1 ಪೂರ್ವಕಾಲ ವೃತ್ತಾಂತ 26:30 - ಕನ್ನಡ ಸಮಕಾಲಿಕ ಅನುವಾದ30 ಹೆಬ್ರೋನಿಯರಲ್ಲಿ ಬಲವುಳ್ಳವರಾದ ಹಷಬ್ಯನೂ, ಅವನ ಸಹೋದರರೂ ಯೆಹೋವ ದೇವರ ಸಮಸ್ತ ಕಾರ್ಯಗಳಲ್ಲಿಯೂ, ಅರಸನ ಸೇವೆಯಲ್ಲಿಯೂ ಸಾವಿರದ ಏಳು ನೂರು ಮಂದಿ ಪಶ್ಚಿಮವಾಗಿ ಯೊರ್ದನ್ ನದಿ ಈಚೆಯಲ್ಲಿ ಇಸ್ರಾಯೇಲರೊಳಗೆ ಅಧಿಪತಿಗಳಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಹೆಬ್ರೋನ್ಯರಲ್ಲಿ ಹಷಬ್ಯನೂ ಅವನ ಸಹೋದರರೂ ಯೊರ್ದನ್ ಹೊಳೆಯ ಪಶ್ಚಿಮ ಪ್ರಾಂತ್ಯಗಳಲ್ಲಿದ್ದ ಇಸ್ರಾಯೇಲ್ಯರೊಳಗೆ ಯೆಹೋವನ ಸೇವೆಯ ಎಲ್ಲಾ ಕಾರ್ಯಗಳನ್ನೂ ಮತ್ತು ರಾಜಕೀಯ ಕಾರ್ಯಗಳನ್ನೂ ನಡೆಸುತ್ತಿದ್ದರು. ಸಮರ್ಥರಾದ ಅವರು ಸಾವಿರದ ಏಳುನೂರು ಜನರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಹೆಬ್ರೋನ್ಯರಲ್ಲಿ ಹಷಬ್ಯನೂ ಅವನ ಸಹೋದರರೂ ಜೋರ್ಡನ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿದ್ದ ಇಸ್ರಯೇಲರೊಳಗೆ ಸರ್ವೇಶ್ವರನ ಸೇವಾಕಾರ್ಯಗಳನ್ನೂ ರಾಜಕೀಯ ಕಾರ್ಯಗಳನ್ನೂ ನಡೆಸುತ್ತಿದ್ದರು. ಸಮರ್ಥರಾದ ಅವರು ಸಾವಿರದ ಏಳುನೂರು ಮಂದಿ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಹೆಬ್ರೋನ್ಯರಲ್ಲಿ ಹಷಬ್ಯನೂ ಅವನ ಸಹೋದರರೂ ಯೊರ್ದನ್ ಹೊಳೆಯ ಪಶ್ಚಿಮಪ್ರಾಂತಗಳಲ್ಲಿದ್ದ ಇಸ್ರಾಯೇಲ್ಯರೊಳಗೆ ಯೆಹೋವನ ಸೇವಾಕಾರ್ಯಗಳನ್ನೂ ರಾಜಕೀಯ ಕಾರ್ಯಗಳನ್ನೂ ನಡಿಸುತ್ತಿದ್ದರು. ಸಮರ್ಥರಾದ ಅವರು ಸಾವಿರದ ಏಳುನೂರು ಮಂದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಹಷಬ್ಯನು ಹೆಬ್ರೋನ್ ಸಂತಾನದವನಾಗಿದ್ದನು. ಇವನೂ ಇವನ ಸಂಬಂಧಿಕರೂ ಜೋರ್ಡನ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ಯೆಹೋವನ ಸೇವೆಗೂ ಅರಸನ ಕಾರ್ಯಕ್ಕೂ ಅಧಿಕಾರಿಗಳಾಗಿದ್ದರು. ಹಷಬ್ಯನ ವರ್ಗದಲ್ಲಿ ಒಟ್ಟು ಒಂದು ಸಾವಿರದ ಏಳುನೂರು ಮಂದಿ ಸಾಮರ್ಥ್ಯಶಾಲಿಗಳಿದ್ದರು. ಅಧ್ಯಾಯವನ್ನು ನೋಡಿ |