1 ಪೂರ್ವಕಾಲ ವೃತ್ತಾಂತ 23:25 - ಕನ್ನಡ ಸಮಕಾಲಿಕ ಅನುವಾದ25 ದಾವೀದನು, “ಇಸ್ರಾಯೇಲಿನ ದೇವರಾದ ಯೆಹೋವ ದೇವರು, ಅವರು ಯುಗಯುಗಾಂತರಕ್ಕೂ ಯೆರೂಸಲೇಮಿನಲ್ಲಿ ವಾಸಿಸುವ ಹಾಗೆ ತಮ್ಮ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾರೆ,” ಎಂದು ಹೇಳಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಇಸ್ರಾಯೇಲಿನ ದೇವರಾದ ಯೆಹೋವನು, ತನ್ನ ಪ್ರಜೆಗಳಿಗೆ ವಿಶ್ರಾಂತಿಯನ್ನು ಅನುಗ್ರಹಿಸಿ, ಆತನು ಸದಾಕಾಲವೂ ಯೆರೂಸಲೇಮಿನಲ್ಲಿ ವಾಸಿಸುವವನಾದುದರಿಂದ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಇಸ್ರಯೇಲ್ ದೇವರಾದ ಸರ್ವೇಶ್ವರ, ತಮ್ಮ ಪ್ರಜೆಗೆ ನೆಮ್ಮದಿಯನ್ನು ಅನುಗ್ರಹಿಸಿ, ಸದಾ ಜೆರುಸಲೇಮಿನಲ್ಲಿ ವಾಸಿಸುವವರಾದ ಕಾರಣ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಇಸ್ರಾಯೇಲ್ ದೇವರಾದ ಯೆಹೋವನು ತನ್ನ ಪ್ರಜೆಗೆ ವಿಶ್ರಾಂತಿಯನ್ನು ಅನುಗ್ರಹಿಸಿ ಸದಾಕಾಲವೂ ಯೆರೂಸಲೇವಿುನಲ್ಲಿ ವಾಸಿಸುವವನಾದದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ದಾವೀದನು, “ಇಸ್ರೇಲರ ದೇವರಾದ ಯೆಹೋವನು ತನ್ನ ಜನರಿಗೆ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ದೇವರು ನಿರಂತರವೂ ಜೆರುಸಲೇಮಿನಲ್ಲಿ ವಾಸಿಸಲು ಬಂದಿರುತ್ತಾನೆ. ಅಧ್ಯಾಯವನ್ನು ನೋಡಿ |
ಪೂರ್ವಕಾಲದಲ್ಲಿ ನಾನು ನನ್ನ ಜನರಾದ ಇಸ್ರಾಯೇಲರ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದ ಆ ದಿವಸದಿಂದ ಈಚೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಮೇಲೆ ಕುಗ್ಗಿಸದೆ ಇರುವರು. “ ‘ನಿನ್ನನ್ನು, ನಿನ್ನ ಸಮಸ್ತ ಶತ್ರುಗಳಿಂದ ತಪ್ಪಿಸಿ, ನಿನಗೆ ವಿಶ್ರಾಂತಿಯನ್ನು ಉಂಟುಮಾಡುವೆನು. ಇದಲ್ಲದೆ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ, ನಾನು ನಿನ್ನ ರಾಜವಂಶವನ್ನು ಸ್ಥಿರಪಡಿಸುವೆನು.