Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 24:19 - ಕನ್ನಡ ಸಮಕಾಲಿಕ ಅನುವಾದ

19 ಇವೇ ಇಸ್ರಾಯೇಲಿನ ದೇವರಾದ ಯೆಹೋವ ದೇವರು ತಮ್ಮ ತಂದೆ ಆರೋನನಿಗೆ ಆಜ್ಞಾಪಿಸಿದ ಹಾಗೆ, ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ, ಯೆಹೋವ ದೇವರ ಮನೆಯಲ್ಲಿ ಸೇವೆ ಮಾಡುವುದಕ್ಕೆ ಬರಬೇಕಾದ ಅವರ ನಿಯಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆರೋನ್ಯರು ಈ ವರ್ಗ ಕ್ರಮದಿಂದ ಯೆಹೋವನ ಆಲಯಕ್ಕೆ ಬಂದು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಲೇವಿಯರ ಮೂಲಪುರುಷನಾದ ಆರೋನನ ಮುಖಾಂತರವಾಗಿ ನೇಮಿಸಿದ ಸೇವೆಯನ್ನು ನಡೆಸತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆರೋನ್ಯರು ಈ ವರ್ಗಕ್ರಮದಲ್ಲಿ ಸರ್ವೇಶ್ವರನ ಆಲಯಕ್ಕೆ ಬಂದು, ಲೇವಿಯರ ಮೂಲ ಪುರುಷನಾದ ಆರೋನನ ಮುಖಾಂತರ ಇಸ್ರಯೇಲ್ ದೇವರಾದ ಸರ್ವೇಶ್ವರ ನಿಯಮಿಸಿದ ಸೇವೆಯನ್ನು ನಡೆಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇಪ್ಪತ್ತನಾಲ್ಕನೆಯದು ಮಾಜ್ಯನಿಗೆ. ಆರೋನ್ಯರು ಈ ವರ್ಗಕ್ರಮದಿಂದ ಯೆಹೋವನ ಆಲಯಕ್ಕೆ ಬಂದು, ಇಸ್ರಾಯೇಲ್ ದೇವರಾದ ಯೆಹೋವನು ಲೇವಿಯರ ಮೂಲಪುರುಷನಾದ ಆರೋನನ ಮುಖಾಂತರವಾಗಿ ನಿಯವಿುಸಿದ ಸೇವೆಯನ್ನು ನಡಿಸತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಈ ವರ್ಗದವರನ್ನು ಕ್ರಮವಾಗಿ ದೇವಾಲಯದಲ್ಲಿ ಸೇವೆಮಾಡಲು ಆರಿಸಲಾಯಿತು. ಇವರು ಆರೋನನ ಆರಾಧನಾ ಪದ್ದತಿಯನ್ನು ಅನುಸರಿಸಿದರು. ಇಸ್ರೇಲರ ದೇವರಾದ ಯೆಹೋವನು ಆರಾಧನಾ ಕ್ರಮಗಳನ್ನು ಆರೋನನಿಗೆ ತಿಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 24:19
10 ತಿಳಿವುಗಳ ಹೋಲಿಕೆ  

ಗ್ರಾಮಗಳಲ್ಲಿ ಇದ್ದ ಅವರ ಸಹೋದರರು ತಮ್ಮ ಕ್ರಮದ ಪ್ರಕಾರವಾಗಿ ಏಳೇಳು ದಿವಸಗಳಲ್ಲಿ ಬರುವ ನೇಮಕವಿತ್ತು.


ಲೇವಿಯರ ಯಾಜಕತ್ವದ ಆಧಾರದ ಮೇಲೆ ಜನರು ನಿಯಮವನ್ನು ಪಡೆದಿದ್ದರು. ಈ ಯಾಜಕತ್ವದ ಮೂಲಕವೇ ಪರಿಪೂರ್ಣತೆಯು ಉಂಟಾಗಿದ್ದರೆ, ಆರೋನನ ಕ್ರಮಾನುಸಾರವಾಗಿರದೆ ಮೆಲ್ಕಿಜೆದೇಕನ ಕ್ರಮದ ಪ್ರಕಾರ ಬೇರೊಬ್ಬ ಯಾಜಕನು ಎದ್ದೇಳುವ ಅವಶ್ಯವೇನಿತ್ತು?


ಆದರೆ ಎಲ್ಲವನ್ನೂ ಯೋಗ್ಯವಾಗಿಯೂ ಕ್ರಮವಾಗಿಯೂ ಮಾಡಿರಿ.


ಹೀಗೆಯೇ ಯಾಜಕನಾದ ಯೆಹೋಯಾದಾವನು ಆಜ್ಞಾಪಿಸಿದ ಪ್ರಕಾರ ಲೇವಿಯರೂ ಸಮಸ್ತ ಯೆಹೂದದವರೂ ಮಾಡಿದರು. ಪ್ರತಿ ಮನುಷ್ಯನು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಬರತಕ್ಕ ಸಿಪಾಯಿಗಳನ್ನು ಕೂಡಿಸಿಕೊಂಡನು. ಏಕೆಂದರೆ ಯಾಜಕನಾದ ಯೆಹೋಯಾದನು ಸೇವಾವಿಮುಕ್ತರಾದ ವರ್ಗದವರನ್ನು ಕಳುಹಿಸಿಬಿಡಲಿಲ್ಲ.


ಈಗ ನೀವು ಮಾಡಬೇಕಾದದ್ದೇನೆಂದರೆ, ಸಬ್ಬತ್ ದಿನದಲ್ಲಿ ಪ್ರವೇಶಿಸುವ ಯಾಜಕರೂ, ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಒಂದು ಭಾಗವು ದ್ವಾರಪಾಲಕರಾಗಿರಬೇಕು.


ಆರೋನನ ಪುತ್ರರಲ್ಲಿ ವರ್ಗಗಳಾಗಿ ವಿಭಾಗ ಆದವರು ಇವರೇ. ಆರೋನನ ಪುತ್ರರು: ನಾದಾಬ್, ಅಬೀಹೂ, ಎಲಿಯಾಜರ್ ಮತ್ತು ಈತಾಮಾರ್.


ಹೀಗಿರಲಾಗಿ ಜಕರೀಯನು ತನ್ನ ವರ್ಗದ ಸರದಿಯ ಪ್ರಕಾರ ದೇವರ ಮುಂದೆ ಯಾಜಕ ಸೇವೆಯನ್ನು ಮಾಡುತ್ತಿದ್ದಾಗ,


ಇಪ್ಪತ್ಮೂರನೆಯದು ದೆಲಾಯನಿಗೆ; ಇಪ್ಪತ್ನಾಲ್ಕನೆಯದು ಮಾಜ್ಯನಿಗೆ.


ಲೇವಿಯ ವಂಶಜರಲ್ಲಿ ಉಳಿದವರು ಯಾರೆಂದರೆ: ಅಮ್ರಾಮನ ಕುಮಾರರಲ್ಲಿ ಶೂಬಾಯೇಲನು; ಶೂಬಾಯೇಲನ ಪುತ್ರರಲ್ಲಿ ಯೆಹ್ದೆಯಾಹನು.


ಅವನು ಎಲ್ಕಾನನ ಮಗನು, ಅವನು ಯೆರೋಹಾಮನ ಮಗನು, ಅವನು ಎಲೀಯೇಲನ ಮಗನು, ಅವನು ತೋಹನ ಮಗನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು