Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:4 - ಕನ್ನಡ ಸಮಕಾಲಿಕ ಅನುವಾದ

4 ಆದರೆ ಅರಸನ ಮಾತೇ ಯೋವಾಬನಿಗೆ ವಿರೋಧವಾಗಿ ಗೆದ್ದಿತು. ಆಗ ಅವನು ಹೊರಟು, ಇಸ್ರಾಯೇಲಿನ ಸಮಸ್ತ ಪ್ರಾಂತಗಳಿಗೆ ಹೋಗಿ, ಯೆರೂಸಲೇಮಿಗೆ ತಿರುಗಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ ಅರಸನು ಯೋವಾಬನಿಗೆ ಕಿವಿಗೊಡದೆ ತನ್ನ ಮಾತನ್ನೇ ನಡೆಸಿದ್ದರಿಂದ ಅವನು ಹೊರಟುಹೋಗಿ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಲ್ಲಿ ಸಂಚರಿಸಿ ಯೆರೂಸಲೇಮಿಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದರೆ ಅರಸನು ಯೋವಾಬನಿಗೆ ಕಿವಿಗೊಡದೆ ತನ್ನ ಮಾತನ್ನೇ ಸಾಧಿಸಿದ್ದರಿಂದ, ಅವನು ಹೊರಟುಹೋಗಿ ಇಸ್ರಯೇಲರ ಪ್ರಾಂತ್ಯಗಳಲ್ಲೆಲ್ಲಾ ಸಂಚರಿಸಿ ಜೆರುಸಲೇಮಿಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದರೆ ಅರಸನು ಯೋವಾಬನಿಗೆ ಕಿವಿಗೊಡದೆ ತನ್ನ ಮಾತನ್ನೇ ಸಾಧಿಸಿದ್ದರಿಂದ ಅವನು ಹೊರಟುಹೋಗಿ ಇಸ್ರಾಯೇಲ್ಯರ ಎಲ್ಲಾ ಪ್ರಾಂತಗಳಲ್ಲಿ ಸಂಚರಿಸಿ ಯೆರೂಸಲೇವಿುಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಅರಸನಾದ ದಾವೀದನು ತನ್ನ ನಿರ್ಧಾರವನ್ನು ಬದಲಿಸಲಿಲ್ಲ. ದಾವೀದನು ಹೇಳಿದಂತೆಯೇ ಯೋವಾಬನು ಮಾಡಬೇಕಾಯಿತು. ಯೋವಾಬನು ದೇಶದ ಎಲ್ಲಾ ಕಡೆಗಳಿಗೆ ಹೋಗಿ ಜನರನ್ನು ಲೆಕ್ಕಿಸಿ ಜೆರುಸಲೇಮಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:4
7 ತಿಳಿವುಗಳ ಹೋಲಿಕೆ  

ಪೇತ್ರ ಮತ್ತು ಇತರ ಅಪೊಸ್ತಲರು ಉತ್ತರವಾಗಿ, “ನಾವು ಮನುಷ್ಯರಿಗೆ ವಿಧೇಯರಾಗಿರುವುದಕ್ಕಿಂತ ದೇವರಿಗೆ ವಿಧೇಯರಾಗಿರಬೇಕಲ್ಲ!


ಆದರೆ ಒಂದು ವೇಳೆ ಅವರು ತಪ್ಪಿಸದಿದ್ದರೂ, ಅರಸನೇ ನಾವು ನಿನ್ನ ದೇವರುಗಳನ್ನು ಸೇವಿಸುವುದಿಲ್ಲವೆಂದೂ, ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲವೆಂದೂ ನಿನಗೆ ತಿಳಿದಿರಲಿ,” ಎಂದರು.


ಅರಸನ ಮಾತುಗಳೇ ಸರ್ವೋನ್ನತವಾದುದರಿಂದ, “ನೀನು ಮಾಡುವುದೇನು?” ಎಂದು ಅವನಿಗೆ ಪ್ರಶ್ನಿಸುವವರಾರು?


ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಈಜಿಪ್ಟಿನ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.


ಆಗ ಯೋವಾಬನು, “ಯೆಹೋವ ದೇವರು ತಮ್ಮ ಜನರನ್ನು ಈಗ ಇರುವುದಕ್ಕಿಂತ ನೂರರಷ್ಟಾಗಿ ಹೆಚ್ಚಿಸಲಿ. ಆದರೆ ನನ್ನ ಒಡೆಯನಾದ ಅರಸನೇ, ಅವರೆಲ್ಲರೂ ನನ್ನ ಒಡೆಯನ ಸೇವಕರಲ್ಲವೋ, ನನ್ನ ಒಡೆಯನು ಈ ಕಾರ್ಯವನ್ನು ಅಪೇಕ್ಷಿಸುವುದು ಏಕೆ? ಇದು ಇಸ್ರಾಯೇಲಿನಲ್ಲಿ ಅಪರಾಧಕ್ಕೆ ಕಾರಣವಾಗುವುದು,” ಎಂದನು.


ಯೋವಾಬನು ದಾವೀದನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನೆಂದರೆ: ಸಮಸ್ತ ಇಸ್ರಾಯೇಲರಲ್ಲಿ ಖಡ್ಗ ಹಿಡಿಯತಕ್ಕ ಪರಾಕ್ರಮವುಳ್ಳ ಹನ್ನೊಂದು ಲಕ್ಷಮಂದಿ ಇದ್ದರು. ಯೆಹೂದದ ಜನರು ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಮಂದಿ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು