17 ಪೂರ್ವ ಕಡೆಯಾಗಿ ಆರು ಮಂದಿ ಲೇವಿಯರಿದ್ದರು. ಉತ್ತರ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ, ದಕ್ಷಿಣ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ ಉಗ್ರಾಣ ಮಂದಿರದ ಬಳಿಯಲ್ಲಿ ಇಬ್ಬರಿಬ್ಬರಾಗಿಯೂ,
17 ಲೇವಿಯರಲ್ಲಿ ಪ್ರತಿದಿನವೂ ಪೂರ್ವ ಬಾಗಿಲನ್ನು ಆರು ಮಂದಿ, ಪಶ್ಚಿಮ ಬಾಗಿಲನ್ನು ನಾಲ್ಕು ಮಂದಿ, ದಕ್ಷಿಣ ಬಾಗಿಲನ್ನು ನಾಲ್ಕು ಮಂದಿ, ಉಗ್ರಾಣ ಮಂದಿರದ ಎರಡು ಬಾಗಿಲುಗಳನ್ನು ಇಬ್ಬಿಬ್ಬರು,
17 ಪ್ರತಿದಿನ ಪೂರ್ವದಿಕ್ಕಿನ ಬಾಗಿಲಿನಲ್ಲಿ ಆರು ಮಂದಿ ಲೇವಿಯರು ಕಾವಲಿಗಿದ್ದರು; ಉತ್ತರದಿಕ್ಕಿನ ಬಾಗಿಲಿನಲ್ಲಿ ಪ್ರತಿದಿನ ನಾಲ್ಕು ಮಂದಿ ಲೇವಿಯರು ಕಾವಲಿಗಿದ್ದರು; ದಕ್ಷಿಣದ ಬಾಗಿಲಿನಲ್ಲಿ ನಾಲ್ಕು ಮಂದಿ ಲೇವಿಯರು ಕಾವಲಿಗಿದ್ದರು; ಇಬ್ಬರು ಲೇವಿಯರು ಬೆಲೆಬಾಳುವ ವಸ್ತುಗಳ ಕೋಣೆಗೆ ಕಾವಲಾಗಿದ್ದರು.
ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ, ಅವರ ಸೇವೆಗೆ ಯಾಜಕ ವರ್ಗಗಳವರನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ, ಯಾಜಕರ ಮುಂದೆ ಸ್ತುತಿಸುವುದಕ್ಕೂ, ಸೇವೆ ಮಾಡುವುದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ, ಸೇವೆಯ ಬಾಗಿಲಲ್ಲಿ ತಮ್ಮ ವರ್ಗಗಳ ಸರದಿಯ ಪ್ರಕಾರವಾಗಿ ದ್ವಾರಪಾಲಕರನ್ನೂ ನೇಮಿಸಿದನು. ಏಕೆಂದರೆ ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.
ಲೇವಿಯನಾಗಿರುವ ಇಮ್ನನ ಮಗ ಕೋರೆಯು ಎಂಬ ಪೂರ್ವದಿಕ್ಕಿನಲ್ಲಿರುವ ದ್ವಾರಪಾಲಕನು ಯೆಹೋವ ದೇವರ ಕಾಣಿಕೆಗಳನ್ನೂ, ಮಹಾಪರಿಶುದ್ಧವಾದವುಗಳನ್ನೂ ಪಾಲು ಹಂಚುವುದಕ್ಕೆ ದೇವರಿಗೆ ಉಚಿತಾರ್ಥವಾಗಿ ಅರ್ಪಿಸಿದ ಕಾಣಿಕೆಗಳ ಮೇಲ್ವಿಚಾರಕನಾಗಿದ್ದನು.