1 ಪೂರ್ವಕಾಲ ವೃತ್ತಾಂತ 21:3 - ಕನ್ನಡ ಸಮಕಾಲಿಕ ಅನುವಾದ3 ಆಗ ಯೋವಾಬನು, “ಯೆಹೋವ ದೇವರು ತಮ್ಮ ಜನರನ್ನು ಈಗ ಇರುವುದಕ್ಕಿಂತ ನೂರರಷ್ಟಾಗಿ ಹೆಚ್ಚಿಸಲಿ. ಆದರೆ ನನ್ನ ಒಡೆಯನಾದ ಅರಸನೇ, ಅವರೆಲ್ಲರೂ ನನ್ನ ಒಡೆಯನ ಸೇವಕರಲ್ಲವೋ, ನನ್ನ ಒಡೆಯನು ಈ ಕಾರ್ಯವನ್ನು ಅಪೇಕ್ಷಿಸುವುದು ಏಕೆ? ಇದು ಇಸ್ರಾಯೇಲಿನಲ್ಲಿ ಅಪರಾಧಕ್ಕೆ ಕಾರಣವಾಗುವುದು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಯೋವಾಬನು, “ನನ್ನ ಒಡೆಯನಾದ ಅರಸನೇ, ಯೆಹೋವನು ತನ್ನ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ. ಅವರೆಲ್ಲರೂ ನನ್ನ ಒಡೆಯನ ದಾಸರಷ್ಟೆ. ಒಡೆಯನು ಇಂಥದ್ದನ್ನು ಅಪೇಕ್ಷಿಸುವುದೇನು? ಇಸ್ರಾಯೇಲರನ್ನು ಅಪರಾಧಕ್ಕೆ ಗುರಿಮಾಡುವುದೇಕೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಯೋವಾಬನು, “ನನ್ನ ಒಡೆಯರಾದ ಅರಸರೇ, ಸರ್ವೇಶ್ವರ ತಮ್ಮ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ; ಅವರೆಲ್ಲರೂ ನನ್ನ ಒಡೆಯರ ಸೇವಕರಷ್ಟೇ. ಆದರೆ ಒಡೆಯರು ಇಂಥದನ್ನು ಅಪೇಕ್ಷಿಸಿದ್ದೇಕೆ? ಇಸ್ರಯೇಲರನ್ನು ಅಪರಾಧಕ್ಕೆ ಗುರಿಮಾಡುವುದೇಕೆ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಯೋವಾಬನು - ನನ್ನ ಒಡೆಯನಾದ ಅರಸನೇ, ಯೆಹೋವನು ತನ್ನ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ. ಅವರೆಲ್ಲರೂ ನನ್ನ ಒಡೆಯನ ದಾಸರಷ್ಟೆ. ಒಡೆಯನು ಇಂಥದನ್ನು ಅಪೇಕ್ಷಿಸುವದೇನು? ಇಸ್ರಾಯೇಲ್ಯರನ್ನು ಅಪರಾಧಕ್ಕೆ ಗುರಿಮಾಡುವದೇಕೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅದಕ್ಕೆ ಉತ್ತರವಾಗಿ ಯೋವಾಬನು, “ಯೆಹೋವನು ತನ್ನ ಜನಾಂಗವನ್ನು ನೂರುಪಟ್ಟು ಅಭಿವೃದ್ಧಿಪಡಿಸಲಿ. ಅರಸನೇ, ನೀನು ಈ ಕಾರ್ಯವನ್ನು ಯಾಕೆ ಮಾಡಿಸಬೇಕು? ಹೀಗೆ ಮಾಡಿದರೆ ನೀನು ಎಲ್ಲಾ ಇಸ್ರೇಲರನ್ನು ಪಾಪದಲ್ಲಿ ಬೀಳುವಂತೆ ಮಾಡುತ್ತಿರುವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |