1 ಪೂರ್ವಕಾಲ ವೃತ್ತಾಂತ 22:5 - ಕನ್ನಡ ಸಮಕಾಲಿಕ ಅನುವಾದ5 ದಾವೀದನು, “ನನ್ನ ಮಗ ಸೊಲೊಮೋನನು ಎಳೆಯ ಪ್ರಾಯದವನಾಗಿದ್ದಾನೆ. ಯೆಹೋವ ದೇವರಿಗೆ ಕಟ್ಟಬೇಕಾದ ಆಲಯವು ಸಮಸ್ತ ದೇಶಗಳಲ್ಲಿ ಕೀರ್ತಿಯಲ್ಲಿಯೂ, ಸೌಂದರ್ಯದಲ್ಲಿಯೂ ಅಧಿಕ ಘನವುಳ್ಳದ್ದಾಗಿರಬೇಕು. ನಾನು ಅದಕ್ಕೋಸ್ಕರ ಈಗ ಸಿದ್ಧಮಾಡುವೆನು,” ಎಂದು ಹೇಳಿದನು. ಆದ್ದರಿಂದ ದಾವೀದನು ಸಾಯುವುದಕ್ಕಿಂತ ಮುಂಚೆ ಬಹಳವಾಗಿ ಸಿದ್ಧಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದಾವೀದನು ತನ್ನ ಮನಸ್ಸಿನಲ್ಲಿ ತನ್ನ ಮಗನಾದ ಸೊಲೊಮೋನನು ಎಳೆ ಪ್ರಾಯದವನಾಗಿದ್ದಾನೆ. ಯೆಹೋವನಿಗೋಸ್ಕರ ಕಟ್ಟಿಸತಕ್ಕ ಆಲಯದ ಕೀರ್ತಿಯು ಎಲ್ಲಾ ದೇಶಗಳಲ್ಲಿ ಘನತೆಯನ್ನು ಹೊಂದಬೇಕಾದರೆ ಅದು ಅಧಿಕ ಶೋಭಾಯಮಾನವಾಗಿರಬೇಕು. ಆದುದರಿಂದ ಅದಕ್ಕೆ ಬೇಕಾಗುವುದನ್ನೆಲ್ಲಾ ಸಿದ್ಧಪಡಿಸುವೆನು ಅಂದುಕೊಂಡು ಸಾಯುವುದಕ್ಕೆ ಮೊದಲೇ ಎಲ್ಲಾ ಸಿದ್ಧತೆಗಳನ್ನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ದಾವೀದನು ತನ್ನಲ್ಲೇ, “ನನ್ನ ಮಗ ಸೊಲೊಮೋನನು ಎಳೇ ಪ್ರಾಯದವನು. ಸರ್ವೇಶ್ವರನಿಗೆ ಕಟ್ಟಿಸತಕ್ಕ ದೇವಾಲಯವು, ಜಗತ್ತಿನಲ್ಲೆಲ್ಲಾ ಸುಪ್ರಸಿದ್ಧವಾಗಿರಬೇಕು; ಅದು ಅತಿ ಅದ್ಭುತಕರವಾಗಿರಬೇಕು; ಆದುದರಿಂದ ಅದಕ್ಕೆ ಬೇಕಾಗುವುದನ್ನೆಲ್ಲಾ ಸಿದ್ಧಪಡಿಸುವೆನು,” ಎಂದುಕೊಂಡನು. ಸಾಯುವುದಕ್ಕೆ ಮೊದಲೇ ಹಲವಾರು ಸಲಕರಣೆಗಳನ್ನು ದೊಡ್ಡ ಸಂಖ್ಯೆಯಲ್ಲಿ ಸಜ್ಜು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ದಾವೀದನು [ತನ್ನ ಮನಸ್ಸಿನಲ್ಲಿ] - ನನ್ನ ಮಗನಾದ ಸೊಲೊಮೋನನು ಎಳೇ ಪ್ರಾಯದವನಾಗಿದ್ದಾನೆ; ಯೆಹೋವನಿಗೋಸ್ಕರ ಕಟ್ಟಿಸತಕ್ಕ ಆಲಯವು ಎಲ್ಲಾ ದೇಶಗಳಲ್ಲಿ ಕೀರ್ತಿ ಘನಗಳನ್ನು ಹೊಂದಬೇಕಾದರೆ ಅದು ಅಧಿಕ ಶೋಭಾಯಮಾನವಾದದ್ದಾಗಿರಬೇಕು; ಆದದರಿಂದ ಅದಕ್ಕೆ ಬೇಕಾಗುವದನ್ನೆಲ್ಲಾ ಸಿದ್ಧಪಡಿಸುವೆನು ಅಂದುಕೊಂಡು ಸಾಯುವದಕ್ಕೆ ಮೊದಲೇ ಬಹಳವಾಗಿ ಸೌರಣೆಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ದಾವೀದನು, “ನಾವು ನಮ್ಮ ದೇವರಿಗೆ ಮಹಾದೊಡ್ಡ ಆಲಯವನ್ನು ಕಟ್ಟಿಸಬೇಕು. ಆದರೆ ನನ್ನ ಮಗನಾದ ಸೊಲೊಮೋನನು ಇನ್ನೂ ಎಳೆಪ್ರಾಯದವನು; ಅವನು ಕಲಿಯ ಬೇಕಾದದ್ದು ಇನ್ನೂ ಬೇಕಾದಷ್ಟಿದೆ. ದೇವಾಲಯವು ಎಲ್ಲಾ ಜನಾಂಗಗಳಲ್ಲಿ ಪ್ರಸಿದ್ಧವಾಗಿದ್ದು ಅದರ ಸೌಂದರ್ಯ ಮತ್ತು ವಿನ್ಯಾಸವು ಹೆಸರುವಾಸಿಯಾಗಿರಬೇಕು. ಅದಕ್ಕಾಗಿಯೇ ನಾನು ಆ ದೇವಾಲಯಕ್ಕಾಗಿ ಸಮಸ್ತವನ್ನು ಸಿದ್ಧಪಡಿಸುತ್ತೇನೆ” ಅಂದುಕೊಂಡನು. ಅಲ್ಲದೆ ಅವನು ಸಾಯುವುದಕ್ಕಿಂತ ಮುಂಚೆ ದೇವಾಲಯವನ್ನು ಕಟ್ಟುವುದಕ್ಕೆ ಬೇಕಾಗಿರುವವುಗಳನ್ನೆಲ್ಲಾ ಕೂಡಿಸಿಟ್ಟನು. ಅಧ್ಯಾಯವನ್ನು ನೋಡಿ |
ನನ್ನ ದೇವರಾದ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವುದಕ್ಕೂ, ದೇವಸನ್ನಿಧಿಗೆ ಪರಿಮಳ ಧೂಪವನ್ನು ಅರ್ಪಿಸುವ ನಿತ್ಯ ಸಮ್ಮುಖದ ರೊಟ್ಟಿಗೋಸ್ಕರವೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಇಸ್ರಾಯೇಲರಿಗೆ ನಿರಂತರವಾಗಿರಲು ನೇಮಿಸಿದ ನಮ್ಮ ದೇವರಾದ ಯೆಹೋವ ದೇವರ ಹಬ್ಬಗಳಲ್ಲಿಯೂ, ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ನಮ್ಮ ದೇವರಾದ ಯೆಹೋವ ದೇವರ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.