Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 26:4 - ಕನ್ನಡ ಸಮಕಾಲಿಕ ಅನುವಾದ

4 ಓಬೇದ್ ಏದೋಮನ ಪುತ್ರರು: ಚೊಚ್ಚಲ ಮಗನು ಶೆಮಾಯ; ಎರಡನೆಯವನು ಯೆಹೋಜಾಬಾದ್; ಮೂರನೆಯವನು ಯೋವಾಹ; ನಾಲ್ಕನೆಯವನು ಸಾಕಾರ; ಐದನೆಯವನು ನೆತನೆಯೇಲ್;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಓಬೇದೆದೋಮನ ಮಕ್ಕಳಲ್ಲಿ ಶೆಮಾಯನು ಚೊಚ್ಚಲನು, ಯೆಹೋಜಾಬಾದನು ಎರಡನೆಯವನು. ಯೋವಾಹನು ಮೂರನೆಯವನು, ಸಾಕಾರನು ನಾಲ್ಕನೆಯವನು, ನೆತನೇಲನು ಐದನೆಯವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಓಬೇದೆದೋಮನ ಮಕ್ಕಳಲ್ಲಿ ಶೆಮಾಯನು ಚೊಚ್ಚಲನು; ಯೆಹೋಜಾಬಾದನು ಮರಚಲನು; ಯೋವಾಹನು ಮೂರನೆಯವನು; ಸಾಕಾರನು ನಾಲ್ಕನೆಯವನು; ನೆತನೇಲನು ಐದನೆಯವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಓಬೇದೆದೋಮನ ಮಕ್ಕಳಲ್ಲಿ ಶೆಮಾಯನು ಚೊಚ್ಚಲನು; ಯೆಹೋಜಾಬಾದನು ಮರಚಲನು; ಯೋವಾಹನು ಮೂರನೆಯವನು; ಸಾಕಾರನು ನಾಲ್ಕನೆಯವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಓಬೇದೆದೋಮ್ ಮತ್ತು ಅವನ ಮಕ್ಕಳು: ಶೆಮಾಯನು ಚೊಚ್ಚಲಮಗ; ಎರಡನೆಯವನು ಯೆಹೋಜಾಬಾದ್; ಮೂರನೆಯವನು ಯೋವಾಹ, ನಾಲ್ಕನೆಯವನು ಸಾಕಾರ್, ಐದನೆಯವನು ನೆತನೇಲ್;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 26:4
11 ತಿಳಿವುಗಳ ಹೋಲಿಕೆ  

ಓಬೇದ್ ಏದೋಮ್ ಮತ್ತು ಅವನ ಸಹಚರರಾದ ಅರವತ್ತೆಂಟು ಮಂದಿಯೂ, ದ್ವಾರಪಾಲಕರಾದ ಯೆದುತೂನನ ಮಗ ಓಬೇದ್ ಎದೋಮ್ ಮತ್ತು ಹೋಸ ನೇಮಕವಾಗಿದ್ದರು.


ಯಾಜಕರಾದ ಶೆಬನ್ಯ, ಯೋಷಾಫಾಟ್, ನೆತನೆಯೇಲ್, ಅಮಾಸೈಯೂ, ಜೆಕರ್ಯನೂ, ಬೆನಾಯನೂ, ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು. ಓಬೇದ್ ಏದೋಮನೂ, ಯೆಹೀಯನೂ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು.


ಅವರ ಸಂಗಡ ಎರಡನೆಯ ದರ್ಜೆಯವರಾದ ತಮ್ಮ ಸಹೋದರರಾಗಿರುವ ಜೆಕರ್ಯನನ್ನೂ ಬೇನನನ್ನೂ ಯಾಜೀಯೇಲನನ್ನೂ, ಶೆಮೀರಾಮೋತನನ್ನೂ ಯೆಹೀಯೇಲನನ್ನೂ, ಉನ್ನೀಯನ್ನೂ, ಎಲೀಯಾಬನನ್ನೂ, ಬೆನಾಯನನ್ನೂ, ಮಾಸೇಯನನ್ನೂ, ಮತ್ತಿತ್ಯನನ್ನೂ, ಎಲೀಫೆಲೇಹುನನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಓಬೇದ್ ಏದೋಮನನ್ನೂ ಯೆಹೀಯೇಲನನ್ನೂ ನೇಮಿಸಿದರು.


ಅವರು ಯಾರೆಂದರೆ: ಮುಖ್ಯಸ್ಥನಾದ ಆಸಾಫನೂ, ಅವನ ತರುವಾಯ ಜೆಕರ್ಯನೂ, ಯೆಜೀಯೇಲನೂ, ಶೆಮೀರಾಮೋತನೂ, ಯೆಹೀಯೇಲನೂ, ಮತ್ತಿತ್ಯನೂ, ಎಲೀಯಾಬನೂ, ಬೆನಾಯನೂ, ಓಬೇದ್ ಏದೋಮನೂ, ಯೆಹಿಯೇಲನೂ ಇವರು ವೀಣೆಗಳನ್ನೂ, ಕಿನ್ನರಿಗಳನ್ನೂ ಬಾರಿಸುತ್ತಿದ್ದರು. ಆದರೆ ಆಸಾಫನು ತಾಳಗಳನ್ನು ಬಾರಿಸುತ್ತಿದ್ದನು.


ಮತ್ತಿತ್ಯ, ಎಲೀಫೆಲೇಹು, ಮಿಕ್ನೇಯ, ಓಬೇದ್ ಏದೋಮ್, ಯೆಹೀಯೇಲ್, ಅಜಜ್ಯ ಎಂಬವರನ್ನು ಶೆಮಿನಿಥ್ ಎಂಬ ಮಂದ್ರಸ್ಥಾಯಿಯ ಕಿನ್ನರಿಗಳನ್ನು ಬಾರಿಸುವುದಕ್ಕೂ ನೇಮಿಸಿಕೊಂಡರು.


ದಾವೀದನು ಯೆಹೋವ ದೇವರ ಮಂಜೂಷವನ್ನು ದಾವೀದನ ಪಟ್ಟಣಕ್ಕೆ ತರಲು ಮನಸ್ಸಿಲ್ಲದೆ, ಗಿತ್ತೀಯನಾದ ಓಬೇದ್ ಏದೋಮನ ಮನೆಗೆ ತೆಗೆದುಕೊಂಡು ಹೋದನು.


ಯೆಹೋವ ದೇವರ ಮಂಜೂಷವು ಗಿತ್ತೀಯನಾದ ಓಬೇದ್ ಏದೋಮನ ಮನೆಯಲ್ಲಿ ಮೂರು ತಿಂಗಳು ಇದ್ದುದರಿಂದ, ಯೆಹೋವ ದೇವರು ಓಬೇದ್ ಎದೋಮನನ್ನೂ, ಅವನ ಮನೆಯವರೆಲ್ಲರನ್ನೂ ಆಶೀರ್ವದಿಸಿದರು.


ದೇವರ ಮಂಜೂಷವು ಓಬೇದ್ ಏದೋಮನ ಮನೆಯಲ್ಲಿ ಮೂರು ತಿಂಗಳು ಇದ್ದುದರಿಂದ, ಯೆಹೋವ ದೇವರು ಓಬೇದ್ ಎದೋಮನನ್ನೂ, ಅವನ ಮನೆಯವರೆಲ್ಲರನ್ನೂ, ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದರು.


ಐದನೆಯವನು ಏಲಾಮನು; ಆರನೆಯವನು ಯೆಹೋಹಾನಾನನು; ಏಳನೆಯವನು ಎಲಿಹೋಯೇನೈನು.


ಆರನೆಯವನು ಅಮ್ಮಿಯೇಲ್; ಏಳನೆಯವನು ಇಸ್ಸಾಕಾರ್ ಮತ್ತು ಎಂಟನೆಯವನು ಪೆಯುಲ್ಲೆತೈ. ಓಬೇದ್ ಎದೋಮನು ದೇವರ ಆಶೀರ್ವಾದಕ್ಕೆ ಪಾತ್ರನಾಗಿದ್ದನು.


“ದೇವರ ಮಂಜೂಷದ ನಿಮಿತ್ತ ಯೆಹೋವ ದೇವರು ಓಬೇದ್ ಏದೋಮನ ಮನೆಯನ್ನೂ, ಅವನಿಗೆ ಉಂಟಾದದ್ದೆಲ್ಲವನ್ನೂ ಆಶೀರ್ವದಿಸಿದ್ದಾರೆ,” ಎಂದು ಅರಸನಾದ ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು ಹೋಗಿ, ಓಬೇದ್ ಏದೋಮನ ಮನೆಯೊಳಗಿಂದ ದೇವರ ಮಂಜೂಷವನ್ನು ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು