Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 29:19 - ಕನ್ನಡ ಸಮಕಾಲಿಕ ಅನುವಾದ

19 ಇದಲ್ಲದೆ ನಿಮ್ಮ ಆಜ್ಞೆಗಳನ್ನೂ, ನಿಮ್ಮ ಸಾಕ್ಷಿಗಳನ್ನೂ, ನಿಮ್ಮ ಕಟ್ಟಳೆಗಳನ್ನೂ ಕೈಗೊಳ್ಳಲೂ, ಸಮಸ್ತವನ್ನು ಮಾಡಲೂ ನಾನು ಯಾವುದಕ್ಕೋಸ್ಕರ ಸಿದ್ಧ ಮಾಡಿದೆನೋ, ಆ ಮಹಾ ಕಟ್ಟಡವನ್ನು ಕಟ್ಟಿಸಲೂ, ನನ್ನ ಮಗನಾದ ಸೊಲೊಮೋನನಿಗೆ ಪೂರ್ಣ ಹೃದಯವನ್ನು ಕೊಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನ್ನ ಮಗನಾದ ಸೊಲೊಮೋನನು ನಿನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುತ್ತಿರುವಂತೆಯೂ, ನಾನು ಯಾವ ಮಂದಿರಕ್ಕೋಸ್ಕರ ಇಷ್ಟನ್ನೆಲ್ಲಾ ಸಿದ್ಧಪಡಿಸಿರುತ್ತೇನೋ ಆ ನಿನ್ನ ಮಂದಿರವನ್ನು ಅವನು ಯಥಾರ್ಥಮನಸ್ಸಿನಿಂದ ಕಟ್ಟಿಸಿ ತೀರಿಸುವಂತೆಯೂ ದಯಪಾಲಿಸು” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನನ್ನ ಮಗ ಸೊಲೊಮೋನನು ನಿಮ್ಮ ಆಜ್ಞಾವಿಧಿನಿಯಮಗಳನ್ನು ಅನುಸರಿಸುವಂತೆ ಮಾಡಿರಿ; ನಾನು ಯಾವ ಮಂದಿರ ನಿರ್ಮಾಣಕ್ಕಾಗಿ ಇದನ್ನೆಲ್ಲಾ ಸಂಗ್ರಹಿಸಿದ್ದೇನೋ ಆ ನಿಮ್ಮ ಮಂದಿರವನ್ನು ಇವನು ನಿಷ್ಠೆಯಿಂದ ಕಟ್ಟಿಸಿ ಮುಗಿಸುವಂತೆ ಅನುಗ್ರಹಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನ ಮಗನಾದ ಸೊಲೊಮೋನನು ನಿನ್ನ ಆಜ್ಞಾನಿಯಮವಿಧಿಗಳನ್ನು ಕೈಕೊಳ್ಳುತ್ತಿರುವಂತೆಯೂ ನಾನು ಯಾವ ಮಂದಿರಕ್ಕೋಸ್ಕರ ಇಷ್ಟನ್ನೆಲ್ಲಾ ಸಿದ್ಧಪಡಿಸಿರುತ್ತೇನೋ ಆ ನಿನ್ನ ಮಂದಿರವನ್ನು ಅವನು ಯಥಾರ್ಥಮನಸ್ಸಿನಿಂದ ಕಟ್ಟಿಸಿ ತೀರಿಸುವಂತೆಯೂ ದಯಪಾಲಿಸು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನನ್ನ ಮಗನಾದ ಸೊಲೊಮೋನನೂ ನಿನಗೆ ನಂಬಿಗಸ್ತನಾಗಿರುವಂತೆ ಸಹಾಯಮಾಡು. ನಿನ್ನ ಆಜ್ಞೆ, ಕಟ್ಟಳೆ ಮತ್ತು ನಿಯಮಗಳನ್ನು ಅನುಸರಿಸಲು ಸಹಾಯಮಾಡು. ನಿನ್ನ ಮಂದಿರಕ್ಕಾಗಿ ನಾನು ಇಷ್ಟೆಲ್ಲವನ್ನು ಸಿದ್ಧಮಾಡಿರುವೆನಲ್ಲಾ, ಅವನು ಅದನ್ನು ಕಟ್ಟಿ ಪೂರ್ಣಗೊಳಿಸಲು ಸಹಾಯಮಾಡು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 29:19
12 ತಿಳಿವುಗಳ ಹೋಲಿಕೆ  

ದೇವರೇ, ನಿಮ್ಮ ನ್ಯಾಯವನ್ನು ಅರಸನಿಗೆ ಕಲಿಸಿಕೊಡಿರಿ. ನಿಮ್ಮ ನೀತಿಯನ್ನು ರಾಜಕುಮಾರನಿಗೆ ಕಲಿಸಿಕೊಡಿರಿ.


“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.


ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.


“ಇಗೋ, ಕಷ್ಟಪಟ್ಟು ನಾನು ಯೆಹೋವ ದೇವರ ಆಲಯಕ್ಕೋಸ್ಕರ ಮೂರು ಸಾವಿರದ ನಾನೂರ ಎಪ್ಪತ್ತು ಮೆಟ್ರಿಕ್ ಟನ್ ಬಂಗಾರವನ್ನೂ, ಮೂವತ್ತ ನಾಲ್ಕು ಸಾವಿರದ ಐನೂರು ಮೆಟ್ರಿಕ್ ಟನ್ ಬೆಳ್ಳಿಯನ್ನೂ, ಲೆಕ್ಕವಿಲ್ಲದಷ್ಟು ಕಂಚನ್ನೂ, ಕಬ್ಬಿಣವನ್ನೂ ಮರಗಳನ್ನೂ, ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಸೇರಿಸಬಹುದು.


ನಿಷ್ಕಳಂಕ ಹೃದಯದಿಂದ ನಾನು ನಿಮ್ಮ ತೀರ್ಪುಗಳನ್ನು ಪಾಲಿಸುವೆನು, ಅದರಿಂದ ನಾನು ನಾಚಿಕೆಗೆ ಗುರಿಯಾಗದಿರುವೆನು.


ನಮ್ಮ ಪಿತೃಗಳಾದ ಅಬ್ರಹಾಮನ, ಇಸಾಕನ, ಇಸ್ರಾಯೇಲನ ದೇವರಾದ ಯೆಹೋವ ದೇವರೇ, ನಿಮ್ಮ ಜನರ ಹೃದಯದ ಮನೋಭಾವನೆಯಲ್ಲಿ ಭಕ್ತಿಯನ್ನು ನಿರಂತರವಾಗಿ ಕಾಪಾಡಿ, ಅವರ ಹೃದಯವನ್ನು ನಿಮಗೆ ಸಿದ್ಧಮಾಡಿ.


“ಯೆಹೋವ ದೇವರೇ, ನಾನು ಸತ್ಯದಿಂದಲೂ, ಪೂರ್ಣಹೃದಯದಿಂದಲೂ ನಿಮ್ಮ ಮುಂದೆ ನಡೆದು, ನಿಮ್ಮ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ,” ಎಂದು ಬೇಡಿಕೊಂಡನು. ಹೀಗೆ ಹಿಜ್ಕೀಯನು ವ್ಯಥೆಪಟ್ಟು ಅತ್ತನು.


“ಯೆಹೋವ ದೇವರು ಮತ್ತೆ ಹೀಗೆ ಹೇಳಿದ್ದು, “ ‘ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ. ಅವನ ನಿವಾಸಗಳನ್ನು ಕರುಣಿಸುತ್ತೇನೆ. ಪಟ್ಟಣವು ಅದರ ದಿನ್ನೆಯ ಮೇಲೆ ಕಟ್ಟಲಾಗುವುದು. ಅರಮನೆಯು ತಕ್ಕ ಸ್ಥಳದಲ್ಲಿ ನೆಲೆಯಾಗಿರುವುದು.


ಇದಲ್ಲದೆ ದೇವರು ನಿಮಗೆ ಬರೆದುಕೊಟ್ಟ ಕಟ್ಟಳೆಗಳನ್ನೂ, ನೀತಿಗಳನ್ನೂ, ನಿಯಮವನ್ನೂ, ಆಜ್ಞೆಯನ್ನೂ ನೀವು ನಿರಂತರವಾಗಿ ಕೈಗೊಳ್ಳಲು ಎಚ್ಚರಿಕೆಯಾಗಿರಬೇಕು. ಇತರ ದೇವರುಗಳಿಗೆ ಭಯಪಡಬೇಡಿರಿ.


ನೀವು ವಾಸಮಾಡುವ ಪರಲೋಕದಿಂದ ಕೇಳಿ ಮನ್ನಿಸಿ, ಮನುಷ್ಯನ ಹೃದಯವನ್ನು ತಿಳಿದಿರುವ ನೀವು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರ ಪ್ರತಿಫಲಕೊಡಿರಿ. ಏಕೆಂದರೆ ನೀವೊಬ್ಬರೇ ಸಮಸ್ತ ಜನರ ಹೃದಯಗಳನ್ನು ತಿಳಿದವರಾಗಿದ್ದೀರಿ.


ಅರಸನು ನಿಮ್ಮ ಜನರಿಗೆ ನೀತಿಯಿಂದಲೂ ನಿಮ್ಮ ಬಾಧೆಪಟ್ಟ ಪ್ರಜೆಗೆ ನ್ಯಾಯದಿಂದಲೂ ತೀರ್ಪುಮಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು