Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 26:29 - ಕನ್ನಡ ಸಮಕಾಲಿಕ ಅನುವಾದ

29 ಇಚ್ಹಾರರಲ್ಲಿ ಕೆನನ್ಯನನ್ನು, ಅವನ ಪುತ್ರರನ್ನು ಪಾರುಪತ್ಯಗಾರರಿಗೋಸ್ಕರವೂ, ನ್ಯಾಯಾಧಿಪತಿಗಳಿಗೋಸ್ಕರವೂ ಇಸ್ರಾಯೇಲಿನ ಮೇಲೆ ಹೊರಗಿನ ಕಾರ್ಯಗಳನ್ನು ನೋಡಲು ನೇಮಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳು ಲೌಕೀಕೋದ್ಯೋಗದಲ್ಲಿದ್ದರು. ಅವರು ಇಸ್ರಾಯೇಲರ ಅಧಿಕಾರಿಗಳೂ ಮತ್ತು ನ್ಯಾಯಾಧಿಪತಿಗಳೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳೂ ಲೌಕಿಕೋದ್ಯೋಗದಲ್ಲಿದ್ದರು. ಅವರು ಇಸ್ರಯೇಲರ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳೂ ಲೌಕಿಕೋದ್ಯೋಗದಲ್ಲಿದ್ದರು. ಅವರು ಇಸ್ರಾಯೇಲ್ಯರ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಕೆನನ್ಯನು ಇಚ್ಹಾರ್ಯ ವಂಶದವನಾಗಿದ್ದನು. ಕೆನನ್ಯನೂ ಅವನ ಮಕ್ಕಳೂ ನ್ಯಾಯಾಧೀಶರಾಗಿಯೂ ಕಾನೂನು ಪಾಲಕರಾಗಿಯೂ ಇಸ್ರೇಲಿನ ಅನೇಕ ಕಡೆಗಳಲ್ಲಿ ಕೆಲಸ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 26:29
11 ತಿಳಿವುಗಳ ಹೋಲಿಕೆ  

ಲೇವಿಯರ ಮುಖ್ಯಸ್ಥರಲ್ಲಿ ಶಬ್ಬೆತೈನೂ, ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು.


ದಾವೀದನು ಹೇಳಿದ್ದೇನೆಂದರೆ, “ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಯೆಹೋವ ದೇವರ ಮನೆಯ ಕೆಲಸವನ್ನು ನಡಿಸುವವರಾಗಿದ್ದರು. ಮತ್ತು ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿಪತಿಗಳೂ ಆಗಿದ್ದರು.


ಇದಲ್ಲದೆ ಕಾರ್ಮಿಕರ ಮೇಲೆಯೂ, ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ಮೇಲ್ವಿಚಾರಕರಾಗಿದ್ದರು. ಲೇವಿಯರಲ್ಲಿ ಕೆಲವರು ಕಾರ್ಯದರ್ಶಿಗಳೂ, ಬರಹಗಾರರೂ, ದ್ವಾರಪಾಲಕರೂ ಆಗಿದ್ದರು.


ಅಮ್ರಾಮಿಯರಲ್ಲಿಯೂ ಇಚ್ಹಾರರಲ್ಲಿಯೂ ಹೆಬ್ರೋನಿಯರಲ್ಲಿಯೂ ಉಜ್ಜೀಯೇಲರಲ್ಲಿಯೂ ಇವರ ಸಂತಾನದವರಲ್ಲಿ:


ಕೊಹಾತನ ಪುತ್ರರು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್ ಎಂಬ ನಾಲ್ಕು ಮಂದಿ ಮಕ್ಕಳಿದ್ದರು.


ಅಮ್ರಾಮಿಯರು, ಇಚ್ಹಾರರು, ಹೆಬ್ರೋನಿಯರು, ಉಜ್ಜೀಯೇಲರು; ಇವು ಕೊಹಾತನ ಕುಟುಂಬಗಳು.


ಇದಲ್ಲದೆ ದರ್ಶಿಯಾದ ಸಮುಯೇಲನೂ, ಕೀಷನ ಮಗ ಸೌಲನೂ, ನೇರನ ಮಗ ಅಬ್ನೇರನೂ, ಚೆರೂಯಳ ಮಗ ಯೋವಾಬನೂ ಪ್ರತಿಷ್ಠೆ ಮಾಡಿದ್ದೆಲ್ಲವೂ ಮತ್ತು ಯಾರು ಪ್ರತಿಷ್ಠೆ ಮಾಡಿದ್ದರೋ, ಅದೆಲ್ಲವೂ ಶೆಲೋಮೋತನ ಕೈಕೆಳಗೂ, ಅವನ ಸಹೋದರರ ಕೈಕೆಳಗೂ ಇತ್ತು.


ನಿಮ್ಮ ಊರುಗಳಲ್ಲಿ ಉಂಟಾದ ವಿವಾದಗಳ ವಿಷಯವಾಗಿ ಅಂದರೆ, ಕೊಲೆಯ ವ್ಯಾಜ್ಯವಾಗಲಿ, ವಾದಿ ಪ್ರತಿವಾದ ವ್ಯಾಜ್ಯವಾಗಲಿ, ಹೊಡೆದಾಟದ ವ್ಯಾಜ್ಯವಾಗಲಿ, ನಿಮಗೆ ನ್ಯಾಯತೀರಿಸುವುದು ಕಷ್ಟವಾದರೆ, ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ಹೋಗಿರಿ.


ನೀವು ಯಾಜಕರಾದ ಲೇವಿಯರ ಬಳಿಗೂ, ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು. ಅವರು ನಿಮಗೆ ಆ ತೀರ್ಪನ್ನು ತಿಳಿಸುವರು.


ಐದನೆಯ ತಿಂಗಳಿನ ಐದನೆಯ ಅಧಿಪತಿಯು ಇಜ್ರಾಹನಾದ ಶಮ್ಹೂತನು; ಅವನ ವರ್ಗದಲ್ಲಿ 24,000 ಜನರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು