Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 22:9 - ಕನ್ನಡ ಸಮಕಾಲಿಕ ಅನುವಾದ

9 ಶಾಂತಿ ಸಮಾಧಾನದ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು. ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ವಿಶ್ರಾಂತಿಯನ್ನು ಕೊಡುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವುದು. ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಶಾಂತಿ ಸಮಾಧಾನವನ್ನೂ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿನಗೆ ಒಬ್ಬ ಮಗನು ಹುಟ್ಟುವನು, ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲಾ ವಿರೋಧಿಗಳನ್ನು ಅಡಗಿಸಿ, ಅವನಿಗೆ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಾಯೇಲರಿಗೆ ಸಮಾಧಾನವನ್ನೂ ಮತ್ತು ಸೌಭಾಗ್ಯವನ್ನೂ ದಯಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿನಗೆ ಒಬ್ಬ ಮಗ ಹುಟ್ಟುವನು; ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲ ವಿರೋಧಿಗಳನ್ನು ಅಡಗಿಸಿ ಅವನಿಗೆ ಶಾಂತಿ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನ ಎಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಯೇಲರಿಗೆ ಶಾಂತಿಸಮಾಧಾನವನ್ನೂ ಸೌಭಾಗ್ಯವನ್ನೂ ದಯಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿನಗೆ ಒಬ್ಬ ಮಗನು ಹುಟ್ಟುವನು; ಅವನು ಸಮಾಧಾನಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲಾ ವಿರೋಧಿಗಳನ್ನು ಅಣಗಿಸಿ ಅವನಿಗೆ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವದು. ಅವನ ಕಾಲದಲ್ಲಿ ಇಸ್ರಾಯೇಲ್ಯರಿಗೆ ಸಮಾಧಾನವನ್ನೂ ಸೌಭಾಗ್ಯವನ್ನೂ ದಯಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ನಿನ್ನ ನಂತರ ಬರುವ ನಿನ್ನ ಮಗನು ಸಮಾಧಾನ ಪುರುಷನಾಗಿರುವನು. ಅವನ ರಾಜ್ಯದಲ್ಲಿ ನಾನು ಶಾಂತಿಯನ್ನು ನೆಲೆಗೊಳಿಸುವೆನು. ಅವನ ಸುತ್ತಮುತ್ತಲಿರುವ ವೈರಿಗಳಿಂದ ಅವನಿಗೆ ಯಾವ ಕೇಡೂ ಉಂಟಾಗದು. ಅವನೇ ಸೊಲೊಮೋನನು. ಅವನ ಕಾಲದಲ್ಲಿ ಇಸ್ರೇಲರು ಸಮಾಧಾನದಿಂದ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 22:9
24 ತಿಳಿವುಗಳ ಹೋಲಿಕೆ  

ಹೀಗೆಯೇ ದಾನ್ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ, ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೇಲಿನಲ್ಲಿರುವ ಪ್ರತಿಯೊಬ್ಬ ಮನುಷ್ಯನು ತನ್ನ ದ್ರಾಕ್ಷಿಬಳ್ಳಿಯ ಕೆಳಗೂ, ತನ್ನ ಅಂಜೂರದ ಮರದ ಕೆಳಗೂ ಸುರಕ್ಷಿತವಾಗಿ ವಾಸವಾಗಿದ್ದರು.


ಆದರೆ ಈಗ ನನ್ನ ದೇವರಾದ ಯೆಹೋವ ದೇವರು, ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ, ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾರೆ.


ಯೆಹೂದ ಮತ್ತು ಇಸ್ರಾಯೇಲಿನ ಜನರು ಸಮುದ್ರದ ಮರಳಿನ ಹಾಗೆ ಅಸಂಖ್ಯಾತರಾದರು. ಅವರು ಉಂಡು ಕುಡಿದು ಸುಖದಿಂದ ಇದ್ದರು.


‘ಈಗಿರುವ ಆಲಯದ ಮಹಿಮೆಯು, ಹಿಂದಿನ ಆಲಯದ ಮಹಿಮೆಗಿಂತ ವಿಶೇಷವಾಗಿರುವುದು,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ‘ನಾನೇ ಈ ಸ್ಥಳದಲ್ಲಿ ಸಮಾಧಾನ ಕೊಡುವೆನು,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.”


ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ನದಿಯಂತೆ ಸಮಾಧಾನವನ್ನೂ, ಹರಿಯುವ ಹಳ್ಳದಂತೆ ಜನಾಂಗಗಳ ವೈಭವವನ್ನೂ ಆಕೆಯ ಕಡೆಗೆ ಬರಮಾಡುವೆನು. ಆಗ ನೀವು ಪಾನ ಮಾಡುವಿರಿ; ನಿಮ್ಮನ್ನು ಆಕೆಯ ಪಕ್ಕೆಯಲ್ಲಿ ಎತ್ತಿಕೊಂಡುಹೋಗುವರು. ನೀವು ಆಕೆಯ ಮಡಿಲಲ್ಲಿ ನಲಿದಾಡುವಿರಿ.


ನಾನು ತುಟಿಗಳಿಗೆ ಸ್ತೋತ್ರವನ್ನು ಉಂಟುಮಾಡುವೆನು; ದೂರವಾದವನಿಗೂ ಸಮೀಪವಾದವನಿಗೂ ಸಮಾಧಾನವಿರಲಿ, ಸಮಾಧಾನವಿರಲಿ. ನಾನು ಅವರನ್ನು ಸ್ವಸ್ಥ ಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಬೆಳಕನ್ನು ರೂಪಿಸುವವನೂ, ಕತ್ತಲನ್ನು ನಿರ್ಮಿಸುವವನೂ, ಸಮಾಧಾನವನ್ನು ಉಂಟುಮಾಡುವವನೂ, ವಿಪತ್ತನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.


ಯೆಹೋವ ದೇವರೇ, ನಮಗೆ ಸಮಾಧಾನವನ್ನು ವಿಧಿಸುವಿರಿ. ಏಕೆಂದರೆ ನೀವು ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದೀರಿ.


ಅರಸನ ದಿವಸಗಳಲ್ಲಿ ನೀತಿವಂತರು ವೃದ್ಧಿ ಆಗಲಿ. ಸಮೃದ್ಧಿಯಾದ ಸಮಾಧಾನವು ಚಂದ್ರನು ಇರುವವರೆಗೂ ಇರಲಿ.


ಆದರೆ ದೇವರು ಸುಮ್ಮನಿದ್ದರೆ ಅವರ ಮೇಲೆ, ತಪ್ಪುಹೊರಿಸುವವರು ಯಾರು? ದೇವರು ತಮ್ಮ ಮುಖವನ್ನು ವ್ಯಕ್ತಿಗಾಗಲಿ, ದೇಶಕ್ಕಾಗಲಿ ಮರೆಮಾಡಿದರೆ, ದೇವದರ್ಶನ ಪಡೆಯಬಲ್ಲವರು ಯಾರು?


ನಿನ್ನ ಆಯುಷ್ಕಾಲವು ಮುಗಿದ ಮೇಲೆ, ನೀನು ನಿನ್ನ ಪಿತೃಗಳ ಬಳಿಗೆ ಹೋಗಿ ವಿಶ್ರಮಿಸುವಾಗ, ನಾನು ನಿನ್ನ ಸಂತತಿಯಲ್ಲಿ ಒಬ್ಬನನ್ನು ನಿನ್ನ ಉತ್ತರಾಧಿಕಾರಿಯನ್ನಾಗಿ ನೇಮಿಸಿ, ಅವನ ರಾಜ್ಯವನ್ನು ಸ್ಥಿರಮಾಡುವೆನು.


ಗಿದ್ಯೋನನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ, “ಯೆಹೋವ ಶಾಲೋಮ್” ಎಂದು ಅದಕ್ಕೆ ಹೆಸರಿಟ್ಟನು. ಅದು ಈವರೆಗೂ ಅಬೀಯೆಜೆರ್ ಒಫ್ರದಲ್ಲಿ ಇನ್ನೂ ಇದೆ.


ನೀನು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ, ‘ಅರಸನಾದ ನನ್ನ ಒಡೆಯನೇ, “ನಿಶ್ಚಯವಾಗಿ ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ, ಅವನು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ,” ನೀವು ನಿನ್ನ ದಾಸಿಗೆ ಆಣೆ ಇಟ್ಟು ಹೇಳಲಿಲ್ಲವೋ? ಹೀಗಿರಲಾಗಿ ಅದೋನೀಯನು ಆಳುವುದು ಏಕೆ?’ ಎಂದು ಕೇಳು.


ಆಗ ಅವನು, “ರಾಜ್ಯವು ನನ್ನದಾಗಿತ್ತೆಂದೂ, ನಾನು ಆಳುವ ಸಮಸ್ತ ಇಸ್ರಾಯೇಲರು ನನ್ನ ಮೇಲೆ ಕಣ್ಣಿಟ್ಟಿದ್ದರೆಂದೂ ನೀನು ಬಲ್ಲೆ. ಆದರೆ ಎಲ್ಲವೂ ಬದಲಾಗಿ, ರಾಜ್ಯವು ನನ್ನ ಸಹೋದರನಿಗೆ ದೊರಕಿತು. ಏಕೆಂದರೆ ಅದು ಅವನಿಗೆ ಯೆಹೋವ ದೇವರಿಂದ ಉಂಟಾಯಿತು.


“ಈಗ ನನ್ನ ದೇವರಾದ ಯೆಹೋವ ದೇವರೇ, ನೀವು ನನ್ನ ತಂದೆ ದಾವೀದನಿಗೆ ಬದಲಾಗಿ ನಿಮ್ಮ ಸೇವಕನನ್ನು ಅರಸನನ್ನಾಗಿ ಮಾಡಿದ್ದೀರಿ. ಆದರೆ ನಾನು ಚಿಕ್ಕ ಬಾಲಕನಾಗಿದ್ದು, ನನ್ನ ಕರ್ತವ್ಯವನ್ನು ಹೇಗೆ ನಿರ್ವಹಿಸಬೇಕೆಂದು ತಿಳಿದಿಲ್ಲ.


ಯೂಫ್ರೇಟೀಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗೂ, ನದಿಯ ಈಚೆಯಲ್ಲಿರುವ ಸಮಸ್ತ ಅರಸರ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಅವನಿಗೆ ಸುತ್ತಲಿರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಿತ್ತು.


“ನಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ, ಅಲ್ಲವೇ? ಎಲ್ಲಾ ಕಡೆಗಳಲ್ಲಿ ನಿಮಗೆ ವಿಶ್ರಾಂತಿ ಕೊಟ್ಟಿದ್ದಾರೆ, ಅಲ್ಲವೇ? ನಿಶ್ಚಯವಾಗಿ ಅವರು ದೇಶ ನಿವಾಸಿಗಳನ್ನು ನನ್ನ ಕೈಯಲ್ಲಿ ಒಪ್ಪಿಸಿದ್ದರಿಂದ, ದೇಶವು ಯೆಹೋವ ದೇವರ ಮುಂದೆಯೂ, ಅವರ ಜನರ ಮುಂದೆಯೂ ಸ್ವಾಧೀನವಾಯಿತು.


ನಿಮ್ಮ ಸೇವಕನಾದಂಥ ನನ್ನ ತಂದೆಯಾದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿ, ನೀವು ನಿಮ್ಮ ಬಾಯಿಂದ ಹೇಳಿದ್ದನ್ನು ಇಂದು ಈಡೇರಿಸಿದ್ದೀರಿ.


“ತಮ್ಮ ಜನರಾದ ಇಸ್ರಾಯೇಲರಿಗೆ ತಾವು ಮಾತುಕೊಟ್ಟ ಪ್ರಕಾರ ವಿಶ್ರಾಂತಿಯನ್ನು ಕೊಟ್ಟ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಅವರು ತಮ್ಮ ಸೇವಕನಾದ ಮೋಶೆಯ ಮುಖಾಂತರ ಹೇಳಿದ ಎಲ್ಲಾ ಉತ್ತಮವಾದ ವಾಗ್ದಾನಗಳಲ್ಲಿ ಒಂದು ವಾಗ್ದಾನವಾದರೂ ಬಿದ್ದು ಹೋಗಲಿಲ್ಲ.


ದೇವರೇ, ನಿಮ್ಮ ನ್ಯಾಯವನ್ನು ಅರಸನಿಗೆ ಕಲಿಸಿಕೊಡಿರಿ. ನಿಮ್ಮ ನೀತಿಯನ್ನು ರಾಜಕುಮಾರನಿಗೆ ಕಲಿಸಿಕೊಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು