Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:13 - ಕನ್ನಡ ಸಮಕಾಲಿಕ ಅನುವಾದ

13 ಅಮ್ರಾಮನ ಪುತ್ರರು: ಆರೋನ್ ಮತ್ತು ಮೋಶೆ; ಆರೋನನನ್ನು ಮತ್ತು ಅವನ ಪುತ್ರರನ್ನು ಮಹಾಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಶಾಶ್ವತವಾಗಿ ಪ್ರತ್ಯೇಕಿಸಲಾಯಿತು. ಇವರು ಯೆಹೋವ ದೇವರ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ, ಅವರ ಸೇವೆ ಮಾಡುವವರೂ, ಅವರ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಮ್ರಾಮನ ಮಕ್ಕಳು ಆರೋನ್ ಮತ್ತು ಮೋಶೆ ಎಂಬುವವರು. ಆರೋನನು ಅವನ ಸಂತಾನದವರು ಮಹಾ ಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟರು. ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ, ಆತನ ಸೇವೆ ಮಾಡುವವರೂ, ಆತನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಮ್ರಾಮನ ಮಕ್ಕಳು ಆರೋನ್, ಮೋಶೆ ಎಂಬವರು. ಆರೋನನೂ ಅವನ ಸಂತಾನದವರೂ ಮಹಾಪರಿಶುದ್ಧ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟಿದ್ದರು. ಇವರು ಸರ್ವೇಶ್ವರನ ಸನ್ನಿಧಿಯಲ್ಲಿ ಸದಾ ಧೂಪಾರತಿ ಎತ್ತುವವರೂ ಸೇವೆ ಮಾಡುವವರೂ ಸರ್ವೇಶ್ವರನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿರಬೇಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅಮ್ರಾಮನ ಮಕ್ಕಳು - ಆರೋನ್, ಮೋಶೆ ಎಂಬವರು. ಆರೋನನೂ ಅವನ ಸಂತಾನದವರೂ ಮಹಾ ಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವದಕ್ಕೆ ಪ್ರತ್ಯೇಕಿಸಲ್ಪಟ್ಟರು. ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ ಸೇವಿಸುವವರೂ ಆತನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿರತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅಮ್ರಾಮನ ಗಂಡುಮಕ್ಕಳು ಯಾರೆಂದರೆ: ಆರೋನ್ ಮತ್ತು ಮೋಶೆ. ಆರೋನನು ಮತ್ತು ಅವನ ಸಂತತಿಯವರು ಮಹಾಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟರು; ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪ ಸುಡುವುದಕ್ಕಾಗಿಯೂ ಆತನ ಸೇವೆಮಾಡುವುದಕ್ಕಾಗಿಯೂ ಯೆಹೋವನ ಹೆಸರಿನಲ್ಲಿ ಜನರನ್ನು ಸದಾಕಾಲ ಆಶೀರ್ವದಿಸುವುದಕ್ಕಾಗಿಯೂ ಆರಿಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:13
38 ತಿಳಿವುಗಳ ಹೋಲಿಕೆ  

ಲೇವಿಯ ಪುತ್ರರಾದ ಯಾಜಕರು ಹತ್ತಿರ ಇರಬೇಕು. ಏಕೆಂದರೆ ಅವರನ್ನೇ ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಸೇವೆ ಮಾಡುವುದಕ್ಕೂ ಯೆಹೋವ ದೇವರ ಹೆಸರಿನಲ್ಲಿ ಆಶೀರ್ವಾದ ಕೊಡುವುದಕ್ಕೂ ಎಲ್ಲಾ ವಿವಾದ ಹೊಡೆದಾಟಗಳ ವಿಷಯದಲ್ಲಿ ತೀರ್ಮಾನಿಸುವುದಕ್ಕೂ ಆಯ್ದುಕೊಂಡಿದ್ದಾರೆ.


ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆದಳನ್ನು ಮದುವೆಯಾದನು. ಆಕೆಯು ಅವನಿಗೆ ಆರೋನನನ್ನೂ, ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರಮೂವತ್ತೇಳು ವರ್ಷಗಳು.


ನನ್ನ ಬಲಿಪೀಠದ ಮೇಲೆ ಬಲಿಯನ್ನು ಅರ್ಪಿಸುವುದಕ್ಕೂ, ಧೂಪವನ್ನು ಸುಡುವುದಕ್ಕೂ, ನನ್ನ ಮುಂದೆ ಏಫೋದನ್ನು ಧರಿಸಿಕೊಂಡಿರುವುದಕ್ಕೂ, ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರಬೇಕೆಂದು ನಾನು ಅವನನ್ನು ಆಯ್ದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲರು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ?


ಚಿನ್ನದ ಧೂಪಾರತಿಯಿದ್ದ ಮತ್ತೊಬ್ಬ ದೇವದೂತನು ಬಂದು ಬಲಿಪೀಠದ ಬಳಿ ನಿಂತನು. ಸಿಂಹಾಸನದ ಮುಂದಿನ ಚಿನ್ನದ ಧೂಪವೇದಿಯ ಮೇಲೆ ದೇವಜನರೆಲ್ಲರ ಪ್ರಾರ್ಥನೆಗಳೊಂದಿಗೆ ಅರ್ಪಿಸಲು ಅವನಿಗೆ ಬಹಳ ಧೂಪವು ಕೊಡಲಾಗಿತ್ತು.


ಆರೋನನಂತೆ ದೇವರಿಂದ ಕರೆ ಹೊಂದದ ಹೊರತು ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳಲಾರನು.


ಆದರೆ ದೇವರು ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತಮ್ಮ ಕೃಪೆಯ ಮೂಲಕ ನನ್ನನ್ನು ಕರೆದು,


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನಾಗುವುದಕ್ಕೆ ಕರೆಹೊಂದಿದವನೂ ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಗೊಂಡವನೂ ಆಗಿರುವ ಪೌಲನು ಬರೆಯುವ ಪತ್ರ.


ಇವರೆಲ್ಲರೂ ಕರ್ತದೇವರನ್ನು ಆರಾಧಿಸಿ, ಉಪವಾಸಮಾಡುತ್ತಿದ್ದರು. ಆಗ ಪವಿತ್ರಾತ್ಮ ದೇವರು, “ಬಾರ್ನಬನನ್ನೂ ಸೌಲನನ್ನೂ ನಾನು ಕರೆದಿರುವ ಕಾರ್ಯಕ್ಕಾಗಿ ಅವರನ್ನು ನನಗಾಗಿ ಪ್ರತ್ಯೇಕಿಸಿರಿ,” ಎಂದರು.


ಯಾಜಕೋದ್ಯೋಗದ ಪದ್ಧತಿಯಂತೆ, ಅವನು ಕರ್ತದೇವರ ಆಲಯವನ್ನು ಪ್ರವೇಶಿಸಿ ಧೂಪವನ್ನು ಅರ್ಪಿಸುವದಕ್ಕೆ ಚೀಟು ಹಾಕಿದಾಗ, ಅದು ಅವನ ಪಾಲಿಗೆ ಬಿದ್ದಿತು.


ಇಸ್ರಾಯೇಲರು ಪಾಳೆಯದಲ್ಲಿ ಮೋಶೆಯ ಮೇಲೆಯೂ, ಯೆಹೋವ ದೇವರಿಗೆ ಪ್ರತಿಷ್ಠಿತನಾದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಟ್ಟರು.


ಯೆಹೋವ ದೇವರ ಯಾಜಕರಲ್ಲಿ ಮೋಶೆಯೂ ಆರೋನನೂ ಇದ್ದಾರೆ. ದೇವರ ಹೆಸರೆತ್ತಿ ಕರೆದವರಲ್ಲಿ ಸಮುಯೇಲನೂ ಸಹ ಒಬ್ಬನು. ಇವರೆಲ್ಲರೂ ಯೆಹೋವ ದೇವರನ್ನು ಕರೆದರು. ದೇವರು ಅವರಿಗೆ ಉತ್ತರಕೊಟ್ಟರು.


ಅಮ್ರಾಮನ ಪುತ್ರರು: ಆರೋನನು, ಮೋಶೆಯು, ಮಿರ್ಯಾಮಳು. ಆರೋನನ ಪುತ್ರರು: ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್.


ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಆಕೆಯು ಈಜಿಪ್ಟಿನಲ್ಲಿ ಲೇವಿಯಿಂದ ಹುಟ್ಟಿದ ಮಗಳು. ಆಕೆಯು ಅಮ್ರಾಮನಿಗೆ ಆರೋನನನ್ನೂ ಮೋಶೆಯನ್ನೂ ಅವರ ಸಹೋದರಿಯಾದ ಮಿರ್ಯಾಮಳನ್ನೂ ಹೆತ್ತಳು.


ಯೆಹೋವ ದೇವರು ಆರೋನನಿಗೆ, “ನೀನೂ, ನಿನ್ನ ಪುತ್ರರೂ, ನಿನ್ನ ಪಿತೃಗಳ ಮನೆಯವರೂ ಪರಿಶುದ್ಧ ಸ್ಥಳಕ್ಕೆ ವಿರೋಧವಾಗಿ ನಡೆಯುವ ಕಾರ್ಯಗಳ ಜವಾಬ್ದಾರಿ ವಹಿಸಬೇಕು. ಯಾಜಕತ್ವಕ್ಕೆ ವಿರೋಧವಾಗಿ ನಡೆಯುವ ಅಕ್ರಮಗಳಿಗೆ ನೀನು ಮತ್ತು ನಿನ್ನ ಪುತ್ರರು ಮಾತ್ರ ಹೊಣೆಯಾಗಿರುತ್ತೀರಿ.


ಅಮ್ರಾಮಿಯರು, ಇಚ್ಹಾರರು, ಹೆಬ್ರೋನಿಯರು, ಉಜ್ಜೀಯೇಲರು; ಇವು ಕೊಹಾತನ ಕುಟುಂಬಗಳು.


ನೀವು ಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಮಧ್ಯೆ ಇರುವ ವ್ಯತ್ಯಾಸವನ್ನು ತೋರಿಸುವುದಕ್ಕಾಗಿಯೂ


“ನಾನು ದೇವದರ್ಶನದ ಗುಡಾರವನ್ನೂ ಬಲಿಪೀಠವನ್ನೂ ಪರಿಶುದ್ಧ ಮಾಡುವೆನು. ಆರೋನನನ್ನೂ ಅವನ ಪುತ್ರರನ್ನೂ ನನಗೆ ಯಾಜಕ ಸೇವೆಮಾಡುವಂತೆ ಪವಿತ್ರ ಮಾಡುವೆನು.


ಕೊಹಾತನ ಪುತ್ರರು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್ ಎಂಬ ನಾಲ್ಕು ಮಂದಿ ಮಕ್ಕಳಿದ್ದರು.


“ಶುದ್ಧ ಬಂಗಾರದ ತಗಡನ್ನು ಮಾಡಿ ಮುದ್ರೆ ಕೆತ್ತುವ ಪ್ರಕಾರ, ಅದರಲ್ಲಿ ಹೀಗೆ ಕೆತ್ತಬೇಕು: ‘ಯೆಹೋವ ದೇವರಿಗೆ ಪರಿಶುದ್ಧ.’


ಆ ಕಾಲದಲ್ಲಿ ಯೆಹೋವ ದೇವರು ಲೇವಿ ಗೋತ್ರವನ್ನು ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ಯೆಹೋವ ದೇವರ ಮುಂದೆ ನಿಂತುಕೊಂಡು ಅವರಿಗೆ ಸೇವೆಮಾಡಿ, ಅವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದರು. ಅವರು ಈ ದಿನದವರೆಗೂ ಆ ಕೆಲಸವನ್ನು ನಡೆಸುತ್ತಿದ್ದಾರೆ.


ಅವನು ಎಲ್ಕಾನನ ಮಗನು, ಅವನು ಯೆರೋಹಾಮನ ಮಗನು, ಅವನು ಎಲೀಯೇಲನ ಮಗನು, ಅವನು ತೋಹನ ಮಗನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು