1 ಪೂರ್ವಕಾಲ ವೃತ್ತಾಂತ 23:24 - ಕನ್ನಡ ಸಮಕಾಲಿಕ ಅನುವಾದ24 ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಪುತ್ರರಾಗಿದ್ದರು. ತಮ್ಮ ಹೆಸರುಗಳಿಂದ, ಎಣಿಕೆಯಾಗಿದ್ದ ಇವರು ತಮ್ಮ ಕುಟುಂಬಗಳಲ್ಲಿ ಮುಖ್ಯಸ್ಥರಾಗಿದ್ದರು. ಇವರು ಇಪ್ಪತ್ತು ವರ್ಷ ಪ್ರಾಯದವರು ಮೊದಲುಗೊಂಡು, ಯೆಹೋವ ದೇವರ ಮನೆಯ ಸೇವೆಗೋಸ್ಕರ ಕೆಲಸಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಲೇವಿಯರ ಪಟ್ಟಿಯಲ್ಲಿ ಬರೆಯಲ್ಪಟ್ಟ ಹೆಸರುಗಳ ಪ್ರಕಾರ ಇವರೇ ಆಯಾ ಲೇವಿ ವರ್ಗಗಳ ಕುಟುಂಬದ ಪ್ರಧಾನರು. ಇವರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರು ಯೆಹೋವನ ಆಲಯದಲ್ಲಿ ಸೇವೆಮಾಡತಕ್ಕವರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಲೇವಿಯರ ಪಟ್ಟಿಯಲ್ಲಿ ಬರೆದಿರುವ ಹೆಸರುಗಳ ಪ್ರಕಾರ ಇವರೇ ಆಯಾ ಲೇವಿ ವರ್ಗಗಳ ಕುಟುಂಬದ ಮುಖ್ಯಸ್ಥರು. ಇವರಲ್ಲಿ ಇಪ್ಪತ್ತು ವರ್ಷ ಮೊದಲ್ಗೊಂಡು ಹೆಚ್ಚು ವಯಸ್ಸುಳ್ಳವರು ಸರ್ವೇಶ್ವರನ ಆಲಯದಲ್ಲಿ ಸೇವೆಮಾಡಲು ಅರ್ಹರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಲೇವಿಯರ ಪಟ್ಟಿಯಲ್ಲಿ ಬರೆಯಲ್ಪಟ್ಟ ಹೆಸರುಗಳ ಪ್ರಕಾರ ಇವರೇ ಆಯಾ ಲೇವಿ ವರ್ಗಗಳ ಕುಟುಂಬ ಪ್ರಧಾನರು. ಇವರಲ್ಲಿ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಯೆಹೋವನ ಆಲಯದಲ್ಲಿ ಸೇವೆಮಾಡತಕ್ಕವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಇವರೇ ಲೇವಿಯರ ಸಂತತಿಯವರು. ಇವರೇ ಆಯಾ ಕುಟುಂಬಗಳ ಪ್ರಧಾನರು. ಇವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಅದಕ್ಕಿಂತ ಮೇಲ್ಪಟ್ಟವರನ್ನು ಮಾತ್ರ ಲೆಕ್ಕಿಸಲಾಯಿತು. ಅವರು ದೇವಾಲಯದಲ್ಲಿ ಸೇವೆಮಾಡಿದರು. ಅಧ್ಯಾಯವನ್ನು ನೋಡಿ |
ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೆಯ ವರ್ಷದ, ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಯೋಚಾದಾಕನ ಮಗ ಯೇಷೂವನೂ, ಉಳಿದ ಅವರ ಸಹೋದರರಾದ ಯಾಜಕರೂ, ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ, ಕೆಲಸವನ್ನು ಪ್ರಾರಂಭಿಸಿ ಇಪ್ಪತ್ತು ವರ್ಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಯೆಹೋವ ದೇವರ ಆಲಯದ ಕೆಲಸ ಮಾಡುವವರ ಮೇಲೆ ಮೇಲ್ವಿಚಾರಕರನ್ನಾಗಿ ನೇಮಿಸಿದರು.