Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 23:26 - ಕನ್ನಡ ಸಮಕಾಲಿಕ ಅನುವಾದ

26 ಲೇವಿಯರನ್ನು ಕುರಿತು ಅವರು ಗುಡಾರವನ್ನೂ, ಅವರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಲೇವಿಯರು ಇನ್ನು ಮುಂದೆ ಆತನ ಗುಡಾರವನ್ನೂ, ಆರಾಧನಾ ಸಾಮಗ್ರಿಗಳನ್ನೂ ಹೊರುವುದು ಅವಶ್ಯವಿಲ್ಲ ಎಂದು ದಾವೀದನು ಈ ಪ್ರಕಾರ ಆಜ್ಞೆ ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಲೇವಿಯರು ಇನ್ನು ಮುಂದೆ ಅವರ ಗುಡಾರವನ್ನೂ ಆರಾಧನಾ ಸಾಮಗ್ರಿಗಳನ್ನೂ ಹೊರುವುದು ಅವಶ್ಯವಿಲ್ಲವೆಂದುಕೊಂಡು, ದಾವೀದನು ಈ ಪ್ರಕಾರ ವಿಧಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಲೇವಿಯರು ಇನ್ನು ಮುಂದೆ ಆತನ ಗುಡಾರವನ್ನೂ ಆರಾಧನಾ ಸಾಮಾಗ್ರಿಗಳನ್ನೂ ಹೊರುವದು ಅವಶ್ಯವಿಲ್ಲವೆಂದುಕೊಂಡು ದಾವೀದನು ಈ ಪ್ರಕಾರ ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದ್ದರಿಂದ ಇನ್ನು ಮುಂದೆ ಲೇವಿಯರಿಗೆ ದೇವದರ್ಶನ ಗುಡಾರವನ್ನಾಗಲಿ ಅದರ ಸಾಮಾಗ್ರಿಗಳನ್ನಾಗಲಿ ಹೊರುವ ಅವಶ್ಯವಿಲ್ಲ” ಎಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 23:26
7 ತಿಳಿವುಗಳ ಹೋಲಿಕೆ  

ಜನರು ಹೊರಡುವಾಗ, ಆರೋನನೂ, ಅವನ ಮಕ್ಕಳೂ ಒಳಗೆ ಹೋಗಿ ಪರದೆಯನ್ನು ಇಳಿಸಿ, ಅದರಿಂದ ಒಡಂಬಡಿಕೆಯ ಮಂಜೂಷವನ್ನು ಮುಚ್ಚಿ,


ಆದರೆ ಕೊಹಾತ್ಯರಿಗೆ ಯಾವುದನ್ನೂ ಕೊಡಲಿಲ್ಲ. ಏಕೆಂದರೆ ಅವರು ತಮ್ಮ ಹೆಗಲುಗಳ ಮೇಲೆ ಪರಿಶುದ್ಧಸ್ಥಳದ ವಸ್ತುಗಳನ್ನು ಹೊತ್ತುಕೊಂಡು ಹೋಗುವುದೇ ಅವರಿಗೆ ಸೇವೆಯಾಗಿತ್ತು.


“ಆರೋನನು ಮತ್ತು ಅವನ ಪುತ್ರರು ಪರಿಶುದ್ಧ ಸ್ಥಳವನ್ನೂ, ಪರಿಶುದ್ಧಸ್ಥಳದ ಎಲ್ಲಾ ಸಲಕರಣೆಗಳನ್ನೂ ಮುಚ್ಚಿದ ಮೇಲೆ, ಪಾಳೆಯವು ಹೊರಡುವಾಗ ಕೊಹಾತ್ಯರು ಅದನ್ನು ಹೊತ್ತುಕೊಂಡು ಹೋಗುವುದಕ್ಕೆ ಪ್ರವೇಶಿಸಬೇಕು. ಆದರೆ ಅವರು ಸಾಯದೆ ಇರಬೇಕಾದರೋ, ಪರಿಶುದ್ಧವಾದ ಯಾವುದನ್ನೂ ಮುಟ್ಟಬಾರದು. ದೇವದರ್ಶನದ ಗುಡಾರದಲ್ಲಿ ಕೊಹಾತ್ಯನ ಪುತ್ರರ ಹೊರೆಗಳು ಇವೇ ಆಗಿವೆ.


ಆ ಕಾಲದಲ್ಲಿ ಯೆಹೋವ ದೇವರು ಲೇವಿ ಗೋತ್ರವನ್ನು ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ಯೆಹೋವ ದೇವರ ಮುಂದೆ ನಿಂತುಕೊಂಡು ಅವರಿಗೆ ಸೇವೆಮಾಡಿ, ಅವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದರು. ಅವರು ಈ ದಿನದವರೆಗೂ ಆ ಕೆಲಸವನ್ನು ನಡೆಸುತ್ತಿದ್ದಾರೆ.


ಯೆಹೋವ ದೇವರು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ, ಹೊರುವುದಕ್ಕಾಗಿಯೂ ಜವಾಬ್ದಾರಿಕೆ ಕೊಡಲಾಯಿತು. ಹೀಗೆ ಯೆಹೋವ ದೇವರು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಎಣಿಸಲಾಯಿತು.


ಏಕೆಂದರೆ ದಾವೀದನ ಕಡೇ ಮಾತುಗಳ ಪ್ರಕಾರ, ಲೇವಿಯರು ಇಪ್ಪತ್ತು ವರ್ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯದವರು ಮೊದಲುಗೊಂಡು ಎಣಿಕೆಯಾಗಿದ್ದರು.


“ಸಮಸ್ತ ಇಸ್ರಾಯೇಲರಿಗೆ ಬೋಧಿಸಿದ ಮತ್ತು ಯೆಹೋವ ದೇವರಿಗೆ ಪ್ರತಿಷ್ಠಿತರಾದ ಲೇವಿಯರಿಗೆ ಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವೆಂದೆಣಿಸದೇ, ನೀವು ಅದನ್ನು ಇಸ್ರಾಯೇಲಿನ ಅರಸನಾಗಿರುವ ದಾವೀದನ ಮಗ ಸೊಲೊಮೋನನು ಕಟ್ಟಿಸಿದ ಆಲಯದಲ್ಲಿ ಇರಿಸಿ, ನಿಮ್ಮ ದೇವರಾದ ಯೆಹೋವ ದೇವರನ್ನೂ, ದೇವಜನರಾದ ಇಸ್ರಾಯೇಲರನ್ನೂ ಸೇವಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು