Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:18 - ಕನ್ನಡ ಸಮಕಾಲಿಕ ಅನುವಾದ

18 ನಮ್ಮ ಪಿತೃಗಳಾದ ಅಬ್ರಹಾಮನ, ಇಸಾಕನ, ಇಸ್ರಾಯೇಲನ ದೇವರಾದ ಯೆಹೋವ ದೇವರೇ, ನಿಮ್ಮ ಜನರ ಹೃದಯದ ಮನೋಭಾವನೆಯಲ್ಲಿ ಭಕ್ತಿಯನ್ನು ನಿರಂತರವಾಗಿ ಕಾಪಾಡಿ, ಅವರ ಹೃದಯವನ್ನು ನಿಮಗೆ ಸಿದ್ಧಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥಾ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿ ಉಳ್ಳವರಾಗಿರುವುದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರ ದೇವರೇ, ಸರ್ವೇಶ್ವರಾ, ನಿಮ್ಮ ಪ್ರಜೆಗಳಲ್ಲಿ ಇಂಥ ಮನೋಭಾವ ಸದಾ ಇರುವಂತೆ ಮಾಡಿರಿ; ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ಇರಲು ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿರುವದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋವನೇ, ನಮ್ಮ ಪೂರ್ವಿಕರಾದ ಅಬ್ರಹಾಮ, ಇಸಾಕ ಮತ್ತು ಯಾಕೋಬರ ದೇವರು ನೀನೇ. ನಿನ್ನ ಜನರು ಸರಿಯಾಗಿ ಯೋಜನೆ ಹಾಕುವಂತೆ ಸಹಾಯಿಸು. ನಿನ್ನನ್ನು ನಿಷ್ಠೆಯಿಂದಲೂ ಸತ್ಯದಿಂದಲೂ ಸೇವೆಮಾಡುವಂತೆ ಸಹಾಯಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:18
23 ತಿಳಿವುಗಳ ಹೋಲಿಕೆ  

ಅವರಿಗೂ, ಅವರ ತರುವಾಯ ಅವರ ಮಕ್ಕಳಿಗೂ ಹಿತವಾಗುವ ಹಾಗೆಯೂ; ಅವರು ಯಾವಾಗಲೂ ನನಗೆ ಭಯಪಡುವ ಹಾಗೆಯೂ ಅವರಿಗೆ ಒಂದೇ ಹೃದಯವನ್ನೂ, ಒಂದೇ ಮಾರ್ಗವನ್ನೂ ಕೊಡುವೆನು.


ಓ ಯೆಹೋವ ದೇವರೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ, ತನ್ನ ಹೆಜ್ಜೆ ನೆಟ್ಟಗೆ ಮಾಡುವುದು ನಡೆಯುವ ಮನುಷ್ಯನದ್ದಲ್ಲವೆಂದೂ ಬಲ್ಲೆನು.


ನೀವು ದೇವರ ಚಿತ್ತಾನುಸಾರವಾಗಿ ಎಲ್ಲವನ್ನೂ ಮಾಡುವಂತೆ ನಿಮ್ಮನ್ನು ಸನ್ನದ್ಧರಾಗಿ ಮಾಡಲಿ. ಕ್ರಿಸ್ತ ಯೇಸುವಿನ ಶಕ್ತಿಯ ಮೂಲಕವಾಗಿ ಪ್ರತಿಯೊಂದು ಸತ್ಕಾರ್ಯಗಳನ್ನು ತಮಗೆ ಮೆಚ್ಚಿಕೆಯಾಗುವಂತೆ ನಿಮ್ಮ ಮೂಲಕವಾಗಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಯೇಸುವಿಗೆ ಮಹಿಮೆ ಉಂಟಾಗಲಿ. ಆಮೆನ್.


ನಮ್ಮ ತಂದೆಯಾದ ದೇವರೂ ನಮಗೆ ಕರ್ತ ಆಗಿರುವ ಯೇಸುವೂ ನಾವು ನಿಮ್ಮಲ್ಲಿಗೆ ಬರುವಂತೆ ಮಾರ್ಗವನ್ನು ಸುಗಮಗೊಳಿಸಲಿ.


ಎರಡು ಮನಸ್ಸುಳ್ಳವರನ್ನು ನಾನು ದ್ವೇಷಿಸುತ್ತೇನೆ, ಆದರೂ ನಿಮ್ಮ ನಿಯಮವನ್ನು ನಾನು ಪ್ರೀತಿಸುತ್ತೇನೆ.


ಓ ದೇವರೇ, ಶುದ್ಧ ಹೃದಯವನ್ನು ನನ್ನಲ್ಲಿ ಸೃಷ್ಟಿಮಾಡಿರಿ, ಸ್ಥಿರವಾದ ಆತ್ಮವನ್ನು ನನ್ನಲ್ಲಿ ನವೀಕರಿಸಿರಿ.


ಯೆಹೋವ ದೇವರೇ, ನೀವು ಬಾಧೆಪಡುವವರ ಬಯಕೆಯನ್ನು ಆಲಿಸುತ್ತೀರಿ; ಅವರನ್ನು ಪ್ರೋತ್ಸಾಹಿಸಿ, ಅವರ ಕೂಗನ್ನು ಲಾಲಿಸುತ್ತೀರಿ.


ಒಳ್ಳೆಯ ಕೆಲಸಗಳನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಕ್ರಿಸ್ತ ಯೇಸುವಿನ ಪುನರಾಗಮನ ದಿನದವರೆಗೆ ಪೂರೈಸುವರು ಎಂಬುದೇ ನನ್ನ ದೃಢ ವಿಶ್ವಾಸವಾಗಿದೆ.


‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಆಗಿದ್ದೇನೆ,’ ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ,” ಎಂದು ಹೇಳಿದರು.


ಯೆಹೋವ ದೇವರೇ, ನಾನು ನಿಮ್ಮ ರಕ್ಷಣೆಗಾಗಿ ಕಾದುಕೊಂಡಿದ್ದೇನೆ; ನಾನು ನಿಮ್ಮ ಆಜ್ಞೆಗಳನ್ನು ಹಿಂಬಾಲಿಸುತ್ತಿದ್ದೇನೆ.


“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.


ಆಗ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ, ನೀವು ಬದುಕಿ ಬಾಳುವಂತೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಹೃದಯವನ್ನೂ, ನಿಮ್ಮ ಸಂತತಿಯ ಹೃದಯವನ್ನೂ ಪರಿಚ್ಛೇದಿಸುವರು.


ಆಗ ಯೆಹೋವ ದೇವರು ಅವನಿಗೆ, “ಇದರಿಂದ ಆ ಜನರು ತಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗೂ ಯಾಕೋಬರ ದೇವರಾಗಿರುವ ಯೆಹೋವ ದೇವರು ನಿನಗೆ ಪ್ರಕಟವಾಗಿದ್ದು ನಿಜ ಎಂಬುದನ್ನು ನಂಬುವರು,” ಎಂದರು.


ಮತ್ತೆ ದೇವರು ಮೋಶೆಗೆ, “ ‘ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಇಸ್ರಾಯೇಲರಿಗೆ ಹೇಳಬೇಕು, “ಇದೇ ಯುಗಯುಗಕ್ಕೆ ನನ್ನ ಹೆಸರೂ, ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ಹೆಸರು.


ಇದಲ್ಲದೆ ಮೋಶೆಗೆ, “ನಾನು ನಿನ್ನ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿದ್ದೇನೆ,” ಎಂದು ಹೇಳಿದರು. ಮೋಶೆಯು ದೇವರ ಕಡೆ ದೃಷ್ಟಿ ಇಡುವುದಕ್ಕೆ ಭಯಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.


ಅಬ್ರಹಾಮನ, ಇಸಾಕನ, ಯಾಕೋಬನ ದೇವರು, ನಮ್ಮ ಪಿತೃಗಳ ದೇವರು, ತಮ್ಮ ಸೇವಕರಾದ ಯೇಸುವನ್ನು ಮಹಿಮೆಪಡಿಸಿದ್ದಾರೆ. ಅವರನ್ನು ಬಿಡಿಸಬೇಕೆಂದು ಪಿಲಾತನು ನಿರ್ಣಯಿಸಿಕೊಂಡಿದ್ದರೂ ನೀವು ಯೇಸುವನ್ನು ಕೊಲ್ಲುವುದಕ್ಕೆ ಒಪ್ಪಿಸಿಕೊಟ್ಟು ಪಿಲಾತನ ಮುಂದೆ ಅವರನ್ನು ನಿರಾಕರಿಸಿದಿರಿ.


ಮನುಷ್ಯನ ದುಷ್ಟತನವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳೆಲ್ಲವೂ ಯಾವಾಗಲೂ ಬರೀ ಕೆಟ್ಟದ್ದೆಂದೂ ಯೆಹೋವ ದೇವರು ಕಂಡರು.


ನನ್ನ ದೇವರೇ, ನೀವು ಹೃದಯವನ್ನು ಪರಿಶೋಧಿಸಿ ಯಥಾರ್ಥತೆಯಲ್ಲಿ ಸಂತೋಷವಾಗಿದ್ದೀರಿ, ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಇಷ್ಟಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿರುವ ನಿಮ್ಮ ಜನರು ನಿಮಗೆ ಇಷ್ಟಪೂರ್ವಕವಾಗಿ ಅರ್ಪಿಸುವುದನ್ನು ಈಗ ಕಂಡು ಸಂತೋಷಿಸಿದೆನು.


ಇದಲ್ಲದೆ ನಿಮ್ಮ ಆಜ್ಞೆಗಳನ್ನೂ, ನಿಮ್ಮ ಸಾಕ್ಷಿಗಳನ್ನೂ, ನಿಮ್ಮ ಕಟ್ಟಳೆಗಳನ್ನೂ ಕೈಗೊಳ್ಳಲೂ, ಸಮಸ್ತವನ್ನು ಮಾಡಲೂ ನಾನು ಯಾವುದಕ್ಕೋಸ್ಕರ ಸಿದ್ಧ ಮಾಡಿದೆನೋ, ಆ ಮಹಾ ಕಟ್ಟಡವನ್ನು ಕಟ್ಟಿಸಲೂ, ನನ್ನ ಮಗನಾದ ಸೊಲೊಮೋನನಿಗೆ ಪೂರ್ಣ ಹೃದಯವನ್ನು ಕೊಡಿರಿ,” ಎಂದನು.


ಅವರು ನನಗೆ ಭಯಪಟ್ಟು, ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಗೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು. ಆಗ ಅವರಿಗೂ, ಅವರ ಮಕ್ಕಳಿಗೂ ಎಂದೆಂದಿಗೂ ಒಳ್ಳೆಯದಾಗುವುದು.”


ಅದೇ ಪ್ರಕಾರ ಓಟಗಾರರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತೆಗೆದುಕೊಂಡು, ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಮತ್ತು ಯೆಹೂದ ದೇಶಗಳಿಗೆ ಹೋಗಿ, “ಇಸ್ರಾಯೇಲರೇ, ಅಬ್ರಹಾಮನ, ಇಸಾಕನ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿರಿ. ಆಗ ಅವರು ಅಸ್ಸೀರಿಯದ ಅರಸರ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಕಡೆಗೆ ತಿರುಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು