Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 5:1 - ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲಿನ ಚೊಚ್ಚಲಮಗನಾದ ರೂಬೇನನ ಪುತ್ರರು ಇವರು: ಅವನು ಚೊಚ್ಚಲ ಮಗನಾಗಿದ್ದನು. ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರ ಮಾಡಿದ್ದರಿಂದ ಅವನ ಚೊಚ್ಚಲುತನದ ಹಕ್ಕು ಇಸ್ರಾಯೇಲಿನ ಮಗ ಯೋಸೇಫನ ಪುತ್ರರಿಗೆ ಕೊಡಲಾಗಿತ್ತು. ಆದ್ದರಿಂದ ಈ ವಂಶಾವಳಿಯು ಚೊಚ್ಚಲುತನದ ಪ್ರಕಾರ ಬರೆದಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ವಂಶಾವಳಿ. ರೂಬೇನನು ಚೊಚ್ಚಲ ಮಗನಾಗಿದ್ದರೂ ಅವನು ತನ್ನ ತಂದೆಯ ಉಪಪತ್ನಿಯೊಂದಿಗೆ ಸಂಗಮಿಸಿ ಹಾಸಿಗೆಯನ್ನು ಹೊಲೆ ಮಾಡಿದ್ದರಿಂದ ಅವನ ಹಕ್ಕು ಇಸ್ರಾಯೇಲನ ಮಗನಾದ ಯೋಸೇಫನ ಕುಲಕ್ಕೆ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯಕೋಬನ ಮಕ್ಕಳಲ್ಲಿ ಹಿರಿಯವನಾದ ರೂಬೇನನ ವಂಶಜರು ಇವರು: (ರೂಬೇನ್ ತನ್ನ ತಂದೆಯ ಉಪಪತ್ನಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದರಿಂದ ಚೊಚ್ಚಲು ಮಗನ ಹಕ್ಕುಬಾಧ್ಯತೆಗಳನ್ನು ಕಳೆದುಕೊಂಡನು. ಆ ಹಕ್ಕುಗಳು ಜೋಸೆಫನಿಗೆ ಕೊಡಲ್ಪಟ್ಟವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲನ ಚೊಚ್ಚಲಮಗನಾದ ರೂಬೇನನ ವಂಶಾವಳಿ. ರೂಬೇನನು ಚೊಚ್ಚಲನಾಗಿದ್ದರೂ ಅವನು ತನ್ನ ತಂದೆಯ ಹಾಸಿಗೆಯನ್ನು ಹೊಲೆಮಾಡಿದ್ದರಿಂದ ಅವನ ಹಕ್ಕು ಇಸ್ರಾಯೇಲನ ಮಗನಾದ ಯೋಸೇಫನ ಕುಲಕ್ಕೆ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1-3 ರೂಬೇನನು ಇಸ್ರೇಲನ ಚೊಚ್ಚಲಮಗ. ಅವನು ಚೊಚ್ಚಲಮಗನಿಗೆ ಸಿಗಬೇಕಾಗಿದ್ದ ಹಕ್ಕುಗಳನ್ನು ಪಡೆದುಕೊಳ್ಳಬೇಕಾಗಿತ್ತು. ಆದರೆ ಅವನು ತನ್ನ ತಂದೆಯ ಉಪಪತ್ನಿಯೊಡನೆ ಸಂಭೋಗಿಸಿದ್ದರಿಂದ ಅವನ ಹಕ್ಕುಗಳು ಯೋಸೇಫನ ಮಕ್ಕಳಿಗೆ ದೊರೆತವು. ಆದ್ದರಿಂದ ವಂಶಾವಳಿಯಲ್ಲಿ ಚೊಚ್ಚಲ ಮಗನ ಸ್ಥಾನ ಅವನಿಗೆ ದೊರೆಯಲಿಲ್ಲ. ಯೆಹೂದನು ತನ್ನ ಎಲ್ಲಾ ಸಹೋದರರಿಗಿಂತ ಬಲಾಢ್ಯನಾದನು. ಆದ್ದರಿಂದ ಅವನ ಕುಲದಿಂದಲೇ ನಾಯಕರುಗಳು ಬಂದರು. ಆದರೆ ಚೊಚ್ಚಲ ಮಗನಿಗೆ ಸಿಗಬೇಕಾಗಿದ್ದ ಇತರ ಹಕ್ಕುಗಳು ಯೋಸೇಫನ ಮಕ್ಕಳಿಗೆ ದೊರೆತವು. ರೂಬೇನನ ಮಕ್ಕಳು ಯಾರೆಂದರೆ: ಹನೋಕ್, ಫಲ್ಲೂ, ಹೆಚ್ರೋನ್ ಮತ್ತು ಕರ್ಮೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 5:1
23 ತಿಳಿವುಗಳ ಹೋಲಿಕೆ  

ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ, ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿ ಬಿಲ್ಹಳ ಸಂಗಡ ಮಲಗಿದನು. ಈ ವಿಷಯ ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಪುತ್ರರು ಇದ್ದರು.


ಲೇಯಳು ಗರ್ಭಿಣಿಯಾಗಿ ಮಗನನ್ನು ಹೆತ್ತು, “ನಿಜವಾಗಿ ಯೆಹೋವ ದೇವರು ನನ್ನ ಬಾಧೆಯನ್ನು ನೋಡಿದ್ದಾರೆ. ಆದ್ದರಿಂದ ನನ್ನ ಗಂಡನು ನನ್ನನ್ನು ಪ್ರೀತಿ ಮಾಡುವನು,” ಎಂದು ಹೇಳಿ ಮಗುವಿಗೆ ರೂಬೇನ್ ಎಂದು ಹೆಸರಿಟ್ಟಳು.


ಇದಲ್ಲದೆ ಮೆರಾರೀಯ ಮಕ್ಕಳಲ್ಲಿರುವ ಹೋಸ ಎಂಬವನಿಗೆ ಮಕ್ಕಳಿದ್ದರು. ಮೊದಲನೆಯವನು ಶಿಮ್ರಿಯು; ಅವನು ಚೊಚ್ಚಲ ಮಗನಲ್ಲ; ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು;


ಇಸ್ರಾಯೇಲ್ ಗೋತ್ರಗಳ ಮನೆಯ ಮುಖ್ಯಸ್ಥರು ಇವರೇ: ಇಸ್ರಾಯೇಲನ ಜೇಷ್ಠ ಪುತ್ರನಾದ ರೂಬೇನನ ಪುತ್ರರು: ಹನೋಕ್, ಪಲ್ಲೂ, ಹೆಚ್ರೋನ್, ಕರ್ಮೀ. ಇವರು ರೂಬೇನನ ಗೋತ್ರಗಳ ಮೂಲ ಪುರುಷರು.


ಯೆಹೂದ್ಯರಲ್ಲದವರಲ್ಲಿ ನಡೆಯದೇ ಇರುವಂಥ ಅನೈತಿಕತೆ ನಿಮ್ಮಲ್ಲಿದೆಯೆಂದು ವಾಸ್ತವವಾಗಿ ವರದಿ ಬಂದಿದೆ: ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ.


ಇಸ್ರಾಯೇಲನ ಪುತ್ರರು: ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್,


ಯೆಹೂದದ ಗೋತ್ರದವರು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಬಂದರು. ಆಗ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಅವನಿಗೆ, “ಕಾದೇಶ್ ಬರ್ನೇಯದಲ್ಲಿ ಯೆಹೋವ ದೇವರು ನನ್ನನ್ನೂ, ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ.


ಅವರು, “ಮಲತಾಯಿಯ ಸಂಗಡ ಅನೈತಿಕವಾಗಿ ನಡೆದು ತನ್ನ ತಂದೆಯ ಹಾಸಿಗೆಯನ್ನು ಅವಮಾನಪಡಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಅವನು ಪ್ರೀತಿಮಾಡದವಳ ಮಗನಿಗೆ ತನ್ನ ಬಳಿಯಲ್ಲಿರುವ ಎಲ್ಲವುಗಳಲ್ಲಿ ಎರಡು ಪಾಲುಗಳನ್ನು ಕೊಟ್ಟು, ಅವನೇ ಜೇಷ್ಠ ಪುತ್ರನೆಂದು ಒಪ್ಪಿಕೊಳ್ಳಬೇಕು. ಏಕೆಂದರೆ ಅವನೇ ಅವನ ಪ್ರಥಮ ಫಲ. ಅವನಿಗೆ ಜೇಷ್ಠ ಪುತ್ರನ ಹಕ್ಕು ಉಂಟು.


ಇಸ್ರಾಯೇಲನ ಚೊಚ್ಚಲ ಮಗ ರೂಬೇನನೂ, ರೂಬೇನನ ಮಕ್ಕಳೂ; ಹನೋಕನೂ, ಇವನಿಂದ ಹನೋಕ್ಯರ ಕುಟುಂಬ; ಪಲ್ಲೂವಿನಿಂದ ಪಲ್ಲೂವಿಯರ ಕುಟುಂಬ;


ಆಗ ಲೇವಿಯ ಮಗನಾದ ಕೊಹಾತನ ಮೊಮ್ಮಗ ಇಚ್ಹಾರನ ಮಗ ಕೋರಹನೂ ರೂಬೇನ್ ಗೋತ್ರದವರಾದ ಎಲೀಯಾಬನ ಮಕ್ಕಳಾದ ದಾತಾನನೂ ಅಬೀರಾಮನೂ ಮತ್ತು ಪೆಲೆತನ ಮಗನಾದ ಓನನೂ ಜನರನ್ನು ತೆಗೆದುಕೊಂಡು


“ನಿಮಗೆ ಸಹಾಯ ಮಾಡಬೇಕಾದ ಪುರುಷರ ಹೆಸರುಗಳು: “ರೂಬೇನ್ ಗೋತ್ರದಿಂದ ಶೆದೇಯೂರನ ಮಗ ಎಲೀಚೂರ್,


“ ‘ತನ್ನ ತಂದೆಯ ಹೆಂಡತಿಯೊಡನೆ ಸಂಗಮಿಸುವವನು ತನ್ನ ತಂದೆಗೆ ಮಾನಭಂಗ ಮಾಡಿದಂತೆ. ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಅವರ ರಕ್ತವು ಅವರ ಮೇಲೆ ಇರುವುದು.


“ ‘ನಿನ್ನ ಮಲತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನ್ನ ತಂದೆಗೆ ಅಗೌರವವನ್ನುಂಟು ಮಾಡುವುದು.


ಈಜಿಪ್ಟಿಗೆ ಬಂದ ಇಸ್ರಾಯೇಲರ ಮಕ್ಕಳು ಎಂದರೆ, ಯಾಕೋಬನ ಹಾಗೂ ಅವನ ಸಂತತಿಯರ ಹೆಸರುಗಳು: ಯಾಕೋಬನ ಚೊಚ್ಚಲ ಮಗ ರೂಬೇನನು.


ಯೆಹೋವ ದೇವರು ಆಕೆಗೆ ಹೀಗೆ ಹೇಳಿದರು: “ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ಜನಾಂಗಗಳು ಹೊರಟುಬಂದು ಬೇರೆಯಾಗುವುವು. ಒಂದು ಇನ್ನೊಂದಕ್ಕಿಂತ ಬಲವಾಗಿರುವುದು. ಇದಲ್ಲದೆ ಹಿರಿಯನು ಕಿರಿಯವನಿಗೆ ಸೇವೆಮಾಡುವನು.”


ಕ್ರಿಸ್ತ ಯೇಸು ಅದೃಶ್ಯರಾದ ದೇವರ ಸ್ವರೂಪವೂ ಸರ್ವಸೃಷ್ಟಿಗು ಜ್ಯೇಷ್ಠ ಪುತ್ರರೂ ಆಗಿದ್ದಾರೆ.


ಆಗ ಯಾಕೋಬನು, “ಈ ಹೊತ್ತು ನಿನ್ನ ಜೇಷ್ಠ ಪುತ್ರನ ಹಕ್ಕನ್ನು ನನಗೆ ಮಾರು,” ಎಂದನು.


“ಈಗ ನಾನು ನಿನ್ನ ಬಳಿಗೆ ಈಜಿಪ್ಟಿಗೆ ಬರುವ ಮೊದಲು ಈಜಿಪ್ಟಿನಲ್ಲಿ ನಿನಗೆ ಹುಟ್ಟಿದ ಇಬ್ಬರು ಪುತ್ರರಾದ ಎಫ್ರಾಯೀಮ್ ಮನಸ್ಸೆಯರು ನನ್ನವರಾಗಿರಬೇಕು. ಅವರು ರೂಬೇನ್ ಮತ್ತು ಸಿಮೆಯೋನರಂತೆ ನನ್ನವರಾಗಿರಬೇಕು.


ಅವನ ವೈಭವವು ಚೊಚ್ಚಲ ಹೋರಿಯಂತೆ ಇರುವುದು, ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇರುವುದು. ಇವುಗಳಿಂದ ಜನಾಂಗಗಳನ್ನೆಲ್ಲಾ ಇರಿದು ಒಟ್ಟಿಗೆ ಭೂಮಿಯ ಅಂಚಿನವರೆಗೆ ಓಡಿಸುವನು. ಎಫ್ರಾಯೀಮ್ ಕುಲದ ಹತ್ತು ಸಾವಿರ ಜನರೂ ಇಂಥವರೇ. ಮನಸ್ಸೆ ಕುಲದ ಸಹಸ್ರ ಜನರೂ ಇಂಥವರೇ ಆಗಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು