1 ಪೂರ್ವಕಾಲ ವೃತ್ತಾಂತ 22:2 - ಕನ್ನಡ ಸಮಕಾಲಿಕ ಅನುವಾದ2 ದಾವೀದನು ಇಸ್ರಾಯೇಲ್ ದೇಶದಲ್ಲಿರುವ ಪರದೇಶಸ್ಥರನ್ನು ಕೂಡಿಸಲು ಹೇಳಿ, ದೇವರ ಆಲಯವನ್ನು ಕಟ್ಟಿಸುವುದಕ್ಕೆ ಕೆತ್ತಿದ ಕಲ್ಲುಗಳನ್ನು ಕಡಿಯುವ ಹಾಗೆ ಕಲ್ಲುಕುಟಿಗರನ್ನು ನೇಮಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅನಂತರ ದಾವೀದನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯಜನಗಳನ್ನು ಒಟ್ಟುಗೂಡಿಸುವುದಕ್ಕೆ ಆಜ್ಞಾಪಿಸಿ, ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅನಂತರ ದಾವೀದನು ಇಸ್ರಯೇಲ್ ನಾಡಿನಲ್ಲಿದ್ದ ಅನ್ಯಜನಗಳನ್ನು ಕೂಡಿಸುವುದಕ್ಕೆ ಆಜ್ಞಾಪಿಸಿದನು. ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅನಂತರ ದಾವೀದನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯಜನಗಳನ್ನು ಕೂಡಿಸುವದಕ್ಕೆ ಆಜ್ಞಾಪಿಸಿ ಅವರಲ್ಲಿದ್ದ ಕಲ್ಲು ಕುಟಿಗರನ್ನು ದೇವಾಲಯ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವದಕ್ಕೆ ನೇವಿುಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಇಸ್ರೇಲಿನಲ್ಲಿ ವಾಸಿಸುತ್ತಿದ್ದ ಪರದೇಶಸ್ಥರನ್ನೆಲ್ಲಾ ದಾವೀದನು ಬರಹೇಳಿ ಅವರಲ್ಲಿಂದ ಕಲ್ಲುಕುಟಿಗರನ್ನು ಆರಿಸಿ ತೆಗೆದುಕೊಂಡನು. ದೇವಾಲಯವನ್ನು ಕಟ್ಟಲು ಕಲ್ಲುಗಳನ್ನು ಕೆತ್ತಿ ತಯಾರಿಸುವ ಕೆಲಸ ಅವರದಾಗಿತ್ತು. ಅಧ್ಯಾಯವನ್ನು ನೋಡಿ |