1 ಪೂರ್ವಕಾಲ ವೃತ್ತಾಂತ 24:3 - ಕನ್ನಡ ಸಮಕಾಲಿಕ ಅನುವಾದ3 ಆದ್ದರಿಂದ ದಾವೀದನು ಎಲಿಯಾಜರನ ಮಕ್ಕಳಲ್ಲಿ ಚಾದೋಕನಿಗೂ, ಈತಾಮಾರನ ಮಕ್ಕಳಲ್ಲಿ ಅಹೀಮೆಲೆಕನಿಗೂ ಅವರ ಸೇವೆಯಲ್ಲಿರುವ ಪದ್ದತಿಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ದಾವೀದನು ಎಲ್ಲಾಜಾರನ ಸಂತಾನದವನಾದ ಚಾದೋಕನೂ, ಈತಾಮಾರನ ಸಂತಾನದವನಾದ ಅಹೀಮೆಲೆಕನು ಯಾಜಕರನ್ನು ಸರದಿಯ ಮೇಲೆ ಸೇವೆಮಾಡತಕ್ಕ ವರ್ಗಗಳನ್ನಾಗಿ ವಿಭಾಗಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ದಾವೀದನೂ ಎಲ್ಲಾಜಾರನ ಸಂತಾನದವನಾದ ಚಾದೋಕನೂ ಈತಾಮಾರನ ಸಂತಾನದವನಾದ ಅಹೀಮೆಲೆಕನೂ ಯಾಜಕರನ್ನು ಸರದಿಯ ಮೇಲೆ ಸೇವೆ ಸಲ್ಲಿಸತಕ್ಕ ವರ್ಗಗಳನ್ನಾಗಿ ವಿಭಾಗಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ದಾವೀದನೂ ಎಲ್ಲಾಜಾರನ ಸಂತಾನದವನಾದ ಚಾದೋಕನೂ ಈತಾಮಾರನ ಸಂತಾನದವನಾದ ಅಹೀಮೆಲೆಕನೂ ಯಾಜಕರನ್ನು ಸರತಿಯ ಮೇಲೆ ಸೇವಿಸತಕ್ಕ ವರ್ಗಗಳನ್ನಾಗಿ ವಿಭಾಗಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಎಲ್ಲಾಜಾರ್ ಮತ್ತು ಈತಾಮಾರ್ ಕುಲದ ಯಾಜಕರನ್ನು ದಾವೀದನು ಪ್ರತ್ಯೇಕಿಸಿ ಚಾದೋಕ್ ಮತ್ತು ಅಹೀಮೆಲೆಕ್ ಯಾಜಕರ ಸಹಾಯದಿಂದ ಎರಡು ವರ್ಗಗಳನ್ನಾಗಿ ಮಾಡಿದನು. ಚಾದೋಕನು ಎಲ್ಲಾಜಾರನ ವಂಶದವನಾಗಿದ್ದನು ಮತ್ತು ಅಹೀಮೆಲೆಕನು ಈತಾಮಾರನ ವಂಶದವನಾಗಿದ್ದನು. ಅಧ್ಯಾಯವನ್ನು ನೋಡಿ |
ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ, ಅವರ ಸೇವೆಗೆ ಯಾಜಕ ವರ್ಗಗಳವರನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ, ಯಾಜಕರ ಮುಂದೆ ಸ್ತುತಿಸುವುದಕ್ಕೂ, ಸೇವೆ ಮಾಡುವುದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ, ಸೇವೆಯ ಬಾಗಿಲಲ್ಲಿ ತಮ್ಮ ವರ್ಗಗಳ ಸರದಿಯ ಪ್ರಕಾರವಾಗಿ ದ್ವಾರಪಾಲಕರನ್ನೂ ನೇಮಿಸಿದನು. ಏಕೆಂದರೆ ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.