Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:14 - ಕನ್ನಡ ಸಮಕಾಲಿಕ ಅನುವಾದ

14 “ಇಗೋ, ಕಷ್ಟಪಟ್ಟು ನಾನು ಯೆಹೋವ ದೇವರ ಆಲಯಕ್ಕೋಸ್ಕರ ಮೂರು ಸಾವಿರದ ನಾನೂರ ಎಪ್ಪತ್ತು ಮೆಟ್ರಿಕ್ ಟನ್ ಬಂಗಾರವನ್ನೂ, ಮೂವತ್ತ ನಾಲ್ಕು ಸಾವಿರದ ಐನೂರು ಮೆಟ್ರಿಕ್ ಟನ್ ಬೆಳ್ಳಿಯನ್ನೂ, ಲೆಕ್ಕವಿಲ್ಲದಷ್ಟು ಕಂಚನ್ನೂ, ಕಬ್ಬಿಣವನ್ನೂ ಮರಗಳನ್ನೂ, ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಸೇರಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಗೋ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಒಂದು ಲಕ್ಷ ತಲಾಂತು ಬಂಗಾರವನ್ನೂ, ಹತ್ತು ಲಕ್ಷ ತಲಾಂತು ಬೆಳ್ಳಿಯನ್ನೂ, ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ ಇವುಗಳನ್ನೂ ಕಲ್ಲು ಮತ್ತು ಮರಗಳನ್ನೂ ಕೂಡಿಸಿದ್ದೇನೆ. ನೀನು ಇದಕ್ಕೆ ಇನ್ನೂ ಹೆಚ್ಚು ಕೂಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಗೋ, ನಾನು ಬಹಳ ಪ್ರಯಾಸಪಟ್ಟು ಸರ್ವೇಶ್ವರನ ಆಲಯಕ್ಕಾಗಿ 3,400 ಮೆಟ್ರಿಕ್ ಟನ್ ಬಂಗಾರವನ್ನು 34,000 ಮೆಟ್ರಿಕ್ ಟನ್ ಬೆಳ್ಳಿಯನ್ನು ಹಾಗು ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ, ಕಲ್ಲುಮರಗಳನ್ನೂ ಕೂಡಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇಗೋ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಒಂದು ಲಕ್ಷ ತಲಾಂತು ಬಂಗಾರವನ್ನೂ ಹತ್ತು ಲಕ್ಷ ತಲಾಂತು ಬೆಳ್ಳಿಯನ್ನೂ ಲೆಕ್ಕವಿಲ್ಲದಷ್ಟು ತಾಮ್ರ ಕಬ್ಬಿಣ ಇವುಗಳನ್ನೂ ಕಲ್ಲುಮರಗಳನ್ನೂ ಕೂಡಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಸೊಲೊಮೋನನೇ, ನಾನು ಬಹು ಪ್ರಯಾಸಪಟ್ಟು ಯೆಹೋವನ ಆಲಯಕ್ಕೋಸ್ಕರ ಮೂರು ಸಾವಿರದ ಏಳುನೂರೈವತ್ತು ಟನ್ ಬಂಗಾರ, ಮೂವತ್ತೇಳು ಸಾವಿರದ ಐನೂರು ಟನ್ ಬೆಳ್ಳಿ ಮತ್ತು ತೂಕ ಮಾಡಲಾಗದಷ್ಟು ತಾಮ್ರ ಮತ್ತು ಕಬ್ಬಿಣವನ್ನು ಕೂಡಿಸಿಟ್ಟಿದ್ದೇನೆ. ಅಲ್ಲದೆ ಮರಗಳನ್ನು ಮತ್ತು ಕಲ್ಲುಗಳನ್ನು ಕೊಟ್ಟಿರುತ್ತೇನೆ. ಸೊಲೊಮೋನನೇ, ನೀನು ಇವುಗಳಿಗೆ ಇನ್ನೂ ಕೂಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:14
10 ತಿಳಿವುಗಳ ಹೋಲಿಕೆ  

ದಾವೀದನು ಬಾಗಿಲುಗಳ ಕದಗಳನ್ನು ಜೋಡಿಸುವುದಕ್ಕೆ ಬೇಕಾದ ಮೊಳೆಗಳಿಗೋಸ್ಕರ ಬಹಳ ಕಬ್ಬಿಣವನ್ನೂ, ಲೆಕ್ಕವಿಲ್ಲದಷ್ಟು ಕಂಚನ್ನೂ ಸಿದ್ಧಮಾಡಿಸಿದನು.


ಸೊಲೊಮೋನನು ಯೆಹೋವ ದೇವರ ಆಲಯಕ್ಕಾಗಿ ಮಾಡಿಸಿದ್ದ ಎರಡು ಕಂಬಗಳು, ಕಂಚಿನ ಸಮುದ್ರವೆಂಬ ಪಾತ್ರೆ, ಚಕ್ರದ ಬಂಡಿಗಳು, ಇವುಗಳನ್ನು ಮಾಡುವುದಕ್ಕೆ ತೂಕ ಮಾಡಲಾರದಷ್ಟು ಕಂಚು ಹಿಡಿದಿತ್ತು.


ಸೊಲೊಮೋನನಿಗೆ ಪ್ರತಿ ವರುಷ ಸುಮಾರು ಇಪ್ಪತ್ತಮೂರು ಸಾವಿರ ಕಿಲ್ರೊಗ್ರಾಂ ಬಂಗಾರವು ದೊರಕುತ್ತಿತ್ತು.


ಅವರು ಘೋರ ಹಿಂಸೆಯ ನಡುವೆಯಿದ್ದರೂ ಕಡುಬಡತನದಲ್ಲಿ ಬಳಲುತ್ತಿದ್ದರೂ ಅವರು ಬಹಳ ಸಂತೋಷದಿಂದ, ಉದಾರಮನಸ್ಸಿನಿಂದ ಕೊಡುವವರಾಗಿದ್ದಾರೆ.


ಅರಸನಾದ ಸೊಲೊಮೋನನು ಯೆಹೋವ ದೇವರ ಆಲಯಕ್ಕಾಗಿ ಮಾಡಿಸಿದ್ದ ಎರಡು ಕಂಬಗಳು, ನೀರನ್ನು ಸಂಗ್ರಹಿಸಲು ಮಾಡಿದ ದೊಡ್ಡ ಕಂಚಿನ ಪಾತ್ರೆ, ಪೀಠಗಳನ್ನು ಹೊರುವ ಹನ್ನೆರಡು ಕಂಚಿನ ಹೋರಿಗಳು, ಇವುಗಳನ್ನು ಮಾಡುವುದಕ್ಕೆ ತೂಕ ಮಾಡಲಾರದಷ್ಟು ಕಂಚು ಹಿಡಿದಿತ್ತು.


ಸೊಲೊಮೋನನು ಮಾಡಿಸಿದ ಈ ಸಲಕರಣೆಗಳೆಲ್ಲಾ ಬಹು ಹೆಚ್ಚಾಗಿದ್ದರಿಂದ ಅವುಗಳನ್ನು ಎಣಿಸದೆ ಬಿಟ್ಟನು, ಹೀಗಾಗಿ ಕಂಚಿನ ತೂಕವು ಎಷ್ಟೆಂದು ನಿರ್ಧರಿಸಲಾಗಲಿಲ್ಲ.


ಇದಲ್ಲದೆ ನಿನ್ನ ಬಳಿಯಲ್ಲಿ ಕೆಲಸದವರೂ, ಕಲ್ಲು ಕೆಲಸದವರೂ, ಕಲ್ಲುಕುಟಿಗರೂ, ಬಡಗಿಯವರೂ, ಸಮಸ್ತ ವಿವಿಧ ಕೆಲಸದ ಪ್ರವೀಣರೂ ಅನೇಕ ಮಂದಿ ಇದ್ದಾರೆ.


ಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು 130 ಶೆಕೆಲ್, ಒಂದೊಂದು ಬಟ್ಟಲಿನ ತೂಕವು 70 ಶೆಕೆಲ್. ಬೆಳ್ಳಿಯ ಎಲ್ಲಾ ಸಾಮಗ್ರಿಗಳ ತೂಕ ಪರಿಶುದ್ಧಸ್ಥಳದ ನೇಮದ ಪ್ರಕಾರ 2,400 ಶೆಕೆಲ್.


ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ, ಬಂಗಾರದ ಕೆಲಸಕ್ಕೋಸ್ಕರ ಬಂಗಾರವನ್ನೂ, ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ, ಕಂಚಿನ ಕೆಲಸಕ್ಕೋಸ್ಕರ ಕಂಚನ್ನೂ, ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ, ಮರದ ಕೆಲಸಕ್ಕೋಸ್ಕರ ಮರವನ್ನೂ, ಗೋಮೇಧಿಕ ರತ್ನಗಳನ್ನೂ; ಕೆತ್ತುವುದಕ್ಕೆ ರತ್ನ ವಿಚಿತ್ರವಾದಂಥ ಕಲ್ಲುಗಳನ್ನೂ; ಸಕಲ ಅಮೂಲ್ಯವಾದ ಕಲ್ಲುಗಳನ್ನೂ. ಅಮೃತ ಶಿಲೆಗಳನ್ನೂ ಬಹಳಷ್ಟು ಸಿದ್ಧಮಾಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು