Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 4:4 - ಕನ್ನಡ ಸಮಕಾಲಿಕ ಅನುವಾದ

4 ಪೆನೂಯೇಲ್, ಗೆದೋರ್ ವಂಶದವರಿಗೆ ಮೂಲಪುರುಷನಾಗಿದ್ದನು. ಏಜೆರ್ ಹೂಷಾಹರ ಮೂಲಪುರುಷನಾಗಿದ್ದನು. ಇವರು ಎಫ್ರಾತಾಹ ಎಂಬಾಕೆಯ ಚೊಚ್ಚಲಮಗನಾದ ಹೂರನ ಮಕ್ಕಳು; ಈ ಹೂರನೇ ಬೇತ್ಲೆಹೇಮ್ ವಂಶದವರಿಗೆ ಮೂಲಪುರುಷನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಗೆದೋರಿನ ಮೂಲಪುರುಷನು ಪೆನೂವೇಲನು. ಹೂಷಾಹ್ಯರ ಮೂಲಪುರುಷನು ಏಜೆರ್. ಇವರು ಎಫ್ರಾತಾಹಳ ಚೊಚ್ಚಲ ಮಗನಾದ ಹೂರನ ಮಕ್ಕಳು. ಈ ಹೂರನೇ ಬೇತ್ಲೆಹೇಮ್ಯರ ಮೂಲಪುರುಷನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಗೆದೋರಿನ ಮೂಲಪುರುಷನಾದ ಪೆನೂವೇಲ್, ಹೂಷಾಹ್ಯರ ಮೂಲಪುರುಷನಾದ ಏಜೆರ್ ಇವರೂ ಎಫ್ರಾತಾಹಳ ಚೊಚ್ಚಲ ಮಗನಾದ ಹೂರನ ಮಕ್ಕಳು; ಈ ಹೂರನೇ ಬೇತ್ಲೆಹೇಮ್ಯರ ಮೂಲಪುರುಷನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪೆನೂವೇಲನು ಗೆದೋರನ ತಂದೆ: ಏಜೆರನು ಹೂಷಾಹ್ಯನ ತಂದೆ. ಇವರು ಹೂರನ ಗಂಡುಮಕ್ಕಳು. ಹೂರನು ಎಫ್ರಾತಾಹಳ ಮೊದಲನೆಯ ಮಗನು. ಇವನೇ ಬೆತ್ಲೇಹೇಮ್ಯರ ಮೂಲಪಿತೃ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 4:4
10 ತಿಳಿವುಗಳ ಹೋಲಿಕೆ  

ಇವರು ಮೆರೆದನು ಮದುವೆಯಾದ ಫರೋಹನ ಮಗಳು ಬಿತ್ಯಳ ಮಕ್ಕಳು. ಇದಲ್ಲದೆ ಯೆಹೂದ್ಯಳಾದ ಅವನ ಇನ್ನೊಬ್ಬ ಹೆಂಡತಿ, ಗೆದೋರ್ಯನ ತಂದೆ ಯೆರೆದನನ್ನೂ, ಸೋಕೋವಿನ ತಂದೆ ಹೆಬೆರನನ್ನೂ, ಜಾನೋಹನ ತಂದೆ ಯೆಕೂತೀಯೇಲನನ್ನೂ ಹೆತ್ತಳು.


ಇನ್ನುಳಿದ ಕಾಲೇಬನ ವಂಶಜರು: ಕಾಲೇಬನಿಗೆ ಅವನ ಹೆಂಡತಿ ಎಫ್ರಾತಳಿಂದ ಜನಿಸಿದ ಚೊಚ್ಚಲ ಮಗನ ಹೆಸರು ಹೂರ್. ಹೂರನ ಮಗ ಶೋಬಾಲ್ ಕಿರ್ಯತ್ ಯಾರೀಮ್ ಪಟ್ಟಣವನ್ನೂ,


ತಮ್ಮ ಮಂದೆಗಳಿಗೆ ಮೇವನ್ನು ಹುಡುಕಲು ತಗ್ಗಿನ ಪೂರ್ವದಿಕ್ಕಿನಲ್ಲಿರುವ ಗೆದೋರು ಎಂಬ ಸ್ಥಳದ ಪ್ರವೇಶದವರೆಗೂ ಹೋದರು.


ಅಜೂಬಳ ಮರಣದ ನಂತರ, ಕಾಲೇಬನು ಎಫ್ರಾತಳನ್ನು ಮದುವೆಯಾದನು. ಅವಳು ಅವನಿಗೆ ಹೂರನನ್ನು ಹೆತ್ತಳು.


ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.


ಆಗ ಊರುಬಾಗಿಲಲ್ಲಿ ಕೂಡಿದ್ದ ಸಮಸ್ತ ಜನರೂ ಹಿರಿಯರೂ, “ನಾವು ಸಾಕ್ಷಿಗಳೇ, ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಯೆಹೋವ ದೇವರು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡಲಿ. ಎಫ್ರಾತದಲ್ಲಿ ಧನವಂತನಾಗಿರು, ಬೇತ್ಲೆಹೇಮಿನಲ್ಲಿ ಘನವಂತನಾಗಿರು.


ಏಟಾಮನ ಪುತ್ರರು: ಇಜ್ರೆಯೇಲ್, ಇಷ್ಮ ಮತ್ತು ಇಬ್ಬಾಷ್ ಮತ್ತು ಇವರ ತಂಗಿ ಹಚೆಲೆಲ್‌ಪೋನೀ ಎಂಬವರು.


ತೆಕೋವದ ತಂದೆ ಅಷ್ಹೂರನಿಗೆ ಹೆಲಾಹ, ನಾರ ಎಂಬ ಇಬ್ಬರು ಪತ್ನಿಯರಿದ್ದರು.


ಅವನ ಇನ್ನೊಬ್ಬ ಮಗ ಸಲ್ಮ ಬೇತ್ಲೆಹೇಮನ್ನೂ, ಅವನ ಮೂರನೆಯ ಮಗ ಹಾರೇಫ್, ಬೇತ್ಗಾದೇರ್ ಪಟ್ಟಣವನ್ನೂ ಕಟ್ಟಿಸಿದರು.


ಸಲ್ಮನ ವಂಶಜರು: ಬೇತ್ಲೆಹೇಮ್, ನೆಟೋಫಾ, ಅಟರೋತ್ ಬೇತ್ಯೋವಾಬ್ ಊರುಗಳವರೂ, ಚೊರ್ಗದಲ್ಲಿ ವಾಸಿಸುವ ಮಾನಹತಿಯರಲ್ಲಿ ಅರ್ಧ ಜನರೂ ಉತ್ಪತ್ತಿಯಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು