Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:15 - ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ಯೆರೂಸಲೇಮನ್ನು ನಾಶಮಾಡುವುದಕ್ಕೆ ದೇವರು ದೂತನನ್ನು ಕಳುಹಿಸಿದರು. ಅವನು ನಾಶಮಾಡುವುದನ್ನು ಯೆಹೋವ ದೇವರು ನೋಡಿ, ಆ ದಂಡನೆಗೋಸ್ಕರ ದುಃಖಪಟ್ಟು, ಜನರನ್ನು ನಾಶಮಾಡುವ ದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದರು. ಆಗ ಯೆಹೋವ ದೇವರ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದೇವರು ಯೆರೂಸಲೇಮನ್ನು ನಾಶಪಡಿಸುವುದಕ್ಕೆ ದೂತರನ್ನು ಕಳುಹಿಸಿದನು. ಆದರೆ ಆ ದೂತನು ನಾಶಪಡಿಸುವುದಕ್ಕಿದ್ದಾಗ ಯೆಹೋವನು ಅದನ್ನು ಕಂಡು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರ ದೂತನಿಗೆ, “ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದೇವರು ಜೆರುಸಲೇಮನ್ನು ಸಹ ಸಂಹರಿಸಬೇಕೆಂದು ದೂತನನ್ನು ಕಳುಹಿಸಿದರು. ಆದರೆ ಆ ದೂತನು ಸಂಹರಿಸುವುದಕ್ಕಿದ್ದಾಗ ಸರ್ವೇಶ್ವರ ಅದನ್ನು ಕಂಡು, ಆ ಕೇಡಿನ ವಿಷಯದಲ್ಲಿ ದುಃಖಪಟ್ಟರು. ಸಂಹಾರಕ ದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದು ಆಜ್ಞಾಪಿಸಿದರು. ಆಗ ಸರ್ವೇಶ್ವರನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದೇವರು ಯೆರೂಸಲೇಮನ್ನೂ ಸಂಹರಿಸುವದಕ್ಕೆ ದೂತನನ್ನು ಕಳುಹಿಸಿದನು; ಆದರೆ ಆ ದೂತನು ಸಂಹರಿಸುವದಕ್ಕಿದ್ದಾಗ ಯೆಹೋವನು ಅದನ್ನು ಕಂಡು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪ ಪಟ್ಟು ಸಂಹಾರಕದೂತನಿಗೆ - ಸಾಕು, ನಿನ್ನ ಕೈಯನ್ನು ಹಿಂದೆಗೆ ಎಂದು ಆಜ್ಞಾಪಿಸಿದನು. ಆಗ ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದೇವರು ಜೆರುಸಲೇಮಿನ ಜನರನ್ನು ನಾಶನ ಮಾಡುವುದಕ್ಕೆ ದೂತನನ್ನು ಕಳುಹಿಸಿದನು. ಯೆಹೋವನು ಅದನ್ನು ನೋಡಿ ದುಃಖಗೊಂಡು ಜನರನ್ನು ನಾಶಮಾಡಲು ಬಂದಿದ್ದ ದೂತನಿಗೆ, “ಸಾಕು, ಇನ್ನು ನಿಲ್ಲಿಸು” ಅಂದನು. ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:15
24 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ನಿಟ್ಟುಸಿರುಬಿಟ್ಟು, ತಮ್ಮ ಹೃದಯದಲ್ಲಿ ನೊಂದುಕೊಂಡರು.


ಆಗ ಯೆಹೋವ ದೇವರು ತಮ್ಮ ಜನರಿಗೆ ಮಾಡುವೆನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಮಾರ್ಪಡಿಸಿಕೊಂಡರು.


ಯೇಸು ಮೂರನೆಯ ಸಾರಿ ಬಂದು ಅವರಿಗೆ, “ಇನ್ನೂ ವಿಶ್ರಮಿಸುತ್ತಿದ್ದೀರಾ? ಸಾಕು! ಸಮಯವು ಸಮೀಪಿಸಿದೆ; ಮನುಷ್ಯಪುತ್ರನಾದ ನಾನು ಪಾಪಿಗಳ ಕೈವಶವಾಗಲಿದ್ದೇನೆ.


“ಮೊರೇಷೆತಿನವನಾದ ಮೀಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ, ಯೆಹೂದದ ಜನರಿಗೆಲ್ಲಾ ಹೇಳಿದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಚೀಯೋನನ್ನು ಹೊಲದ ಹಾಗೆ ಉಳಲಾಗುವುದು; ಯೆರೂಸಲೇಮು ಹಾಳುದಿಬ್ಬಗಳಾಗುವುದು; ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.’


“ ‘ಆದರೆ ಈಗ ಶೀಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಎಂದರೆ, ನಾನು ಮೊದಲು ನನ್ನ ಹೆಸರನ್ನು ಸ್ಥಾಪಿಸಿದ ಸ್ಥಳಕ್ಕೆ ಹೋಗಿರಿ; ಅದಕ್ಕೆ ನಾನು, ನನ್ನ ಜನರಾದ ಇಸ್ರಾಯೇಲರ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.


ಯೆಹೋವ ದೇವರೇ, ಮನಸ್ಸು ಮಾರ್ಪಡಿಸಿಕೊಳ್ಳಿರಿ. ನೀವು ಎಷ್ಟರವರೆಗೆ ಬೇಸರಗೊಳ್ಳುವಿರಿ? ನಿಮ್ಮ ಸೇವಕರ ವಿಷಯದಲ್ಲಿ ಅನುಕಂಪ ತೋರಿಸಿರಿ.


ಆದಾಗ್ಯೂ ದೇವರು ಅವರನ್ನು ಕರುಣಿಸಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಬಿಟ್ಟುಬಿಟ್ಟರು. ಹೌದು, ಅನೇಕ ಸಾರಿ ದೇವರು ಕೋಪಿಸಿಕೊಳ್ಳದಿದ್ದರು, ತಮ್ಮ ಬೇಸರವನ್ನು ದೇವರು ಪ್ರಯೋಗಿಸಲಿಲ್ಲ.


ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆ ದಾವೀದನಿಗೆ ಯೆಹೋವ ದೇವರು ಕಾಣಿಸಿಕೊಂಡ ಸ್ಥಳವಾದ ಮೊರೀಯಾ ಬೆಟ್ಟದ ಮೇಲೆ, ದಾವೀದನು ಸಿದ್ಧಮಾಡಿದ ಸ್ಥಳವಾದ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿದನು.


ಆದರೆ ಅವನು ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತು, ತಾನು ಸಾಯಬೇಕೆಂದು ಅಪೇಕ್ಷಿಸಿ, “ಯೆಹೋವ ದೇವರೇ, ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಕೋ. ಏಕೆಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ,” ಎಂದನು.


ಆ ದಿವಸವೇ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿಸು,” ಎಂದನು.


ದೂತನು ಯೆರೂಸಲೇಮನ್ನು ನಾಶಮಾಡಲು, ಅದರ ಮೇಲೆ ತನ್ನ ಕೈಚಾಚಿದಾಗ, ಯೆಹೋವ ದೇವರು ಆ ದಂಡನೆಗಾಗಿ ನೊಂದುಕೊಂಡು, ಜನರನ್ನು ಸಂಹರಿಸುತ್ತಿದ್ದ ದೇವದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದರು. ಆಗ ಯೆಹೋವ ದೇವರ ದೂತನು ಯೆಬೂಸಿಯನಾದ ಅರೌನನ ಕಣದ ಬಳಿಯಲ್ಲಿ ಇದ್ದನು.


ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು, ಯೆಹೋವ ದೇವರನ್ನು ಸೇವಿಸಿದರು. ಆಗ ಯೆಹೋವ ದೇವರು ಇಸ್ರಾಯೇಲಿನ ಕಷ್ಟಕ್ಕೋಸ್ಕರ ಮನಸ್ಸಿನಲ್ಲಿ ಬಹಳ ನೊಂದುಕೊಂಡರು.


ಯೆಹೋವ ದೇವರು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿದಾಗ, ಯೆಹೋವ ದೇವರು ನ್ಯಾಯಾಧಿಪತಿಯ ಸಂಗಡ ಇದ್ದು, ಆ ನ್ಯಾಯಾಧಿಪತಿಯ ದಿವಸಗಳಲ್ಲೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ತಪ್ಪಿಸಿ ರಕ್ಷಿಸುತ್ತಿದ್ದರು. ಏಕೆಂದರೆ ಅವರು ತಮ್ಮನ್ನು ಬಾಧಿಸಿ, ಶ್ರಮೆಪಡಿಸುವವರ ನಿಮಿತ್ತ ಗೋಳಾಡಿದ್ದರಿಂದ ಯೆಹೋವ ದೇವರು ಕನಿಕರಪಟ್ಟರು.


ಆದ್ದರಿಂದ ಈ ಬಲವಾದ ಗುಡುಗುಗಳೂ ಆಲಿಕಲ್ಲಿನ ಮಳೆಯೂ ಇನ್ನು ಸಾಕು. ಇವುಗಳು ನಿಂತುಹೋಗುವಂತೆ ಯೆಹೋವ ದೇವರನ್ನು ಬೇಡಿಕೊಳ್ಳಿರಿ, ನೀವು ಇನ್ನು ಇಲ್ಲಿ ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು,” ಎಂದನು.


ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ: “ಯೆಹೋವ ದೇವರೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನು ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು. ನೀವು ಕೃಪೆಯೂ ಅನುಕಂಪವೂ ಪ್ರೀತಿಯಲ್ಲಿ ಐಶ್ವರ್ಯವುಳ್ಳ ದೇವರೆಂದೂ ಕೇಡಿನ ವಿಷಯವಾಗಿ ಮನಮರುಗುವವರೆಂದೂ ನನಗೆ ತಿಳಿದಿತ್ತು.


ಈ ದೇವಾಲಯಕ್ಕೆ ಶೀಲೋವಿನ ಹಾಗೆ ಆಗುವುದೆಂದೂ, ಈ ಪಟ್ಟಣವೂ ನಿವಾಸಿಗಳಿಲ್ಲದೆ ಹಾಳಾಗುವುದೆಂದೂ ಯೆಹೋವ ದೇವರ ಹೆಸರಿನಲ್ಲಿ ಏಕೆ ನೀನು ಪ್ರವಾದಿಸಿದ್ದೀ?” ಎಂದರು. ಆಗ ಜನರೆಲ್ಲರು ಯೆಹೋವ ದೇವರ ಆಲಯದಲ್ಲಿ ಯೆರೆಮೀಯನಿಗೆ ವಿರೋಧವಾಗಿ ಕೂಡಿಕೊಂಡರು.


ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕನ ಕೈಯಿಂದ ಸಂಹಾರವಾದಂತೆ ನೀವೂ ಗೊಣಗುಟ್ಟಬೇಡಿರಿ.


ಏಕೆಂದರೆ ಈ ಸ್ಥಳದವರ ಕೂಗು ಯೆಹೋವ ದೇವರ ಸನ್ನಿಧಿಯಲ್ಲಿ ದೊಡ್ಡದಾಗಿರುವುದರಿಂದ ನಾವು ಇದನ್ನು ನಾಶ ಮಾಡುತ್ತೇವೆ. ಯೆಹೋವ ದೇವರು ನಮ್ಮನ್ನು ಕಳುಹಿಸಿದ್ದಾರೆ.”


“ನಾನು ಸೌಲನನ್ನು ಅರಸನಾಗಿ ಮಾಡಿದ್ದರಿಂದ ದುಃಖಪಡುತ್ತೇನೆ. ಏಕೆಂದರೆ ಅವನು ನನ್ನನ್ನು ಹಿಂಬಾಲಿಸುವುದನ್ನು ಬಿಟ್ಟು, ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ,” ಎಂದರು. ಅದಕ್ಕೆ ಸಮುಯೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವ ದೇವರಿಗೆ ಮೊರೆಯಿಟ್ಟನು.


ಆಗ ದೇವರು, ನಿನೆವೆಯವರು ತಮ್ಮ ದುರ್ಮಾರ್ಗವನ್ನು ಬಿಟ್ಟು ತಿರುಗಿಕೊಂಡರೆಂದು ಕಂಡು, ತಾವು ವಿಧಿಸುವುದಾಗಿ ನುಡಿದ ವಿನಾಶವನ್ನು ಅವರ ಮೇಲೆ ಬರಮಾಡದೆ, ಅವರನ್ನು ಕನಿಕರಿಸಿದರು.


ಯೆಹೋವ ದೇವರು ಇದನ್ನು ಕುರಿತು ಮನಮರುಗಿ, “ಈ ದರ್ಶನ ನೆರವೇರುವುದಿಲ್ಲ,” ಎಂದರು.


ಆಗ ಸಾರ್ವಭೌಮ ಯೆಹೋವ ದೇವರು ಇದನ್ನು ಕುರಿತು ಮನಮರುಗಿ, “ಈ ದರ್ಶನ ನೆರವೇರುವುದಿಲ್ಲ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು