Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:24 - ಕನ್ನಡ ಸಮಕಾಲಿಕ ಅನುವಾದ

24 ಅರಸ ದಾವೀದನು ಒರ್ನಾನನಿಗೆ, “ಹಾಗಲ್ಲ, ನಾನು ನಿನ್ನಿಂದ ಪೂರ್ಣ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನಿನ್ನದನ್ನು ಕ್ರಯವಿಲ್ಲದೆ ತೆಗೆದುಕೊಂಡು, ಯೆಹೋವ ದೇವರಿಗೆ ದಹನಬಲಿಯಾಗಿ ಅರ್ಪಿಸಲು ನನಗೆ ಇಷ್ಟವಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅರಸನಾದ ದಾವೀದನು ಒರ್ನಾನನಿಗೆ “ಹಾಗಲ್ಲ ನಾನು ನಿನ್ನಿಂದ ಪೂರ್ಣ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ ನಿನಗೆ ಸೇರಿದ್ದನ್ನು ಕ್ರಯವಿಲ್ಲದೆ ತೆಗೆದುಕೊಂಡು ಯೆಹೋವನಿಗೆ ಯಜ್ಞವಾಗಿ ಅರ್ಪಿಸುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅರಸ ದಾವೀದನು ಒರ್ನಾನನಿಗೆ, “ಹಾಗಲ್ಲ, ನಾನು ನಿನ್ನಿಂದ ಪೂರ್ಣಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನಿನ್ನದನ್ನು ಕ್ರಯವಿಲ್ಲದೆ ತೆಗೆದುಕೊಂಡು ಸರ್ವೇಶ್ವರನಿಗೆ ಬಲಿಯಾಗಿ ಅರ್ಪಿಸಲು ನನಗೆ ಇಷ್ಟವಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅರಸನಾದ ದಾವೀದನು ಒರ್ನಾನನಿಗೆ - ಹಾಗಲ್ಲ, ನಾನು ನಿನ್ನಿಂದ ಪೂರ್ಣಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನಿನ್ನದನ್ನು ಕ್ರಯವಿಲ್ಲದೆ ತೆಗೆದುಕೊಂಡು ಯೆಹೋವನಿಗೆ ಯಜ್ಞವಾಗಿ ಅರ್ಪಿಸಲೊಲ್ಲೆನು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅದಕ್ಕೆ ದಾವೀದನು, “ನೋಡು, ನಾನು ಅವಕ್ಕೆಲ್ಲಾ ಪೂರ್ಣಕ್ರಯ ಕೊಡುತ್ತೇನೆ. ನಿನ್ನಿಂದ ನಾನು ಪುಕ್ಕಟೆಯಾಗಿ ತೆಗೆದುಕೊಂಡದ್ದನ್ನು ದೇವರಿಗೆ ಸಮರ್ಪಿಸುವುದಿಲ್ಲ. ಧರ್ಮಾರ್ಥವಾಗಿ ದೊರೆತದ್ದನ್ನು ದೇವರಿಗೆ ಕಾಣಿಕೆಯಾಗಿ ಕೊಡುವದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:24
9 ತಿಳಿವುಗಳ ಹೋಲಿಕೆ  

ದೇಶದ ಜನರು ಕೇಳುವಂತೆ ಎಫ್ರೋನನಿಗೆ, “ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು. ನಾನು ಹೊಲದ ಕ್ರಯವನ್ನು ಕೊಡುತ್ತೇನೆ. ಅದನ್ನು ನನ್ನಿಂದ ತೆಗೆದುಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಳಿಡುವೆನು,” ಎಂದನು.


ನಿನಗೆ ಸೇರಿದ ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಾನು ತೆಗೆದುಕೊಳ್ಳುವುದಿಲ್ಲ. ಏಕೆಂದರೆ, ‘ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ’ ಎಂದು ನೀನು ಹೇಳಬಾರದು.


ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿಯೂ ಒಳ್ಳೆಯದನ್ನು ಮಾಡಿರಿ.


ಆದರೆ ಅರಸನು ಅರೌನನಿಗೆ, “ಹಾಗಲ್ಲ, ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ಉಚಿತವಾಗಿ ಸಿಕ್ಕಿದ್ದನ್ನು ದಹನಬಲಿಯಾಗಿ ನನ್ನ ದೇವರಾದ ಯೆಹೋವ ದೇವರಿಗೆ ಅರ್ಪಿಸೆನು,” ಎಂದನು. ಹೀಗೆ ದಾವೀದನು ಆ ಕಣವನ್ನೂ, ಎತ್ತುಗಳನ್ನೂ, ಐವತ್ತು ಬೆಳ್ಳಿ ನಾಣ್ಯಗಳಿಗೆ ಕೊಂಡುಕೊಂಡನು.


ಒರ್ನಾನನು ದಾವೀದನಿಗೆ, “ನಿನಗಾಗಿ ತೆಗೆದುಕೋ, ಅರಸನಾದ ನನ್ನ ಒಡೆಯನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ. ದಹನಬಲಿಗೋಸ್ಕರ ಎತ್ತುಗಳೂ, ಸೌದೆಗೆ ಹಂತೀಕುಂಟೆ, ಧಾನ್ಯ ಸಮರ್ಪಣೆಗೋಸ್ಕರ ಗೋಧಿ ಕೊಡುವುದಲ್ಲದೆ, ಸಮಸ್ತವನ್ನೂ ಕೊಡುವೆನು,” ಎಂದನು.


ಅಂತೆಯೇ ಆ ಭೂಮಿಗಾಗಿ ಒರ್ನಾನನಿಗೆ ಏಳು ಕಿಲೋಗ್ರಾಂ ಬಂಗಾರವನ್ನು ಕೊಟ್ಟು,


ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲಾ ಗವಿಯನ್ನು ನನಗೆ ಕೊಡಲಿ. ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು