1 ಪೂರ್ವಕಾಲ ವೃತ್ತಾಂತ 29:21 - ಕನ್ನಡ ಸಮಕಾಲಿಕ ಅನುವಾದ21 ಮಾರನೆಯ ದಿವಸದಲ್ಲಿ ಅವರು ಯೆಹೋವ ದೇವರಿಗೆ ಬಲಿಗಳನ್ನು ವಧಿಸಿ, ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ, ಸಾವಿರ ಟಗರುಗಳನ್ನೂ, ಸಾವಿರ ಕುರಿಮರಿಗಳನ್ನೂ, ಅವುಗಳ ಪಾನದ ಅರ್ಪಣೆಗಳನ್ನೂ, ಸಮಸ್ತ ಇಸ್ರಾಯೇಲರಿಗೋಸ್ಕರ ಬಹಳವಾಗಿ ಬಲಿಗಳನ್ನು ಅರ್ಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಮರುದಿನ ಅವರು ಯೆಹೋವನಿಗೆ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು. ಅವರು ಆ ದಿನದ ಯಜ್ಞಕ್ಕಾಗಿ ಸಾವಿರ ಹೋರಿಗಳನ್ನೂ, ಸಾವಿರ ಟಗರುಗಳನ್ನೂ, ಸಾವಿರ ಕುರಿಮರಿಗಳನ್ನೂ ವಧಿಸಿದರು. ಇವುಗಳೊಡನೆ ಅರ್ಪಿಸತಕ್ಕ ಪಾನದ್ರವ್ಯಗಳನ್ನೂ ಇಸ್ರಾಯೇಲರೆಲ್ಲರಿಗೆ ಸಾಕಾಗುವಷ್ಟು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ, ಯೆಹೋವನ ಸನ್ನಿಧಿಯಲ್ಲಿ ಮಹಾ ಸಂತೋಷದಿಂದ ಅನ್ನಪಾನಗಳನ್ನು ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಮರುದಿನ ಅವರು ಸರ್ವೇಶ್ವರನಿಗೆ ಬಲಿಗಳನ್ನೂ ದಹನಬಲಿಗಳನ್ನೂ ಸಮರ್ಪಿಸಿದರು. ಆ ದಿನ ಬಲಿದಾನಕ್ಕಾಗಿ ಸಾವಿರ ಹೋರಿಗಳನ್ನೂ ಸಾವಿರ ಟಗರುಗಳನ್ನೂ ಸಾವಿರ ಕುರಿಗಳನ್ನೂ ವಧಿಸಿದರು. ಇವುಗಳೊಡನೆ ಅರ್ಪಿಸತಕ್ಕ ಪಾನದ್ರವ್ಯಗಳನ್ನೂ ಇಸ್ರಯೇಲರೆಲ್ಲರಿಗೆ ಸಾಕಾಗುವಷ್ಟು ಸಮಾಧಾನ ಬಲಿಗಳನ್ನೂ ಸಮರ್ಪಿಸಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಮರುದಿನ ಅವರು ಯೆಹೋವನಿಗೆ ಯಜ್ಞಗಳನ್ನೂ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು. ಅವರು ಆ ದಿವಸ ಯಜ್ಞಕ್ಕಾಗಿ ಸಾವಿರ ಹೋರಿಗಳನ್ನೂ ಸಾವಿರ ಟಗರುಗಳನ್ನೂ ಸಾವಿರ ಕುರಿಮರಿಗಳನ್ನೂ ವಧಿಸಿದರು. ಇವುಗಳೊಡನೆ ಅರ್ಪಿಸತಕ್ಕ ಪಾನದ್ರವ್ಯಗಳನ್ನೂ ಇಸ್ರಾಯೇಲ್ಯರೆಲ್ಲರಿಗೆ ಸಾಕಾಗುವಷ್ಟು ಸಮಾಧಾನಯಜ್ಞಗಳನ್ನೂ ಸಮರ್ಪಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಮರುದಿವಸ ಜನರು ಯೆಹೋವನಿಗೆ ಯಜ್ಞಗಳನ್ನೂ ಸರ್ವಾಂಗಹೋಮಗಳನ್ನೂ ಅರ್ಪಿಸಿದರು. ಒಂದು ಸಾವಿರ ಹೋರಿಗಳು, ಒಂದುಸಾವಿರ ಟಗರುಗಳು, ಒಂದುಸಾವಿರ ಆಡುಗಳು ಮತ್ತು ಪಾನದ್ರವ್ಯಗಳನ್ನು ಅರ್ಪಿಸಿದರು. ಇಡೀ ಇಸ್ರೇಲ್ ಜನಾಂಗಕ್ಕಾಗಿ ಯಜ್ಞವನ್ನರ್ಪಿಸಿದರು. ಅಧ್ಯಾಯವನ್ನು ನೋಡಿ |