1 ಪೂರ್ವಕಾಲ ವೃತ್ತಾಂತ 28:4 - ಕನ್ನಡ ಸಮಕಾಲಿಕ ಅನುವಾದ4 “ಆದರೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಎಂದೆಂದಿಗೂ ಇಸ್ರಾಯೇಲಿನ ಮೇಲೆ ಅರಸನಾಗಿರಲು ನನ್ನ ತಂದೆಯ ಮನೆಯ ಸಮಸ್ತರೊಳಗಿಂದ ನನ್ನನ್ನು ಆರಿಸಿಕೊಂಡರು. ಏಕೆಂದರೆ ಅವನು ನಾಯಕನಾಗಿರಲು ಯೆಹೂದ ಗೋತ್ರವನ್ನೂ, ಯೆಹೂದ ಗೋತ್ರದಿಂದ ನನ್ನ ಕುಟುಂಬವನ್ನೂ ಆದುಕೊಂಡು, ನನ್ನ ತಂದೆಯ ಪುತ್ರರಲ್ಲಿ ನನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಮಾಡಲು ಚಿತ್ತವುಳ್ಳವರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇಸ್ರಾಯೇಲರ ದೇವರಾದ ಯೆಹೋವನು ತನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಾಯೇಲರ ಅರಸನಾಗುವುದಕ್ಕೆ ಆರಿಸಿಕೊಂಡನು. ಆತನು ಯೆಹೂದ ಕುಲವು ರಾಜಕುಲವಾಗಬೇಕೆಂದು ನೇಮಿಸಿ, ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡನು. ನನ್ನ ತಂದೆಯ ಎಲ್ಲಾ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ಇಸ್ರಯೇಲ್ ದೇವರಾದ ಸರ್ವೇಶ್ವರ ನನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಯೇಲರ ಅರಸನಾಗಿರುವುದಕ್ಕೆ ಆರಿಸಿಕೊಂಡರು; ಯೆಹೂದಕುಲ ರಾಜಕುಲವಾಗಬೇಕೆಂದು ನೇಮಿಸಿ ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡರು. ನನ್ನ ತಂದೆಯ ಎಲ್ಲ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ, ಇಸ್ರಯೇಲರೆಲ್ಲರ ಅರಸನನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇಸ್ರಾಯೇಲ್ ದೇವರಾದ ಯೆಹೋವನು ನನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಾಯೇಲ್ಯರ ಅರಸನಾಗಿರುವದಕ್ಕೆ ಆರಿಸಿಕೊಂಡನು. ಆತನು ಯೆಹೂದಕುಲವು ರಾಜಕುಲವಾಗಬೇಕೆಂದು ನೇವಿುಸಿ ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡನು. ನನ್ನ ತಂದೆಯ ಎಲ್ಲಾ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ ಇಸ್ರಾಯೇಲ್ಯರೆಲ್ಲರ ಅರಸನನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಇಸ್ರೇಲರ ದೇವರಾದ ಯೆಹೋವನು ಇಸ್ರೇಲರ ಹನ್ನೆರಡು ಕುಲಗಳನ್ನು ಮುನ್ನಡೆಸಲು ಯೆಹೂದ ಕುಲವನ್ನು ಆರಿಸಿಕೊಂಡಿದ್ದಾನೆ. ಆ ಕುಲದಿಂದ ದೇವರು ನನ್ನ ತಂದೆಯ ಕುಟುಂಬವನ್ನು ಆರಿಸಿದ್ದಾನೆ; ಆ ಕುಟುಂಬದಿಂದ ದೇವರು ಇಸ್ರೇಲರ ಅರಸನನ್ನಾಗಿ ನನ್ನನ್ನು ಆರಿಸಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿ |