Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 27:32 - ಕನ್ನಡ ಸಮಕಾಲಿಕ ಅನುವಾದ

32 ಇದಲ್ಲದೆ ದಾವೀದನ ಚಿಕ್ಕಪ್ಪನಾದ ಯೋನಾತಾನನು ಗ್ರಹಿಕೆಯು, ವಿವೇಕಿಯೂ ಆದ ಲೇಖಕನಾಗಿದ್ದನು. ಹಕ್ಮೋನಿಯ ಮಗನಾದ ಯೆಹೀಯೇಲ್ ಅರಸನ ಪುತ್ರರನ್ನು ನೋಡಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ವಿವೇಕಿಯೂ, ಶಾಸ್ತ್ರಜ್ಞನೂ ಆದ ಯೋನಾತಾನನೆಂಬ ದಾವೀದನ ಚಿಕ್ಕಪ್ಪನು, ಮಂತ್ರಿಯೂ ಹಕ್ಮೋನಿಯ ಮಗನಾದ ಯೆಹೀಯೇಲನು ರಾಜಪುತ್ರಪಾಲಕನೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ವಿವೇಕಿಯೂ ಶಾಸ್ತ್ರಜ್ಞನೂ ಆದ ಯೋನಾತಾನನೆಂಬ ದಾವೀದನ ಚಿಕ್ಕಪ್ಪನು ಮಂತ್ರಿಯಾಗಿದ್ದನು; ಹಕ್ಮೋನಿಯ ಮಗ ಯೆಹೀಯೇಲನು ರಾಜಪುತ್ರ ಪಾಲಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ವಿವೇಕಿಯೂ ಶಾಸ್ತ್ರಜ್ಞನೂ ಆದ ಯೋನಾತಾನನೆಂಬ ದಾವೀದನ ಚಿಕ್ಕಪ್ಪನು ಮಂತ್ರಿಯೂ ಹಕ್ಮೋನಿಯ ಮಗನಾದ ಯೆಹೀಯೇಲನು ರಾಜಪುತ್ರಪಾಲಕನೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ದಾವೀದನ ಚಿಕ್ಕಪ್ಪನಾದ ಯೋನಾತಾನನು ಉತ್ತಮ ಸಲಹೆಗಾರನಾಗಿದ್ದನು. ಹಕ್ಮೋನಿಯ ಮಗನಾದ ಯೆಹೀಯೇಲನು ರಾಜನ ಗಂಡುಮಕ್ಕಳನ್ನು ಪಾಲನೆ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 27:32
6 ತಿಳಿವುಗಳ ಹೋಲಿಕೆ  

ದಾವೀದನ ಪರಾಕ್ರಮಶಾಲಿಗಳ ಪಟ್ಟಿ: ಹಕ್ಮೋನಿಯನಾದ ಯಾಷೊಬ್ಬಾಮನು ಅಧಿಪತಿಗಳಲ್ಲಿ ಮುಖ್ಯಸ್ಥನಾಗಿದ್ದನು. ಇವನು ತನ್ನ ಈಟಿಯಿಂದ ಮುನ್ನೂರು ಮಂದಿಗೆ ವಿರೋಧವಾಗಿ ಹೋರಾಡಿ ಅವರನ್ನು ಒಂದೇ ಕಾಳಗದಲ್ಲಿ ಕೊಂದುಹಾಕಿದನು.


ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾದ ಶಿಮೆಯನ ಮಗನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.


ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮೆಯನ ಮಗ ಯೊನಾದಾಬನೆಂಬ ಹೆಸರುಳ್ಳ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಬಹು ಕುಯುಕ್ತಿಯುಳ್ಳವನಾಗಿದ್ದನು.


ಕುರಿ ಮಂದೆಗಳ ಮೇಲೆ ಜವಾಬ್ದಾರಿಯಾಗಿದ್ದವನು ಹಗ್ರೀಯನಾದ ಯಾಜೀಜ್. ಇವರೆಲ್ಲರು ಅರಸನಾದ ದಾವೀದನ ಸ್ವತ್ತಿನ ಮೇಲೆ ಪ್ರಧಾನರಾಗಿದ್ದರು.


ಅರಸನ ಆಲೋಚನೆಗಾರನು ಅಹೀತೋಫೆಲ್; ಅರಸನ ಆಪ್ತ ಸ್ನೇಹಿತನು ಅರ್ಕಿಯನಾದ ಹೂಷೈ.


ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾದ ಶಿಮ್ಮನ ಮಗನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು