Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 24:1 - ಕನ್ನಡ ಸಮಕಾಲಿಕ ಅನುವಾದ

1 ಆರೋನನ ಪುತ್ರರಲ್ಲಿ ವರ್ಗಗಳಾಗಿ ವಿಭಾಗ ಆದವರು ಇವರೇ. ಆರೋನನ ಪುತ್ರರು: ನಾದಾಬ್, ಅಬೀಹೂ, ಎಲಿಯಾಜರ್ ಮತ್ತು ಈತಾಮಾರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆರೋನನ ಸಂತಾನದವರನ್ನು ವರ್ಗಗಳಾಗಿ ವಿಂಗಡಿಸಲಾಗಿತ್ತು. ಆರೋನನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬ ನಾಲ್ವರು ಮಕ್ಕಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು - ನಾದಾಬ್, ಅಬೀಹೂ, ಎಲ್ಲಾಜಾರ್ ಈತಾಮಾರ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆರೋನನ ಸಂತಾನದವರು ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಗಂಡುಮಕ್ಕಳು: ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 24:1
16 ತಿಳಿವುಗಳ ಹೋಲಿಕೆ  

ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬಳನ್ನು ಮದುವೆಯಾದನು. ಆಕೆಯು ಅವನಿಗೆ ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್ ಇವರನ್ನು ಹೆತ್ತಳು.


ಇದಲ್ಲದೆ ದಾವೀದನು ಗೇರ್ಷೋನ್ಯರು, ಕೊಹಾತ್ಯರು, ಮೆರಾರೀಯರು ಎಂಬ ಲೇವಿಯರನ್ನು ಮೂರು ವರ್ಗಗಳಾಗಿ ವಿಭಾಗಿಸಿದನು.


ಆರೋನನಿಗೆ ನಾದಾಬನೂ ಅಬೀಹೂ ಎಲಿಯಾಜರನೂ ಈತಾಮಾರನೂ ಹುಟ್ಟಿದರು.


ಆರೋನನ ಮಕ್ಕಳುಗಳ ಹೆಸರುಗಳು: ಚೊಚ್ಚಲ ಮಗನು ನಾದಾಬ್, ತರುವಾಯ ಅಬೀಹೂ, ಎಲಿಯಾಜರ್ ಮತ್ತು ಈತಾಮಾರ್.


ಅಮ್ರಾಮನ ಪುತ್ರರು: ಆರೋನನು, ಮೋಶೆಯು, ಮಿರ್ಯಾಮಳು. ಆರೋನನ ಪುತ್ರರು: ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್.


“ನನಗೆ ಯಾಜಕ ಸೇವೆ ಮಾಡುವುದಕ್ಕೆ ನೀನು ಇಸ್ರಾಯೇಲರಿಂದ ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್ ಎಂಬುವರನ್ನು ನಿನ್ನ ಹತ್ತಿರ ಬರಮಾಡಬೇಕು.


ಇದಲ್ಲದೆ ಯಾಜಕರ, ಲೇವಿಯರ ವರ್ಗಗಳಿಗೋಸ್ಕರವೂ, ಯೆಹೋವ ದೇವರ ಮನೆಯ ಸೇವೆಯ ಸಮಸ್ತ ಕೆಲಸಕ್ಕೋಸ್ಕರವೂ ಯೆಹೋವ ದೇವರ ಮನೆಯಲ್ಲಿರುವ ಸೇವೆ ಮಾಡುವ ಸಮಸ್ತ ಪಾತ್ರೆಗಳಿಗೋಸ್ಕರವೂ ಸೂಚನೆಗಳನ್ನು ಕೊಟ್ಟನು.


ಅಲ್ಲಿ ಇದ್ದ ಸಮಸ್ತ ಯಾಜಕರು ವರ್ಗವ್ಯತ್ಯಾಸವಿಲ್ಲದೆ ತಮ್ಮನ್ನು ಶುದ್ಧಪಡಿಸಿಕೊಂಡಿದ್ದರು.


ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ, ಅವರ ಸೇವೆಗೆ ಯಾಜಕ ವರ್ಗಗಳವರನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ, ಯಾಜಕರ ಮುಂದೆ ಸ್ತುತಿಸುವುದಕ್ಕೂ, ಸೇವೆ ಮಾಡುವುದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ, ಸೇವೆಯ ಬಾಗಿಲಲ್ಲಿ ತಮ್ಮ ವರ್ಗಗಳ ಸರದಿಯ ಪ್ರಕಾರವಾಗಿ ದ್ವಾರಪಾಲಕರನ್ನೂ ನೇಮಿಸಿದನು. ಏಕೆಂದರೆ ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.


ಹೀಗೆಯೇ ಯಾಜಕನಾದ ಯೆಹೋಯಾದಾವನು ಆಜ್ಞಾಪಿಸಿದ ಪ್ರಕಾರ ಲೇವಿಯರೂ ಸಮಸ್ತ ಯೆಹೂದದವರೂ ಮಾಡಿದರು. ಪ್ರತಿ ಮನುಷ್ಯನು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಬರತಕ್ಕ ಸಿಪಾಯಿಗಳನ್ನು ಕೂಡಿಸಿಕೊಂಡನು. ಏಕೆಂದರೆ ಯಾಜಕನಾದ ಯೆಹೋಯಾದನು ಸೇವಾವಿಮುಕ್ತರಾದ ವರ್ಗದವರನ್ನು ಕಳುಹಿಸಿಬಿಡಲಿಲ್ಲ.


ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜಕರ, ಲೇವಿಯರ ಸರತಿಗಳನ್ನು ನೇಮಿಸಿದನು. ದಹನಬಲಿಗಳನ್ನೂ ಮತ್ತು ಸಮಾಧಾನದ ಬಲಿಗಳನ್ನೂ ಅರ್ಪಿಸುವುದಕ್ಕೂ, ಸೇವಿಸುವುದಕ್ಕೂ ಯೆಹೋವ ದೇವರ ಪಾಳೆಯದ ಬಾಗಿಲುಗಳಲ್ಲಿ ಸ್ತೋತ್ರ ಮಾಡುವುದಕ್ಕೂ, ಕೊಂಡಾಡುವುದಕ್ಕೂ ಯಾಜಕರನ್ನೂ, ಲೇವಿಯರನ್ನೂ ನೇಮಿಸಿದನು.


ಮೋಶೆಯ ಗ್ರಂಥದಲ್ಲಿ ಬರೆದ ಹಾಗೆ ಯೆರೂಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆಗೋಸ್ಕರ ಯಾಜಕರನ್ನು ಮತ್ತು ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.


ಆದರೆ ನಾದಾಬ್ ಮತ್ತು ಅಬೀಹೂ ಎಂಬ ಇಬ್ಬರು ಸೀನಾಯಿ ಮರುಭೂಮಿಯಲ್ಲಿ ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯನ್ನು ಅರ್ಪಿಸಿದಾಗ, ಯೆಹೋವ ದೇವರ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ. ಹೀಗೆ ಎಲಿಯಾಜರನು, ಈತಾಮಾರನು ತಮ್ಮ ತಂದೆ ಆರೋನನ ಎದುರಿನಲ್ಲಿ ಯಾಜಕ ಉದ್ಯೋಗವನ್ನು ಮಾಡಿದರು.


ಅವನು ಎಲ್ಕಾನನ ಮಗನು, ಅವನು ಯೆರೋಹಾಮನ ಮಗನು, ಅವನು ಎಲೀಯೇಲನ ಮಗನು, ಅವನು ತೋಹನ ಮಗನು,


ಇವನು ಅಬೀಷೂವನ ಮಗನು; ಇವನು ಫೀನೆಹಾಸನ ಮಗನು; ಇವನು ಎಲಿಯಾಜರನ ಮಗನು; ಇವನು ಮುಖ್ಯಯಾಜಕನಾದ ಆರೋನನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು