Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 21:5 - ಕನ್ನಡ ಸಮಕಾಲಿಕ ಅನುವಾದ

5 ಯೋವಾಬನು ದಾವೀದನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನೆಂದರೆ: ಸಮಸ್ತ ಇಸ್ರಾಯೇಲರಲ್ಲಿ ಖಡ್ಗ ಹಿಡಿಯತಕ್ಕ ಪರಾಕ್ರಮವುಳ್ಳ ಹನ್ನೊಂದು ಲಕ್ಷಮಂದಿ ಇದ್ದರು. ಯೆಹೂದದ ಜನರು ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಮಂದಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೋವಾಬನು ದಾವೀದನಿಗೆ ಒಪ್ಪಿಸಿದ ಜನಗಣತಿಯ ಸಂಖ್ಯೆಯು ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಹನ್ನೊಂದು ಲಕ್ಷ ಮತ್ತು ಯೆಹೂದ್ಯರಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯೋವಾಬನು ದಾವೀದನಿಗೆ ಒಪ್ಪಿಸಿದ ಜನಗಣತಿಯ ಅಂಕೆಸಂಖ್ಯೆಗಳು ಇವು: ಇಸ್ರಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಹನ್ನೊಂದು ಲಕ್ಷ; ಯೆಹೂದ್ಯರಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೋವಾಬನು ದಾವೀದನಿಗೆ ಒಪ್ಪಿಸಿದ ಖಾನೇಷುಮಾರಿಯ ಸಂಖ್ಯೆಯು - ಇಸ್ರಾಯೇಲ್ಯರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಹನ್ನೊಂದು ಲಕ್ಷ; ಯೆಹೂದರಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅರಸನಿಗೆ ಜನಗಣತಿಯ ಲೆಕ್ಕ ಒಪ್ಪಿಸಿದನು. ಇಸ್ರೇಲಿನಲ್ಲಿ ಒಟ್ಟು ಹನ್ನೊಂದು ಲಕ್ಷ ಮಂದಿ ಖಡ್ಗ ಉಪಯೋಗಿಸುವವರು ಇದ್ದರು. ಯೆಹೂದದಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಮಂದಿ ಖಡ್ಗ ಉಪಯೋಗಿಸುವವರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 21:5
4 ತಿಳಿವುಗಳ ಹೋಲಿಕೆ  

ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನೆಂದರೆ: ಇಸ್ರಾಯೇಲರಲ್ಲಿ ಖಡ್ಗ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷಮಂದಿ ಇದ್ದರು.


ದಾವೀದನು ಇಪ್ಪತ್ತು ವರ್ಷಗಳೊಳಗೆ ಇದ್ದವರ ಲೆಕ್ಕ ತೆಗೆದುಕೊಳ್ಳಲಿಲ್ಲ. ಏಕೆಂದರೆ, “ಇಸ್ರಾಯೇಲನನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿ ಮಾಡುವೆನು,” ಎಂದು ಯೆಹೋವ ದೇವರು ಹೇಳಿದ್ದರು.


ಆದರೆ ಅರಸನ ಮಾತೇ ಯೋವಾಬನಿಗೆ ವಿರೋಧವಾಗಿ ಗೆದ್ದಿತು. ಆಗ ಅವನು ಹೊರಟು, ಇಸ್ರಾಯೇಲಿನ ಸಮಸ್ತ ಪ್ರಾಂತಗಳಿಗೆ ಹೋಗಿ, ಯೆರೂಸಲೇಮಿಗೆ ತಿರುಗಿಬಂದನು.


ಚೆರೂಯಳ ಮಗ ಯೋವಾಬನು ಎಣಿಸಲು ಆರಂಭಿಸಿದನು. ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ಕೋಪಾಗ್ನಿಯು ಬಂದದ್ದರಿಂದ, ಅವನು ಪೂರ್ತಿಗೊಳಿಸಲಿಲ್ಲ. ಆ ಲೆಕ್ಕವು ಅರಸನಾದ ದಾವೀದನ ಇತಿಹಾಸಗಳ ಪುಸ್ತಕದಲ್ಲಿ ಲಿಖಿತವಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು