Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 28:2 - ಕನ್ನಡ ಸಮಕಾಲಿಕ ಅನುವಾದ

2 ಆಗ ಅರಸನಾದ ದಾವೀದನು ಎದ್ದು ನಿಂತು, “ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ. ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ನಿಮಿತ್ತವಾಗಿಯೂ, ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಗೆ ಆಲಯವನ್ನು ನಾನು ಕಟ್ಟಿಸಲು ಮನಸ್ಸು ಮಾಡಿ, ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರು ಸೇರಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನೆಂದರೆ, “ನನ್ನ ಸಹೋದರರೇ, ನನ್ನ ಪ್ರಜೆಗಳೇ, ನನ್ನ ಮಾತನ್ನು ಕೇಳಿರಿ, ಯೆಹೋವನ ಒಡಂಬಡಿಕೆಯ ಮಂಜೂಷಕ್ಕೋಸ್ಕರ ನಮ್ಮ ದೇವರ ಪಾದಪೀಠಕ್ಕೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವರು ಕೂಡಿಬಂದಾಗ ಅರಸ ದಾವೀದನು ಎದ್ದು ನಿಂತು ಅವರಿಗೆ, “ನನ್ನ ಸಹೋದರರೇ, ಪ್ರಜೆಗಳೇ, ಕೇಳಿ; ಸರ್ವೇಶ್ವರನ ನಿಬಂಧನ ಮಂಜೂಷಕ್ಕಾಗಿ ಹಾಗೂ ನಮ್ಮ ದೇವರ ಪಾದಪೀಠಕ್ಕಾಗಿ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸುಮಾಡಿ ಎಲ್ಲವನ್ನೂ ಸಿದ್ಧಪಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವರು ಕೂಡಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನಂದರೆ - ನನ್ನ ಸಹೋದರರೇ, ಪ್ರಜೆಗಳೇ, ಕೇಳಿರಿ. ಯೆಹೋವನ ನಿಬಂಧನಮಂಜೂಷಕ್ಕೋಸ್ಕರವೂ ನಮ್ಮ ದೇವರ ಪಾದಪೀಠಕ್ಕೋಸ್ಕರವೂ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಎಲ್ಲರೂ ಸೇರಿಬಂದಾಗ ದಾವೀದನು ನಿಂತು ಹೇಳಿದ್ದೇನೆಂದರೆ, “ನನ್ನ ಜನರೇ, ನನ್ನ ಸಹೋದರರೇ, ನನ್ನ ಮಾತುಗಳನ್ನು ಕೇಳಿರಿ. ನಮ್ಮ ದೇವರ ಒಡಂಬಡಿಕೆಯ ಪೆಟ್ಟಿಗೆಗೋಸ್ಕರ ಒಂದು ಯೋಗ್ಯಸ್ಥಳವನ್ನು ನಿರ್ಮಿಸಬೇಕೆಂದು ನನ್ನ ಮನಸ್ಸಿನಲ್ಲಿತ್ತು. ಆ ಸ್ಥಳವು ದೇವರ ಪಾದಪೀಠವಾಗಬೇಕು. ಅದಕ್ಕಾಗಿ ನಾನು ದೇವರಿಗೆ ಆಲಯವನ್ನು ಕಟ್ಟಿಸಲು ಯೋಜನೆಯನ್ನು ಹಾಕಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 28:2
30 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೇಳುವುದೇನೆಂದರೆ: “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ, ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?


ನಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ಅವರ ಪಾದಪೀಠದಲ್ಲಿ ಆರಾಧಿಸಿರಿ. ಏಕೆಂದರೆ ಅವರು ಪರಿಶುದ್ಧರಾಗಿದ್ದಾರೆ.


ಕರ್ತದೇವರು ಹೇಗೆ ತಮ್ಮ ಕೋಪದ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದರು. ತನ್ನ ಕೋಪದ ದಿನದಲ್ಲಿ, ತನ್ನ ಪಾದಪೀಠವನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ.


“ ‘ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ. ನೀವು ನನಗಾಗಿ ಎಂಥಾ ಆಲಯವನ್ನು ಕಟ್ಟುವಿರಿ? ಎಲ್ಲಿ ನನ್ನ ವಿಶ್ರಾಂತಿಯ ಸ್ಥಳ?


“ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯ ಸ್ಥಳವಾಗಿರುವುದು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ; ಇಲ್ಲಿಯೇ ಸಿಂಹಾಸನಾರೂಢನಾಗಿರುವೆನು.


ನಾನು ನಿಮ್ಮ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಸಭಾ ಮಧ್ಯದಲ್ಲಿ ನಿಮ್ಮನ್ನು ಸ್ತುತಿಸುವೆನು.


“ಇಗೋ, ಕಷ್ಟಪಟ್ಟು ನಾನು ಯೆಹೋವ ದೇವರ ಆಲಯಕ್ಕೋಸ್ಕರ ಮೂರು ಸಾವಿರದ ನಾನೂರ ಎಪ್ಪತ್ತು ಮೆಟ್ರಿಕ್ ಟನ್ ಬಂಗಾರವನ್ನೂ, ಮೂವತ್ತ ನಾಲ್ಕು ಸಾವಿರದ ಐನೂರು ಮೆಟ್ರಿಕ್ ಟನ್ ಬೆಳ್ಳಿಯನ್ನೂ, ಲೆಕ್ಕವಿಲ್ಲದಷ್ಟು ಕಂಚನ್ನೂ, ಕಬ್ಬಿಣವನ್ನೂ ಮರಗಳನ್ನೂ, ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಸೇರಿಸಬಹುದು.


ಮಂಜೂಷವನ್ನು ನೆಲೆಗೊಳಿಸಿದ ತರುವಾಯ ದಾವೀದನು ಯೆಹೋವ ದೇವರ ಮನೆಯಲ್ಲಿ ವಾದ್ಯಗಾರರನ್ನು ನೇಮಿಸಿದನು.


ಇದರ ಹೊರತು ಅರಸನ ಸೇವಕರೂ, ನಮ್ಮ ಯಜಮಾನನೂ, ಅರಸನೂ ಆದ ದಾವೀದನನ್ನು ಆಶೀರ್ವದಿಸಲು ಬಂದು, ‘ದೇವರು ಸೊಲೊಮೋನನ ಹೆಸರನ್ನು ನಿಮ್ಮ ಹೆಸರಿಗಿಂತಲೂ ಪ್ರಸಿದ್ಧ ಮಾಡಲಿ. ಅವನ ಸಿಂಹಾಸನವನ್ನು ನಿಮ್ಮ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಲಿ,’ ಎಂದೂ ಹೇಳುತ್ತಿರುವಾಗ, ಅರಸನು ಮಂಚದ ಮೇಲೆ ಬಾಗಿ,


ಹೀಗೆ ಮಾಡಿದರೆ, ಅವನೂ, ಅವನ ಸಂತತಿಯವರೂ ದೀರ್ಘಕಾಲ ಇಸ್ರಾಯೇಲರ ಮೇಲೆ ರಾಜ್ಯಾಧಿಕಾರ ನಡೆಸುವರು.


ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವವನನ್ನು ನಿಮಗೆ ಅರಸನನ್ನಾಗಿ ನೇಮಿಸಿಕೊಳ್ಳಬೇಕು. ನಿಮ್ಮ ಇಸ್ರಾಯೇಲ್ ಸಹೋದರರಲ್ಲಿಂದ ಒಬ್ಬನನ್ನು ನಿಮ್ಮ ಅರಸನನ್ನಾಗಿ ನೇಮಿಸಿಕೊಳ್ಳಬೇಕು. ನಿಮ್ಮ ಸಹೋದರನಲ್ಲದ ಅನ್ಯದೇಶದವನನ್ನು ನಿಮ್ಮ ಮೇಲೆ ನೇಮಿಸಿಕೊಳ್ಳಬಾರದು.


ಯಾಕೋಬನಿಗೆ, “ನಿನ್ನ ಮಗ ಯೋಸೇಫನು ಬಂದಿದ್ದಾನೆ,” ಎಂದು ತಿಳಿಸಿದಾಗ, ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕುಳಿತುಕೊಂಡನು.


“ನನ್ನ ತಂದೆ ದಾವೀದನು ತನ್ನ ದೇವರಾದ ಯೆಹೋವ ದೇವರ ನಾಮಕ್ಕೆ ಆಲಯವನ್ನು ಕಟ್ಟಿಸಲಾರದೆ ಇದ್ದನೆಂದು ನೀನು ಬಲ್ಲೆ. ಏಕೆಂದರೆ ಯೆಹೋವ ದೇವರು ಅವನ ಶತ್ರುಗಳನ್ನು ಅವನ ಪಾದದ ಕೆಳಗೆ ಹಾಕುವವರೆಗೂ, ಅವನ ಸುತ್ತಲಿರುವ ಸಮಸ್ತ ದಿಕ್ಕುಗಳಲ್ಲಿ ಯುದ್ಧ ಉಂಟಾಯಿತು.


“ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ, ‘ಯೆಹೋವ ದೇವರು ಹೇಳುವುದೇನೆಂದರೆ: ನಾನು ವಾಸವಾಗಿರುವುದಕ್ಕೆ ನೀನು ನನಗೆ ಆಲಯವನ್ನು ಕಟ್ಟಿಸಬೇಡ.


“ಆದಕಾರಣ ನನ್ನ ತಂದೆ ದಾವೀದನು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದಾಗ,


ಲೆಬನೋನಿನ ವೈಭವವು ತುರಾಯಿ, ಅಗಸೆ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವುದಕ್ಕೆ ನಿನ್ನ ಬಳಿಗೆ ಬರುವುವು. ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು.


ತನ್ನ ಮಗ ಸೊಲೊಮೋನನನ್ನು ಕಳುಹಿಸಿ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಆಲಯವನ್ನು ಕಟ್ಟಿಸಲು ಅವನಿಗೆ ಆಜ್ಞಾಪಿಸಿದನು.


ದಾವೀದನು ಸೊಲೊಮೋನನಿಗೆ, “ನನ್ನ ಮಗನೇ, ನಾನು ನನ್ನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಆಲಯವನ್ನು ಕಟ್ಟಿಸಬೇಕೆಂಬುದು ನನ್ನ ಹೃದಯದಲ್ಲಿ ಇತ್ತು.


ಯೆಹೋವ ದೇವರು ನನ್ನ ಕರ್ತ ಆಗಿರುವವರಿಗೆ ಹೇಳಿದ್ದೇನೆಂದರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರಿ.”


ದಾವೀದನು ಯೆಹೋವ ದೇವರಿಗೆ ಆಣೆ ಇಟ್ಟು, ಪರಾಕ್ರಮಿಯಾದ ಯಾಕೋಬನ ದೇವರಿಗೆ ಹೀಗೆಂದು ಪ್ರಮಾಣ ಮಾಡಿದನು:


ಅವರು ನನಗೆ, “ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ನನ್ನ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲರ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಎಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರದಿಂದಲೂ ಅವರ ಅರಸರ ಮರಣದ ಸಮಯದಲ್ಲಿ ಅವರ ಅಂತ್ಯಕ್ರಿಯೆಯ ವಿಧಿಗಳ ಅರ್ಪಣೆಯಿಂದ ಅಪವಿತ್ರಗೊಳಿಸುವುದಿಲ್ಲ.


ಐದು ಚಿನ್ನದ ನಾಣ್ಯಗಳನ್ನು ಹೊಂದಿದವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ಚಿನ್ನದ ನಾಣ್ಯಗಳನ್ನು ಸಂಪಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು