸಿದರೂ, ತನ್ನ ಒಡಂಬಡಿಕೆಯ ಮಹಾಪ್ರೀತಿಯಿಂದ ಅನುಕಂಪ ತೋರಿಸುವರು.


ಆಕಾಶದಿಂದ ಕೆಳಗೆ ನೋಡಿರಿ, ನಿಮ್ಮ ಪವಿತ್ರವೂ ಮಹಿಮೆಯೂ ಆದ ನಿಮ್ಮ ಸಿಂಹಾಸನದಿಂದ ದೃಷ್ಟಿಸಿ ನೋಡಿರಿ. ನಿಮ್ಮ ಆಸಕ್ತಿಯೂ, ನಿಮ್ಮ ಪರಾಕ್ರಮವೂ, ನಿಮ್ಮ ಹೃದಯದ ಘೋಷವೂ, ನಮ್ಮ ವಿಷಯವಾದ ನಿಮ್ಮ ಕರುಣೆ ಕನಿಕರಗಳೂ ಎಲ್ಲಿ? ಬಿಗಿಹಿಡಿದುಕೊಂಡಿದ್ದೀರೋ?


ಯೆಹೋವ ದೇವರೇ, ನಿಮ್ಮ ಅನುಕಂಪವು ಮಹತ್ತಾದವುಗಳು; ನಿಮ್ಮ ನಿಯಮಗಳ ಪ್ರಕಾರ ನನ್ನ ಬದುಕನ್ನು ಕಾಪಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು