1 ಪೂರ್ವಕಾಲ ವೃತ್ತಾಂತ 22:7 - ಕನ್ನಡ ಸಮಕಾಲಿಕ ಅನುವಾದ7 ದಾವೀದನು ಸೊಲೊಮೋನನಿಗೆ, “ನನ್ನ ಮಗನೇ, ನಾನು ನನ್ನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಆಲಯವನ್ನು ಕಟ್ಟಿಸಬೇಕೆಂಬುದು ನನ್ನ ಹೃದಯದಲ್ಲಿ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದಾವೀದನು ಸೊಲೊಮೋನನಿಗೆ, “ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಅಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ದೇವಾಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದಾವೀದನು ಸೊಲೊಮೋನನಿಗೆ, “ನನ್ನ ಮಗನೇ, ನಾನು ನನ್ನ ದೇವರ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದಿದ್ದೆನು. ಅಧ್ಯಾಯವನ್ನು ನೋಡಿ |
ಇದಲ್ಲದೆ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆ ಸ್ಥಳವನ್ನು ಆರಿಸಿಕೊಂಡಿರಲು, ಯೆರೂಸಲೇಮಿನ ಈ ದೇವಾಲಯವನ್ನು ಕಟ್ಟಬೇಕೆಂಬ ಆಜ್ಞೆಯನ್ನು ಬದಲಿಸುವುದಕ್ಕಾಗಲಿ, ದೇವಾಲಯವನ್ನು ನಾಶಮಾಡುವುದಕ್ಕಾಗಲಿ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ, ಜನರನ್ನೂ ದೇವರು ನಾಶಮಾಡಲಿ. ದಾರ್ಯಾವೆಷನಾದ ನಾನು ಈ ಆಜ್ಞೆಯನ್ನು ಕೊಟ್ಟಿದ್ದೇನೆ. ಇದನ್ನು ಶ್ರದ್ಧೆಯಿಂದ ಪಾಲಿಸಬೇಕು, ಎಂಬುದು.
ನನ್ನ ದೇವರಾದ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವುದಕ್ಕೂ, ದೇವಸನ್ನಿಧಿಗೆ ಪರಿಮಳ ಧೂಪವನ್ನು ಅರ್ಪಿಸುವ ನಿತ್ಯ ಸಮ್ಮುಖದ ರೊಟ್ಟಿಗೋಸ್ಕರವೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಇಸ್ರಾಯೇಲರಿಗೆ ನಿರಂತರವಾಗಿರಲು ನೇಮಿಸಿದ ನಮ್ಮ ದೇವರಾದ ಯೆಹೋವ ದೇವರ ಹಬ್ಬಗಳಲ್ಲಿಯೂ, ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ನಮ್ಮ ದೇವರಾದ ಯೆಹೋವ ದೇವರ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.