Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 25:7 - ಕನ್ನಡ ಸಮಕಾಲಿಕ ಅನುವಾದ

7 ಹೀಗೆಯೇ ಅವರ ಲೆಕ್ಕವೂ, ಯೆಹೋವ ದೇವರ ಹಾಡುಗಳಲ್ಲಿ ತರಬೇತುಪಡೆದ ಸಮಸ್ತ ಪ್ರವೀಣರ ಲೆಕ್ಕ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಬತ್ತೆಂಟು ಮಂದಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇವರು ಯೆಹೋವನ ಕೀರ್ತನೆಗಳನ್ನು ಕಲಿತ ಇವರ ಸಹೋದರರು ಒಟ್ಟು ಇನ್ನೂರ ಎಂಭತ್ತೆಂಟು ಜನರು. ಇವರೆಲ್ಲರೂ ಗಾಯಕ ಪ್ರವೀಣರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇವರೂ ಸರ್ವೇಶ್ವರನ ಕೀರ್ತನೆಗಳನ್ನು ಕಲಿತ ಇವರ ಸಹೋದರರೂ ಒಟ್ಟು ಇನ್ನೂರ ಎಂಬತ್ತೆಂಟು ಮಂದಿ ಗಾಯನಪ್ರವೀಣರು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇವರೂ ಯೆಹೋವಕೀರ್ತನೆಗಳನ್ನು ಕಲಿತ ಇವರ ಸಹೋದರರೂ ಒಟ್ಟು ಇನ್ನೂರ ಎಂಭತ್ತೆಂಟು ಮಂದಿ; ಇವೆಲ್ಲರೂ ಗಾಯನಪ್ರವೀಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರೂ ಅವರ ಸಂಬಂಧಿಕರೂ ಹಾಡುಗಳನ್ನು ಹಾಡಲು ತರಬೇತಿ ಹೊಂದಿದವರಾಗಿದ್ದರು. ಒಟ್ಟು ಇನ್ನೂರ ಎಂಭತ್ತೆಂಟು ಮಂದಿ ಗಾಯಕರು ದೇವರಿಗೆ ಸ್ತುತಿಗೀತೆ ಹಾಡಲು ತರಬೇತಿ ಹೊಂದಿದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 25:7
3 ತಿಳಿವುಗಳ ಹೋಲಿಕೆ  

ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು. ನಾಲ್ಕು ಸಾವಿರ ಮಂದಿ ಸ್ತುತಿಸುವುದಕ್ಕೆ ತಾನು ಸಿದ್ಧಮಾಡಿದ ವಾದ್ಯಗಳಿಂದ ಯೆಹೋವ ದೇವರನ್ನು ಸ್ತುತಿಸಿದರು.”


ಅದರ ಸಂಗಡ ತುತೂರಿ ಊದಲು, ತಾಳ ಬಾರಿಸಲು, ದೇವರ ಗೀತವಾದ್ಯಗಳೂ ಸಹಿತವಾಗಿ ಹೇಮಾನನೂ, ಯೆದುತೂನನೂ ಮೇಲ್ವಿಚಾರಕರಾಗಿದ್ದರು. ಯೆದುತೂನನ ಪುತ್ರರು ದ್ವಾರಪಾಲಕರಾಗಿದ್ದರು.


ಈ ಮನುಷ್ಯರು ಕೆಲಸವನ್ನು ನಂಬಿಕೆಯಿಂದ ಮಾಡಿದರು. ಅವರ ವಿಚಾರಣೆಯ ಮೇಲ್ವಿಚಾರಕರು ಯಾರೆಂದರೆ ಮೆರಾರೀಯ ಪುತ್ರರಲ್ಲಿ ಲೇವಿಯರಾದ ಯಹಾತನೂ, ಓಬದ್ಯನೂ; ಕೊಹಾತ್ಯರ ಮಕ್ಕಳಲ್ಲಿ ಜೆಕರ್ಯನೂ, ಮೆಷುಲ್ಲಾಮನೂ; ಗೀತವಾದ್ಯಗಳಲ್ಲಿ ಬುದ್ಧಿಯುಳ್ಳವರಾದ ಲೇವಿಯರೆಲ್ಲರೂ ಅದನ್ನು ನಡೆಸುತ್ತಾ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು