Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:1 - ಕನ್ನಡ ಸಮಕಾಲಿಕ ಅನುವಾದ

1 ಆಗ ದಾವೀದನು, “ಇದೇ ದೇವರಾದ ಯೆಹೋವ ದೇವರ ಆಲಯ, ಮತ್ತು ಇದೇ ಇಸ್ರಾಯೇಲರ ದಹನಬಲಿಪೀಠ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ದಾವೀದನು, “ಇದೇ ದೇವರಾದ ಯೆಹೋವನ ಆಲಯ. ಇದೇ ಇಸ್ರಾಯೇಲರು ಯಜ್ಞವನ್ನು ಅರ್ಪಿಸತಕ್ಕ ಯಜ್ಞವೇದಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಇದೇ ದೇವರಾದ ಸರ್ವೇಶ್ವರನ ಆಲಯ; ಇದೇ ಇಸ್ರಯೇಲರು ಬಲಿ ಅರ್ಪಿಸತಕ್ಕ ಪೀಠ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇದೇ ದೇವರಾದ ಯೆಹೋವನ ಆಲಯ, ಇದೇ ಇಸ್ರಾಯೇಲ್ಯರು ಯಜ್ಞವರ್ಪಿಸತಕ್ಕ ವೇದಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಗ ದಾವೀದನು, “ದೇವರ ಆಲಯವೂ ಆತನ ಯಜ್ಞವೇದಿಕೆಯೂ ಇದೇ ಸ್ಥಳದಲ್ಲಿ ಕಟ್ಟಲ್ಪಡುವದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:1
16 ತಿಳಿವುಗಳ ಹೋಲಿಕೆ  

ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆ ದಾವೀದನಿಗೆ ಯೆಹೋವ ದೇವರು ಕಾಣಿಸಿಕೊಂಡ ಸ್ಥಳವಾದ ಮೊರೀಯಾ ಬೆಟ್ಟದ ಮೇಲೆ, ದಾವೀದನು ಸಿದ್ಧಮಾಡಿದ ಸ್ಥಳವಾದ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿದನು.


ಅವನು ಭಯಪಟ್ಟು, “ಈ ಸ್ಥಳವು ಎಷ್ಟೋ ಗಂಭೀರವಾದದ್ದು, ಇದು ದೇವರ ಮನೆಯೇ ಹೊರತು ಬೇರೆಯಲ್ಲ. ಇದೇ ಪರಲೋಕದ ಬಾಗಿಲು,” ಎಂದನು.


ಬಹುಶಃ ನೀವು, “ನಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿದ್ದೇವೆ,” ಎಂದು ಹೇಳಬಹುದು. “ಯೆರೂಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆ ಮಾಡಬೇಕು,” ಎಂದು ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ ಹಿಜ್ಕೀಯನು ಆಜ್ಞಾಪಿಸಿ, ಆ ಯೆಹೋವ ದೇವರ ಪೂಜಾಸ್ಥಳಗಳನ್ನೂ, ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೇ?


ಆ ದಿವಸವೇ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿಸು,” ಎಂದನು.


ದೇವರು ಸಿಲೋವಿನ ಗುಡಾರನ್ನೂ ಜನರೊಳಗೆ ಹಾಕಿದ ಗುಡಾರವನ್ನೂ ತಳ್ಳಿಬಿಟ್ಟರು.


ಈ ಹಿಜ್ಕೀಯನು ಅವನ ಪೂಜಾಸ್ಥಳಗಳನ್ನೂ, ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ, ‘ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು, ಅದರ ಮೇಲೆ ಧೂಪವನ್ನರ್ಪಿಸಬೇಕು,’ ಎಂದು ಹೇಳಿದ್ದಾನಲ್ಲವೇ?


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿಗಳನ್ನು, ಅರ್ಪಣೆಗಳನ್ನು, ಬೆಳೆಯ ದಶಮಾಂಶಗಳನ್ನು, ಯೆಹೋವ ದೇವರಿಗಾಗಿ ವಿಶೇಷ ಉಡುಗೊರೆಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ದಾವೀದನು ದೇವರ ಹತ್ತಿರ ವಿಚಾರಿಸಲು, ಅದರ ಬಳಿಗೆ ಹೋಗಲಾರದೆ ಇದ್ದನು. ಏಕೆಂದರೆ ಅವನು ಯೆಹೋವ ದೇವರ ದೂತನ ಖಡ್ಗದ ನಿಮಿತ್ತ ಹೆದರಿದ್ದನು.


ಯೆಹೋವ ದೇವರು ನಿಮ್ಮ ಗೋತ್ರಗಳ ಒಂದರಲ್ಲಿ ಆಯ್ದುಕೊಳ್ಳುವ ಸ್ಥಳದಲ್ಲೇ ನೀವು ನಿಮ್ಮ ದಹನಬಲಿಗಳನ್ನು ಅರ್ಪಿಸಬೇಕು. ಅಲ್ಲೇ ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಮಾಡಬೇಕು.


ಐದು ಚಿನ್ನದ ನಾಣ್ಯಗಳನ್ನು ಹೊಂದಿದವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ಚಿನ್ನದ ನಾಣ್ಯಗಳನ್ನು ಸಂಪಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು