1 ಪೂರ್ವಕಾಲ ವೃತ್ತಾಂತ 5:22 - ಕನ್ನಡ ಸಮಕಾಲಿಕ ಅನುವಾದ22 ಏಕೆಂದರೆ ಯುದ್ಧವು ದೇವರಿಂದ ಉಂಟಾದ ಕಾರಣ, ಅನೇಕ ಜನರು ಹತರಾದರು. ಇವರು ಸೆರೆಯಾಗಿ ಹೋಗುವ ಕಾಲದವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಏಕೆಂದರೆ ದೇವರು ಅವರ ಪರವಾಗಿ ಯುದ್ಧಮಾಡಿದ್ದರಿಂದ ಅವರು ವೈರಿಗಳಲ್ಲಿ ಅನೇಕರನ್ನು ತಿವಿದು ಕೊಂದದ್ದಲ್ಲದೆ, ತಾವು ಸೆರೆಯಾಗಿ ಹೋಗುವವರೆಗೂ ಅವರ ಊರುಗಳಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಯುದ್ಧವು ದೇವರ ಚಿತ್ತಾನುಸಾರವಾದದ್ದರಿಂದ ಅವರು ಅನೇಕ ವೈರಿಗಳನ್ನು ಸಂಹರಿಸಿದರು ಮತ್ತು ತಾವು ಸೆರೆಯಾಗಿ ಹೋಗುವ ಕಾಲದವರೆಗೆ ಅಲ್ಲಿಯೇ ನೆಲೆಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವರ ಹಿಂಡುಗಳನ್ನು ಅಂದರೆ ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷ ಐವತ್ತು ಸಾವಿರ ಕುರಿಗಳು, ಎರಡು ಸಾವಿರ ಕತ್ತೆಗಳು ಇವುಗಳನ್ನೂ ಲಕ್ಷ ಜನವನ್ನೂ ಕೊಳ್ಳೆಹಿಡಿದು ತಾವು ಸೆರೆಯಾಗಿ ಹೋಗುವವರೆಗೂ ಅವರ ಊರುಗಳಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ದೇವರು ಅವರಿಗೆ ಜಯವನ್ನು ಕೊಟ್ಟಿದ್ದರಿಂದ ಹಗ್ರೀಯರಲ್ಲಿ ಬಹಳ ಮಂದಿಯನ್ನು ಕೊಂದರು. ಆ ಹಗ್ರೀಯರ ಪ್ರದೇಶದಲ್ಲಿ ರೂಬೇನ್, ಗಾದ್, ಮನಸ್ಸೆ ಕುಲಗಳವರು ಸಹ ವಾಸಿಸಿದರು. ಬಾಬಿಲೋನಿನ ಅರಸನು ಇಸ್ರೇಲರನ್ನು ಸೆರೆಹಿಡಿದು ಕೊಂಡೊಯ್ಯುವ ತನಕ ಅವರು ಅಲ್ಲಿಯೇ ವಾಸಮಾಡಿದರು. ಅಧ್ಯಾಯವನ್ನು ನೋಡಿ |
ಆದಕಾರಣ ಇಸ್ರಾಯೇಲಿನ ದೇವರು ಅಸ್ಸೀರಿಯದ ಅರಸನಾದ ಪೂಲನ ಆತ್ಮವನ್ನೂ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ, ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ, ಗಾದ್ಯರನ್ನೂ, ಮನಸ್ಸೆಯ ಅರ್ಧ ಗೋತ್ರದವರನ್ನೂ ಹಲಹ, ಹಾಬೋರ್, ಹಾರ, ಎಂಬ ಪ್ರಾಂತಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ತೆಗೆದುಕೊಂಡು ಹೋದರು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.