Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 27:28 - ಕನ್ನಡ ಸಮಕಾಲಿಕ ಅನುವಾದ

28 ತಗ್ಗಿನಲ್ಲಿರುವ ಓಲಿವ್ ಮರಗಳ ಮೇಲೆಯೂ, ಅತ್ತಿಮರಗಳ ಮೇಲೆಯೂ ಗೆದೇರ್ಯನಾದ ಬಾಳ್ ಹಾನಾನನು ಇದ್ದನು. ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷನು ಜವಾಬ್ದಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಎಣ್ಣೇ ಮರದ ತೋಪುಗಳ ಮೇಲೆಯೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳ ಮೇಲೆಯೂ ಗೆದೇರಾ ಊರಿನವನಾದ ಬಾಳ್ಹಾನಾನ್ ಮತ್ತು ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಎಣ್ಣೇಮರದ ತೋಪುಗಳ ಮೇಲೆ ಹಾಗೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳ ಮೇಲೆ ಗೆದೆರೂರಿನವನಾದ ಬಾಳ್ಷಾನಾನ್; ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷ್;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಎಣ್ಣೇಮರದ ತೋಪುಗಳ ಮೇಲೆಯೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳ ಮೇಲೆಯೂ ಗೆದೆರೂರಿನವನಾದ ಬಾಳ್ಹಾನಾನ್, ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಗೆದೆರಿನ ಬಾಳ್ಹಾನಾನ್ ಪಶ್ಚಿಮದ ಬೆಟ್ಟಪ್ರದೇಶದಲ್ಲಿ ಆಲಿವ್ ಮರಗಳ ಮತ್ತು ಸಿಖಮೊರ್ ಮರಗಳ ತೋಪುಗಳಿಗೆ ಅಧಿಕಾರಿಯಾಗಿದ್ದನು. ಯೋವಾಷನು ಆಲಿವ್ ಎಣ್ಣೆಯ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 27:28
9 ತಿಳಿವುಗಳ ಹೋಲಿಕೆ  

ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಬಂಗಾರವನ್ನು ಕಲ್ಲುಗಳಂತೆಯೂ, ದೇವದಾರು ಮರಗಳನ್ನು ತಗ್ಗಿನಲ್ಲಿರುವ ಅತ್ತಿಮರಗಳಂತೆಯೂ ಪರಿಗಣಿಸಲಾಯಿತು.


ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳಂತೆಯೂ, ದೇವದಾರು ಮರಗಳನ್ನು ತಗ್ಗಿನಲ್ಲಿರುವ ಅತ್ತಿಮರಗಳಂತೆಯೂ ಪರಿಗಣಿಸಲಾಯಿತು.


ಆದ್ದರಿಂದ ಇಸ್ರಾಯೇಲರು ಲೆಕ್ಕ ಮಾಡಿ ಆಹಾರವನ್ನು ಸಿದ್ಧಮಾಡಿಕೊಂಡು ಅವರಿಗೆ ಎದುರಾಗಿ ಹೊರಟರು. ಇಸ್ರಾಯೇಲರು ಅವರಿಗೆದುರಾಗಿ ದಂಡಿಳಿದಿರುವಾಗ, ಅವರು ಆಡುಮರಿಗಳ ಎರಡು ಮಂದೆಗಳ ಹಾಗಿದ್ದರು. ಆದರೆ ಅರಾಮ್ಯರು ಮೈದಾನದಲ್ಲಿ ಸಂಪೂರ್ಣವಾಗಿ ಆವರಿಸಿದ್ದರು.


ಇದಲ್ಲದೆ ಅರಸನಿಗೂ, ಅವನ ಮನೆಗೂ ಆಹಾರವನ್ನು ಸಿದ್ಧಮಾಡಿಸುವುದಕ್ಕೋಸ್ಕರ ಸೊಲೊಮೋನನಿಗೆ ಸಮಸ್ತ ಇಸ್ರಾಯೇಲಿನ ಮೇಲೆ ಹನ್ನೆರಡು ಜಿಲ್ಲಾಧಿಕಾರಿಗಳು ಇದ್ದರು. ಪ್ರತಿಯೊಬ್ಬನೂ ತನಗೆ ವರುಷದಲ್ಲಿ ನೇಮಕವಾದ ತಿಂಗಳು ಬಂದಾಗ, ದವಸಧಾನ್ಯಗಳನ್ನು ಒದಗಿಸುತ್ತಿದ್ದನು.


ಆಗ ಯೇಸುವನ್ನು ಕಾಣುವಂತೆ ಅವನು ಮುಂದಾಗಿ ಓಡಿಹೋಗಿ, ಒಂದು ಅತ್ತಿಮರವನ್ನು ಹತ್ತಿದನು. ಏಕೆಂದರೆ ಯೇಸು ಆ ಮಾರ್ಗವಾಗಿಯೇ ಬರುತ್ತಿದ್ದರು.


ಸೌಲನು ಮೃತನಾದ ಮೇಲೆ ಅಕ್ಬೋರನ ಮಗ ಬಾಳ್ ಹಾನಾನ್ ಅರಸನಾದನು.


ರಾಮಾ ಊರಿನ ಶಿಮ್ಮೀ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳುತ್ತಿದ್ದನು. ದ್ರಾಕ್ಷಿ ತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಪ್ಮೀಯನಾದ ಜಬ್ದೀ ಜವಾಬ್ದಾರಿಯಾಗಿದ್ದನು.


ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.


ಗೆದೇರೋತ್, ಬೇತ್‌ದಾಗೋನ್, ನಾಮಾ, ಮಕ್ಕೇದಾ, ಎಂಬ ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು