3 ಯೆದುತೂನನ ಪುತ್ರರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ. ಈ ಆರು ಮಂದಿಯು ಯೆದುತೂನನ ಪುತ್ರರು. ತಮ್ಮ ತಂದೆ ಯೆದುತೂನನ ಕೈಕೆಳಗೆ ಕಿನ್ನರಿಗಳನ್ನು ಬಾರಿಸಿ, ಯೆಹೋವ ದೇವರನ್ನು ಕೊಂಡಾಡಿ, ಸ್ತುತಿಸಿ ಪ್ರವಾದಿಸುತ್ತಿದ್ದರು.
3 ಯೆದುತೂನ್ಯರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ. ಇವರು ಕಿನ್ನರಿಯನ್ನು ಬಾರಿಸುತ್ತಾ ಪರವಶರಾಗಿ, ಸರ್ವೇಶ್ವರನ ಕೀರ್ತನೆ ಮಾಡುವ ತಮ್ಮ ತಂದೆಯಾದ ಯೆದುತೂನನಿಗೆ ಈ ಆರು ಮಂದಿ ಸಹಾಯಕರು.
3 ಯೆದುತೂನನ ಸಂತತಿಯವರಲ್ಲಿ: ಗೆದಲ್ಯ, ಜೇರಿ, ಯೆಶಾಯ, ಶಿಮ್ಮೀ, ಹಷಬ್ಯ ಮತ್ತು ಮತ್ತಿತ್ಯ. ಒಟ್ಟು ಅವನ ಆರು ಮಂದಿ ಮಕ್ಕಳು ತಮ್ಮ ತಂದೆಯಾದ ಯೆದುತೂನನೊಂದಿಗೆ ಹಾರ್ಪ್ ವಾದ್ಯಗಳನ್ನು ಬಾರಿಸಿ ದೇವರ ಸಂದೇಶವನ್ನು ತಿಳಿಸಿದರು ಮತ್ತು ದೇವರಿಗೆ ಕೃತಜ್ಞತಾಸ್ತುತಿಯನ್ನು ಅರ್ಪಿಸಿದರು.
ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.
“ತರುವಾಯ ಫಿಲಿಷ್ಟಿಯರ ತಾಣವಿರುವ ದೇವರ ಗಿಬೆಯ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣಕ್ಕೆ ಪ್ರವೇಶಿಸುವಾಗ, ನಿನಗೆದುರಾಗಿ ವೀಣೆ, ದಮ್ಮಡಿ, ಕೊಳಲು, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವುದು. ಅವರು ಪ್ರವಾದಿಸುವರು.