1 ಪೂರ್ವಕಾಲ ವೃತ್ತಾಂತ 29:30 - ಕನ್ನಡ ಸಮಕಾಲಿಕ ಅನುವಾದ30 ದರ್ಶಿಯಾದ ಸಮುಯೇಲನ ಪುಸ್ತಕದಲ್ಲಿ, ಪ್ರವಾದಿಯಾದ ನಾತಾನನ ಪುಸ್ತಕದಲ್ಲಿ ಮತ್ತು ದರ್ಶಿಯಾದ ಗಾದನ ಪುಸ್ತಕದಲ್ಲಿಯೂ ಲಿಖಿತವಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ದೇವದರ್ಶಿಯಾದ ಸಮುವೇಲ, ಪ್ರವಾದಿಯಾದ ನಾತಾನ, ದೇವದರ್ಶಿಯಾದ ಗಾದ ಇವರ ಚರಿತ್ರೆಗಳಲ್ಲಿಯೂ ಬರೆದಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ದರ್ಶಿ ಸಮುವೇಲ, ಪ್ರವಾದಿ ನಾತಾನ ಹಾಗೂ ದರ್ಶಿ ಗಾದ, ಇವರ ಚರಿತ್ರೆಗಳಲ್ಲಿ ಲಿಖಿತವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ದರ್ಶಿಯಾದ ಸಮುವೇಲ, ಪ್ರವಾದಿಯಾದ ನಾತಾನ, ದರ್ಶಿಯಾದ ಗಾದ ಇವರ ಚರಿತ್ರೆಗಳಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಇಸ್ರೇಲಿನ ರಾಜನಾಗಿದ್ದಾಗ ದಾವೀದನು ಮಾಡಿದ ಎಲ್ಲಾ ಸಾಹಸಕಾರ್ಯಗಳನ್ನೂ ಅವನ ಪರಾಕ್ರಮ ಮತ್ತು ಅವನಿಗೆ ಸಂಭವಿಸಿದೆಲ್ಲದ್ದರ ಕುರಿತಾಗಿ ಅವುಗಳಲ್ಲಿ ಬರೆಯಲಾಗಿದೆ. ಇಸ್ರೇಲಿನ ಮತ್ತು ಅದರ ಸಮೀಪದಲ್ಲಿ ಅನ್ಯಜನಾಂಗಗಳ ಕುರಿತಾದ ಸಂಗತಿಗಳನ್ನು ಅವುಗಳಲ್ಲಿ ಬರೆಯಲಾಗಿದೆ. ಅಧ್ಯಾಯವನ್ನು ನೋಡಿ |
“ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದುಬಂದು, ‘ಮರವನ್ನು ಕಡಿದು ನಾಶಮಾಡಿರಿ. ಆದರೆ ಅದರ ಬೇರಿನ ಮೋಟನ್ನು ನೆಲದಲ್ಲಿ ಉಳಿಸಿ, ಮೋಟನ್ನು ಕಬ್ಬಿಣ ಮತ್ತು ಕಂಚುಗಳಿಂದ ಕಟ್ಟಿ, ಬಯಲಿನ ಎಳೆಯ ಹುಲ್ಲಿನಲ್ಲಿಯೂ, ಬೇರುಗಳನ್ನು ಭೂಮಿಯಲ್ಲಿಯೂ ಬಿಡಿರಿ. ಅವನು ಆಕಾಶದ ಮಂಜಿನಿಂದ ತೇವವಾಗಲಿ. ಏಳು ಕಾಲಗಳು ಕಳೆಯುವ ತನಕ ಅವನು ಕಾಡುಮೃಗಗಳ ಹಾಗೆ ಜೀವಿಸಲಿ, ಎಂದು ಸಾರುವುದನ್ನು ಅರಸನಾದ ನೀನು ನೋಡಿದೆಯಲ್ಲಾ.’