1 ಪೂರ್ವಕಾಲ ವೃತ್ತಾಂತ 27:23 - ಕನ್ನಡ ಸಮಕಾಲಿಕ ಅನುವಾದ23 ದಾವೀದನು ಇಪ್ಪತ್ತು ವರ್ಷಗಳೊಳಗೆ ಇದ್ದವರ ಲೆಕ್ಕ ತೆಗೆದುಕೊಳ್ಳಲಿಲ್ಲ. ಏಕೆಂದರೆ, “ಇಸ್ರಾಯೇಲನನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿ ಮಾಡುವೆನು,” ಎಂದು ಯೆಹೋವ ದೇವರು ಹೇಳಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಇಸ್ರಾಯೇಲರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂಬುದಾಗಿ ಯೆಹೋವನು ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರ್ಷಕ್ಕಿಂತ ಕಡಿಮೆ ವಯಸ್ಸುಳ್ಳವರನ್ನು ಪರಿಗಣಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಇಸ್ರಯೇಲರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂದು ಸರ್ವೇಶ್ವರ ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರ್ಷಕ್ಕಿಂತ ಕಡಿಮೆಯಾದ ವಯಸ್ಸುಳ್ಳವರನ್ನು ಲೆಕ್ಕಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಇಸ್ರಾಯೇಲ್ಯರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂಬದಾಗಿ ಯೆಹೋವನು ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರುಷಕ್ಕಿಂತ ಕಡಿಮೆಯಾದ ವಯಸ್ಸುಳ್ಳವರನ್ನು ಲೆಕ್ಕಿಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ದೇವರು ಇಸ್ರೇಲರನ್ನು ಆಕಾಶದ ನಕ್ಷತ್ರದಷ್ಟು ಹೆಚ್ಚಿಸುವೆನೆಂದು ವಾಗ್ದಾನ ಮಾಡಿದ್ದ ಪ್ರಕಾರ ಇಸ್ರೇಲರ ಸಂಖ್ಯೆ ಅಪರಿಮಿತವಾಗಿತ್ತು. ಆದ್ದರಿಂದ ದಾವೀದನು ಇಪ್ಪತ್ತು ವರ್ಷ ಪ್ರಾಯದ ಮೇಲ್ಪಟ್ಟ ಗಂಡಸರನ್ನು ಮಾತ್ರ ಲೆಕ್ಕಿಸುವ ಆಲೋಚನೆ ಮಾಡಿದನು. ಅಧ್ಯಾಯವನ್ನು ನೋಡಿ |