Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 5:23 - ಕನ್ನಡ ಸಮಕಾಲಿಕ ಅನುವಾದ

23 ಮನಸ್ಸೆಯ ಅರ್ಧ ಗೋತ್ರದ ಜನರು ದೇಶದಲ್ಲಿ ವಾಸಮಾಡಿ, ಬಾಷಾನ್ ಮೊದಲುಗೊಂಡು ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್ ಬೆಟ್ಟದವರೆಗೂ ಹಬ್ಬಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮನಸ್ಸೆ ಕುಲದ ಅರ್ಧಜನರು ಬಾಷಾನಿನಿಂದ ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್ ಗಿರಿ ಇವುಗಳ ವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತ್ಯಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಪೂರ್ವದಲ್ಲಿದ್ದ ಮನಸ್ಸೆ ಜನಾಂಗದವರು ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್ ಪರ್ವತದವರೆಗಿನ ಬಾಷಾನಿನ ಪ್ರದೇಶದಲ್ಲಿ ನೆಲೆಸಿದರು. ಅವರ ಜನಸಂಖ್ಯೆ ಹೆಚ್ಚು ವೃದ್ಧಿಗೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮನಸ್ಸೆಕುಲದ ಅರ್ಧಜನರು ಬಾಷಾನಿನಿಂದ ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್‍ಗಿರಿ ಇವುಗಳವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತಗಳಲ್ಲಿ ವಾಸಿಸಿದರು; ಅವರು ಅನೇಕಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಮನಸ್ಸೆಯ ಅರ್ಧಕುಲದ ಜನರು ಬಾಷಾನ್ ಪ್ರದೇಶದಿಂದಿಡಿದು ಬಾಳ್‌ಹೆರ್ಮೋನ್, ಸೆನೀರ್ ಮತ್ತು ಹೆರ್ಮೋನ್ ಪರ್ವತ ಪ್ರಾಂತ್ಯದವರೆಗೂ ನೆಲೆಸಿದರು. ಅವರ ಕುಲದ ಜನರು ಬಹುಸಂಖ್ಯಾತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 5:23
9 ತಿಳಿವುಗಳ ಹೋಲಿಕೆ  

ಬಾ, ವಧುವೇ, ಲೆಬನೋನಿನಿಂದ ಬಾ, ಲೆಬನೋನಿನಿಂದ ನನ್ನೊಡನೆ ಬಾ. ಅಮಾನದ ಶಿಖರಗಳಿಂದ, ಸೆನೀರ್, ಹೆರ್ಮೋನ್ ಶಿಖರಗಳಿಂದ, ಸಿಂಹದ ಗವಿಗಳಿಂದ, ಚಿರತೆಗಳ ಪರ್ವತಗಳಿಂದ ಇಳಿದು ಬಾ.


ಆ ಒಂದಾಗಿರುವಿಕೆಯು ಹೆರ್ಮೋನ್ ಪರ್ವತದಿಂದ ಪ್ರಾರಂಭವಾಗಿ ಚೀಯೋನ್ ಪರ್ವತಗಳ ಮೇಲೆ ಬೀಳುವ ಮಂಜಿನ ಹಾಗೆಯೂ ಇದೆ. ಏಕೆಂದರೆ ಎಲ್ಲಿ ಒಂದಾಗಿರುವಿಕೆಯು ಇದೆಯೋ ಅಲ್ಲಿ ಯೆಹೋವ ದೇವರು ಆಶೀರ್ವಾದವನ್ನೂ, ಯುಗಯುಗಾಂತರಕ್ಕೂ ಜೀವವನ್ನೂ ಅನುಗ್ರಹಿಸುತ್ತಾರೆ.


ಅದರೊಂದಿಗೆ ಗಿಲ್ಯಾದ್, ಗೆಷೂರ್ಯರ, ಮಾಕಾತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ ಸಲೆಕಾವರೆಗೆ ಇರುವ ಇಡೀ ಬಾಷಾನ್ ಪೂರ್ತಿಯಾಗಿ.


ಅವರ ಪಿತೃಗಳ ಮನೆಯಲ್ಲಿರುವ ಯಜಮಾನರು ಯಾರೆಂದರೆ: ಏಫೆರ್, ಇಷ್ಷೀ, ಎಲೀಯೇಲ್, ಅಜ್ರಿಯೇಲ್, ಯೆರೆಮೀಯ, ಹೋದವ್ಯ, ಯೆಹ್ತೀಯೇಲ್. ಇವರು ಪರಾಕ್ರಮಶಾಲಿಗಳಾಗಿಯೂ, ಹೆಸರುಗೊಂಡವರಾಗಿಯೂ, ತಮ್ಮ ಪಿತೃಗಳ ಮನೆಯಲ್ಲಿ ಯಜಮಾನರಾಗಿಯೂ ಇದ್ದರು.


ಸೆನೀರಿನ ತುರಾಯಿ ಮರಗಳಿಂದ ನಿನ್ನ ಹಡಗಿನ ಹಲಗೆಗಳನ್ನೆಲ್ಲಾ ಕಟ್ಟಿದ್ದಾರೆ. ನಿನಗೆ ಸ್ತಂಭಗಳನ್ನು ಮಾಡುವುದಕ್ಕೆ ಲೆಬನೋನಿನಿಂದ ದೇವದಾರುಗಳನ್ನು ತಂದಿದ್ದಾರೆ.


ಕುಟುಂಬಗಳ ಪ್ರಕಾರ ಯೋಸೇಫನ ಪುತ್ರರು: ಮನಸ್ಸೆ, ಎಫ್ರಾಯೀಮ್.


ಅವನ ವೈಭವವು ಚೊಚ್ಚಲ ಹೋರಿಯಂತೆ ಇರುವುದು, ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇರುವುದು. ಇವುಗಳಿಂದ ಜನಾಂಗಗಳನ್ನೆಲ್ಲಾ ಇರಿದು ಒಟ್ಟಿಗೆ ಭೂಮಿಯ ಅಂಚಿನವರೆಗೆ ಓಡಿಸುವನು. ಎಫ್ರಾಯೀಮ್ ಕುಲದ ಹತ್ತು ಸಾವಿರ ಜನರೂ ಇಂಥವರೇ. ಮನಸ್ಸೆ ಕುಲದ ಸಹಸ್ರ ಜನರೂ ಇಂಥವರೇ ಆಗಿದ್ದಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು