Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 26:13 - ಕನ್ನಡ ಸಮಕಾಲಿಕ ಅನುವಾದ

13 ಅವರು ಕಿರಿಯರು ಹಿರಿಯರ ಹಾಗೆ ತಮ್ಮ ಪಿತೃಗಳ ಮನೆಯ ಪ್ರಕಾರ ಬಾಗಿಲಿಂದ ಬಾಗಿಲಿಗೂ ಚೀಟುಗಳನ್ನು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರು ಕನಿಷ್ಠ ಕುಟುಂಬವೆಂದೂ, ಶ್ರೇಷ್ಠ ಕುಟುಂಬವೆಂದೂ ವ್ಯತ್ಯಾಸ ಮಾಡದೆ ತಮ್ಮಲ್ಲಿ ಪ್ರತಿಯೊಬ್ಬನು ಕಾಯತಕ್ಕ ಹೆಬ್ಬಾಗಿಲುಗಳನ್ನು ಚೀಟಿನಿಂದಲೇ ಗೊತ್ತುಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವರು, ಕನಿಷ್ಠ ಕುಟುಂಬವೆಂದಾಗಲಿ ಶ್ರೇಷ್ಠ ಕುಟುಂಬವೆಂದಾಗಲಿ ವ್ಯತ್ಯಾಸಮಾಡದೆ, ತಮ್ಮಲ್ಲಿ ಪ್ರತಿಯೊಬ್ಬನು ಕಾಯತಕ್ಕ ಹೆಬ್ಬಾಗಿಲುಗಳನ್ನು ಚೀಟಿನಿಂದಲೇ ಗೊತ್ತುಮಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರು ಕನಿಷ್ಠ ಕುಟುಂಬವೆಂದೂ ಶ್ರೇಷ್ಠ ಕುಟುಂಬವೆಂದೂ ವ್ಯತ್ಯಾಸ ಮಾಡದೆ ತಮ್ಮಲ್ಲಿ ಪ್ರತಿಯೊಬ್ಬನು ಕಾಯತಕ್ಕ ಹೆಬ್ಬಾಗಲುಗಳನ್ನು ಚೀಟಿನಿಂದಲೇ ಗೊತ್ತುಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಪ್ರತಿಯೊಂದು ಕುಟುಂಬಕ್ಕೆ ಒಂದೊಂದು ದ್ವಾರದ ಜವಾಬ್ದಾರಿಕೆಯನ್ನು ಚೀಟುಹಾಕಿ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 26:13
5 ತಿಳಿವುಗಳ ಹೋಲಿಕೆ  

ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ, ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆ ಎದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು.


ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ, ಚಾದೋಕನು, ಅಹೀಮೆಲೆಕನು, ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ, ಆರೋನನ ಪುತ್ರರಾದ ತಮ್ಮ ಸಹೋದರರಿಗೆ ಎದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಕಿರಿಯ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.


ಇವರು ಸಹ ಚೀಟುಹಾಕುವ ಮೂಲಕ ನಿಷ್ಪಕ್ಷಪಾತವಾಗಿ ವಿಭಾಗವಾಗಿದ್ದರು. ಏಕೆಂದರೆ ಪರಿಶುದ್ಧ ಸ್ಥಾನದ ಪ್ರಧಾನರೂ, ದೇವರ ಪ್ರಧಾನರೂ ಎಲಿಯಾಜರನ ಪುತ್ರರೂ, ಈತಾಮಾರನ ಪುತ್ರರೂ ಇದ್ದರು.


ಇದರಲ್ಲಿ ದ್ವಾರಪಾಲಕರ ವರ್ಗಗಳು ಯೆಹೋವ ದೇವರ ಆಲಯದಲ್ಲಿ ಸೇವೆ ಮಾಡುವುದಕ್ಕೆ ವರ್ಗಕ್ಕೆದುರಾಗಿ ಮುಖ್ಯಸ್ಥರಲ್ಲಿ ವಿಭಾಗಿಸಲಾಗಿದ್ದವು.


ಪೂರ್ವದಿಕ್ಕಿನ ಭಾಗದ ಚೀಟು ಶೆಲೆಮ್ಯನಿಗೆ ಬಿತ್ತು. ಅವನ ಮಗ ಬುದ್ಧಿಯುಳ್ಳ ಆಲೋಚನೆಯವನಾಗಿರುವ ಜೆಕರ್ಯನಿಗೋಸ್ಕರ ಹಾಕಿದ ಚೀಟು ಉತ್ತರ ಭಾಗಕ್ಕೆ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು